ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಶನಿವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ದಂಪತಿ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ವತಿಯಿಂದ ಅವರನ್ನು ಶಲ್ಯ ತೊಡಿಸಿ ಗೌರವಿಸಲಾಯಿತು.

ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯಕ್ಕೆ ಶನಿವಾರ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎನ್. ಕೋಟೀಶ್ವರ್ ಸಿಂಗ್ ದಂಪತಿ ಭೇಟಿ ನೀಡಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ದೇವಾಲಯದ ವತಿಯಿಂದ ಅವರನ್ನು ಶಲ್ಯ ತೊಡಿಸಿ ಗೌರವಿಸಲಾಯಿತು.ಭಾನುವಾರ ಕರ್ನಾಟಕ ಉಚ್ಛ ನ್ಯಾಯಾಲಯದ ನ್ಯಾಯಾಧೀಶರಾದ ನ್ಯಾ.ಇಎಸ್.ಇಂದಿರೇಶ್ ಹಾಗೂ ವಿ. ಶ್ರೀಶಾನಂದ ಅವರು ಭೇಟಿ ನೀಡಿ ದೇವರ ದರ್ಶನ ಪಡೆದರು.ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಸಮರ್ಪಣೆ ಮಾಡಿ ತುಪ್ಪದ ದೀಪ ಬೆಳಗಿದ ಬಳಿ ದೇವರ ಧರ್ಮ ನಡೆಯಲ್ಲಿ ಪ್ರಸಾದ ನೀಡಿ ಶಲ್ಯ ತೊಡಿಸಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ದೇವಾಲಯದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್, ಪುತ್ತೂರು ನ್ಯಾಯಾಲಯದ ನ್ಯಾಯಾಧೀಶ್ ದೇವರಾಜ್, ಪುತ್ತೂರು ವಕೀಲರ ಸಂಘದ ಅಧ್ಯಕ್ಷ ಜಗನ್ನಾಥ್ ರೈ, ವಕೀಲರಾದ ಮಹೇಶ್ ಕಜೆ, ಭಾಸ್ಕರ ಕೋಡಿಂಬಾಳ, ನರಸಿಂಹ ಪ್ರಸಾದ್ ಮೊದಲಾದವರಿದ್ದರು.ಇಂದು ಸೀಯಾಳಾಭಿಷೇಕ: ಲೋಕ ಕಲ್ಯಾಣಾರ್ಥ ಮತ್ತು ಕಾಲಕಾಲಕ್ಕೆ ಮಳೆ, ಬೆಳೆಗಾಗಿ ಹಾಗೂ ದೇಶ ಕಾಯುವ ಸೈನಿಕರಿಗೆ ಹೆಚ್ಚಿನ ಶಕ್ತಿಯನ್ನು ಒದಗಿಸುವಂತೆ ಪ್ರಾರ್ಥಿಸಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮೇ ೧೧ರಂದು ಸೀಯಾಳಾಭಿಷೇಕ ನಡೆಯಲಿದೆ ಎಂದು ದೇವಳದ ಪ್ರಕಟಣೆ ತಿಳಿಸಿದೆ.

ಬೆಳಗ್ಗೆ ೯.೩೦ ರಿಂದ ಸೀಯಾಳಾಭಿಷೇಕ ನಡೆಯಲಿದ್ದು, ಭಕ್ತರು ಸೀಯಾಳವನ್ನು ತಂದೊಪ್ಪಿಸುವAತೆ ಸಮಿತಿಯಿಂದ ಮನವಿ ಮಾಡಲಾಗಿದೆ.