ಮಾನಸ ಶಿಕ್ಷಣ ಸಂಸ್ಥೆಯಿಂದ ಗುಣಮಟ್ಟದ ಶಿಕ್ಷಣ: ವೆಂಕಟೇಗೌಡ

| Published : Feb 11 2024, 01:46 AM IST

ಸಾರಾಂಶ

ಮಾನಸ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ಆರಕ್ಷಕ ವೃತ್ತ ನಿರೀಕ್ಷಕ ವೆಂಕಟೇಗೌಡ ಹೇಳಿದರು.

ಮಾನಸ ವಿದ್ಯಾಸಂಸ್ಥೆಯಿಂದ ಮಾನಸೋತ್ಸವ

ಕನ್ನಡಪ್ರಭ ವಾರ್ತೆ ಮದ್ದೂರು

ಮಾನಸ ಶಿಕ್ಷಣ ಸಂಸ್ಥೆ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ಎಂದು ಆರಕ್ಷಕ ವೃತ್ತ ನಿರೀಕ್ಷಕ ವೆಂಕಟೇಗೌಡ ಹೇಳಿದರು.

ತಾಲೂಕಿನ ಬೆಸಗರಹಳ್ಳಿ ಮಾನಸ ವಿದ್ಯಾಸಂಸ್ಥೆ ಹಾಗೂ ಮಾನಸ ಸಮೂಹ ಶಿಕ್ಷಣ ಸಂಸ್ಥೆಗಳ ವತಿಯಿಂದ ಆಯೋಜಿಸಿದ್ದ ಮಾನಸೋತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಡೆಸುವುದು ಇಂದು ಸವಾಲಿನ ಕೆಲಸ. ಅದರಲ್ಲೂ ನಗರ ಪ್ರದೇಶಗಳಿಗೆ ಹೋಲಿಕೆ ಮಾಡಿಕೊಂಡರೆ ಮಾನಸ ವಿದ್ಯಾಸಂಸ್ಥೆ ಗ್ರಾಮೀಣ ಭಾಗದಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಮನೆ ಮಾತಾಗಿದೆ ಎಂದು ಶ್ಲಾಘಿಸಿದರು.

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಚೆಲುವಯ್ಯ ಮಾತನಾಡಿ, ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಫಲಿತಾಂಶದಲ್ಲಿ ಸಂಸ್ಥೆ ತಾಲೂಕಿನಲ್ಲಿ ಹೊಸ ಮೈಲುಗಲ್ಲನ್ನು ಸೃಷ್ಟಿಸಿದೆ. ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳಿಗೆ ಕರಾಟೆ, ಸಂಗೀತ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ ಸೇರಿ ಇತರ ಚಟುವಟಿಕೆಗಳಲ್ಲಿ ತೊಡಗಿಸುವ ಮೂಲಕ ಮಕ್ಕಳಲ್ಲಿ ಮನೋಸ್ಥೈರ್ಯ ತುಂಬುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಸಂಸ್ಥೆ ಅಧ್ಯಕ್ಷ ವಿ.ಕೆ. ಜಗದೀಶ್ ಮಾತನಾಡಿ, ಸಂಸ್ಥೆಯಿಂದ ಅತ್ಯಧಿಕ ಅಂಕಗಳಿಸಿ ಸರ್ಕಾರಿ ಕೋಟಾದಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಒಂದು ಲಕ್ಷ ರು. ನಗದು ಪುರಸ್ಕಾರವನ್ನು ನೀಡಲಾಗುವುದು ಎಂದು ಘೋಷಿಸಿದರು. ಇದೇ ವೇಳೆ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ವಿದ್ಯಾರ್ಥಿಗಳು ವಿವಿಧ ಹಾಡುಗಳಿಗೆ ನೃತ್ಯ ಪ್ರದರ್ಶನ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್. ಶಿವರಾಮೇಗೌಡ, ರಾಜ್ಯ ವಕೀಲರ ಪರಿಷತ್ ಸದಸ್ಯ ಮಧುಸೂದನ್, ನಿವೃತ್ತ ಪ್ರಾಂಶುಪಾಲ ಎ.ಎಸ್. ರವಿ, ಬಿಇಒ ಸಿ.ಎಚ್.ಕಾಳೀರಯ್ಯ, ವಿಷಯ ಪರವೀಕ್ಷಕ ನಂಜರಾಜು, ಶಿಕ್ಷಣ ಸಂಯೋಜಕ ಲೋಕೇಶ್, ಸಂಸ್ಥೆ ಕಾರ್ಯದರ್ಶಿ ಎಚ್.ಪಿ. ನಾಗರಾಜು, ಶೈಕ್ಷಣಿಕ ಸಲಹೆಗಾರ ಎಚ್‌.ಪಿ.ನಿಂಗರಾಜು, ಪ್ರಾಂಶುಪಾಲರು ಟಿ.ಸಿ. ಪ್ರವೀಣ್ ಕುಮಾರ್, ಆರ್. ಪಲ್ಲವಿ, ಮುಖ್ಯ ಶಿಕ್ಷಕರಾದ ಬಿ.ಎಂ. ಬಸವರಾಜು, ಎನ್. ಶರತ್, ಬಿ.ವೈ. ರಮೇಶ್, ಕಲಾವತಿ ಸೇರಿ ಇತರರಿದ್ದರು.

.