ವಿವೇಕಾನಂದ ಸಂಸ್ಥೆ ಈ ಬಾರಿಯೂ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದು, ಈ ಸಾಧನೆ ಇನ್ನಷ್ಡು ಉತ್ತುಂಗಕ್ಕೇರಲಿ. ಶಿಕ್ಷಣ ಬದುಕಿನ ಚಿಂತನೆಗೆ ಪೂರಕವಾಗಿರಲಿ ಎಂದು ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಎ. ಸತ್ಯನಾರಾಯಣ ಪ್ರಸಾದ್ ಹೇಳಿದರು.

ಪುತ್ತೂರು: ವಿವೇಕಾನಂದ ಸಂಸ್ಥೆ ಈ ಬಾರಿಯೂ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದು, ಈ ಸಾಧನೆ ಇನ್ನಷ್ಡು ಉತ್ತುಂಗಕ್ಕೇರಲಿ. ಶಿಕ್ಷಣ ಬದುಕಿನ ಚಿಂತನೆಗೆ ಪೂರಕವಾಗಿರಲಿ ಎಂದು ಪುತ್ತೂರು ವಿವೇಕಾನಂದ ಪದವಿ ಕಾಲೇಜಿನ ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಎ. ಸತ್ಯನಾರಾಯಣ ಪ್ರಸಾದ್ ಹೇಳಿದರು.

ವಿವೇಕಾನಂದ ಕಲಾ, ವಿಜ್ಞಾನ ಮತ್ತು ವಾಣಿಜ್ಯ (ಸ್ವಾಯತ್ತ) ಮಹಾವಿದ್ಯಾಲಯ ಪುತ್ತೂರು ಇಲ್ಲಿನ ಶಿಕ್ಷಕ-ರಕ್ಷಕ ಸಂಘ ಹಾಗೂ ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ನಡೆದ ಸಂಕಲ್ಪ- ಉನ್ನತ ಶಿಕ್ಷಣದ ಕಡೆಗೆ ಪಯಣ- ನೂತನ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು .

ಕಾಲೇಜು ಆಡಳಿತ ಮಂಡಳಿಯ ಸಂಚಾಲಕ ಮುರಳಿಕೃಷ್ಣ ಕೆ.ಎನ್. ಮಾತನಾಡಿ, ಒಳ್ಳೆಯ ಸಂಸ್ಕಾರದೊಂದಿಗೆ ಬದುಕನ್ನು ರೂಪಿಸಿಕೊಳ್ಳಲು ಈ ಸಂಸ್ಥೆ ಮಾದರಿ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ ಡಾ. ಶ್ರೀಪತಿ ಕಲ್ಲೂರಾಯ ಮಾತನಾಡಿ, ವಿದ್ಯಾರ್ಥಿಗಳು ಪಾಶ್ಚಾತ್ಯ ಬದುಕಿಗೆ ಮಾರು ಹೋಗದೆ, ಸನಾತನ ಧರ್ಮ ಪಾಲಿಸಬೇಕು ಎಂದರು.

ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಶಿಕ್ಷಣ ನೀಡುವ ಸಲುವಾಗಿ ಶುರುವಾದ ಲೇಜುವಿದ್ಯಾರ್ಥಿಗಳ ಬದುಕಿಗೆ ಇಂದು ಭದ್ರ ಬುನಾದಿಯನ್ನು ನೀಡಿದೆ ಎಂದು ಪ್ರಾಂಶುಪಾಲ ಪ್ರೊ. ಶ್ರೀಕೃಷ್ಣ ಗಣರಾಜ ಭಟ್ ಹೇಳಿದರು. ಕನ್ನಡ ವಿಭಾಗದ ಮುಖ್ಯಸ್ಥ ಮತ್ತು ವಿಶೇಷ ಅಧಿಕಾರಿ, ಆಡಳಿತ ವಿಭಾಗ ಡಾ. ಮನಮೋಹನ ಎಂ. ಶುಭ ಸಂದೇಶ ನೀಡಿದರು. ಶೈಕ್ಷಣಿಕ ವರ್ಷದ ಪದವಿಪೂರ್ವ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಗೌರವ ವಿಸಲಾಯಿತು. ಅರ್ಥಶಾಸ್ತ್ರ ವಿಭಾಗದ ಮುಖ್ಯಸ್ಥ ಮತ್ತು ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಅರುಣ್ ಪ್ರಕಾಶ್ ಸ್ವಾಗತಿಸಿ, ಗಣಕ ಶಾಸ್ತ್ರ ವಿಭಾಗದ ಉಪನ್ಯಾಸಕ ಸೂರ್ಯನಾರಾಯಣ ವಂದಿಸಿದರು. ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ಡಾ. ವಿದ್ಯಾ ಎಸ್ ನಿರೂಪಿಸಿದರು.