ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ವತಿಯಿಂದ ನಡೆಸಲಾದ ಅಭಿನಂದನಾ ಸಮಾರಂಭ

ಕನ್ನಡಪ್ರಭ ವಾರ್ತೆ ಪುತ್ತೂರು

ಒಂದು ಸಣ್ಣ ವಿಷಯವನ್ನು ಆರಿಸಿಕೊಂಡು ಅದರ ಬಗ್ಗೆ ಆಳವಾದ ಸಂಶೋಧನೆ ಮಾಡುವುದಕ್ಕೆ ಸಾಧ್ಯವಿದೆ. ವಿದ್ಯಾರ್ಥಿಗಳು ಕೃಷಿಕರ ಏಳಿಗೆಗೆ ತನ್ಮೂಲಕ ಸಮಾಜದ ಒಳಿತಿಗೆ ಅಗತ್ಯವಾದ ಸಂಶೋಧನೆಯಲ್ಲಿ ನಿರತರಾಗಬೇಕು ಎಂದು ಕ್ಯಾಂಪ್ಕೋ ಸಂಸ್ಥೆ ಅಧ್ಯಕ್ಷ ಎಸ್.ಆರ್. ಸತೀಶ್ಚಂದ್ರ ಹೇಳಿದರು. ಅವರು ಪುತ್ತೂರಿನ ವಿವೇಕಾನಂದ ಎಂಜಿನಿಯರಿಂಗ್ ಕಾಲೇಜು ವತಿಯಿಂದ ನಡೆಸಲಾದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತಾಡಿದರು. ಕ್ಯಾಂಪ್ಕೋ ಹಾಗೂ ವಿವೇಕಾನಂದ ಸಂಸ್ಥೆಗಳ ಮಧ್ಯೆ ೨೦೦೮ರ ಅಡಕೆ ಯಂತ್ರ ಮೇಳದಿಂದ ಪ್ರಾರಂಭವಾದ ಬಾಂಧವ್ಯವು ಹೀಗೆಯೇ ಮುಂದುವರಿಯಲಿದೆ ಎಂದು ಹೇಳಿದರು. ಅಧ್ಯಕ್ಷತೆ ವಹಿಸಿದ್ದ ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕಲ್ಲಡ್ಕ ಪ್ರಭಾಕರ ಭಟ್ ಮಾತನಾಡಿ, ಯಾವುದೇ ಕ್ಷೇತ್ರದಲ್ಲಿ ಕೆಲಸ ಮಾಡುವಾಗ ಬದ್ಧತೆ, ಪ್ರಾಮಾಣಿಕತೆ ಇರಬೇಕು ಮತ್ತು ಅದಕ್ಕೆ ಸಾಕಷ್ಟು ಸಮಯವನ್ನು ಮೀಸಲಿಡಬೇಕು. ಸರಳತೆಯೇ ಜೀವನವಾಗಬೇಕು, ಕಠಿಣವಾದ ಸಂದರ್ಭದಲ್ಲೂ ಗೆಲ್ಲುತ್ತೇನೆ ಎನ್ನುವಸನ್ಮಾನ ಸ್ವೀಕರಿಸಿದ ಕ್ಯಾಂಪ್ಕೋ ಸಂಸ್ಥೆಯ ನಿರ್ದೇಶಕ ಮಹೇಶ್ ಚೌಟ ಮಾತನಾಡಿ, ಇಲ್ಲಿನ ವಿದ್ಯಾರ್ಥಿಗಳು ಹೆಚ್ಚಿನವರು ಕೃಷಿ ಕುಟುಂಬದಿಂದ ಬಂದವರಾಗಿದ್ದು, ಕೃಷಿ ಕ್ಷೇತ್ರದ ಒಳಿತಿಗೆ ಕೆಲಸ ಮಾಡಬೇಕು ಎಂದರು.

ಸನ್ಮಾನ ಸ್ವೀಕರಿಸಿದ ಇನ್ನೊಬ್ಬ ನಿರ್ದೇಶಕ ಮುರಳೀಕೃಷ್ಣ.ಕೆ.ಎನ್. ಮಾತನಾಡಿ, ಇದು ಮನೆಯ ಮಗನಿಗೆ ಸಲ್ಲಿಸಿದ ಸನ್ಮಾನ ಎಂದರು.

ಮತ್ತೋರ್ವ ನಿರ್ದೇಶಕ ಗಣೇಶ್ ಅವರನ್ನೂ ಈ ಸಂದರ್ಭದಲ್ಲಿ ಗೌರವಿಸಲಾಯಿತು.ವಿವೇಕಾನಂದ ವಿದ್ಯಾವರ್ಧಕ ಸಂಘದ ಉಪಾಧ್ಯಕ್ಷ ಸತೀಶ್ ರಾವ್.ಪಿ. ಮಾತನಾಡಿ, ಶತಮಾನಗಳಷ್ಟು ಇತಿಹಾಸವಿರುವ ವಿವೇಕಾನಂದ ವಿದ್ಯಾ ಸಂಸ್ಥೆಯು ವಿದ್ಯಾರ್ಜನೆಯ ಜತೆಯಲ್ಲಿ ಸಾಮಾಜಿಕ ಜವಾಬ್ಧಾರಿಗಳನ್ನು ನಿಭಾಯಿಸುವ ಬಗ್ಗೆಯೂ ಮಾರ್ಗದರ್ಶನ ನೀಡುತ್ತದೆ ಎಂದರು.

ಎಂಜಿನಿಯರಿಂಗ್ ಕಾಲೇಜು ಪ್ರಾಂಶುಪಾಲ ಮಹೇಶ್‌ಪ್ರಸನ್ನ ಕೆ. ಉಪಸ್ಥಿತರಿದ್ದರು. ಎಂಜಿನಿಯರಿಂಗ್ ಕಾಲೇಜು ಆಡಳಿತ ಮಂಡಳಿಯ ಕೋಶಾಧಿಕಾರಿ ಮುರಳೀಧರ ಭಟ್ ಬಿ., ನಿರ್ದೇಶಕರಾದ ಸತ್ಯನಾರಾಯಣ ಭಟ್, ವಿದ್ಯಾ ಆರ್. ಗೌರಿ ಉಪಸ್ಥಿತರಿದ್ದರು.ಎಂಜಿನಿಯರಿಂಗ್ ಕಾಲೇಜಿನ ನಿರ್ದೇಶಕ ರವಿಕೃಷ್ಣ ಡಿ. ಕಲ್ಲಾಜೆ ಸ್ವಾಗತಿಸಿ, ಅಧ್ಯಕ್ಷ ವಿಶ್ವಾಸ್ ಶೆಣೈ ವಂದಿಸಿದರು. ವೈಷ್ಣವಿ ನಿರ್ವಹಿಸಿದರು.