ಬಹುವರ್ಷಗಳಿಂದ ಈ ಗಲ್ಲಿಯಲ್ಲಿ ಅಂಗನವಾಡ ಕಟ್ಟಡ ಬೇಡಿಕೆ ಇತ್ತು. ಈವರೆಗೆ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿತ್ತು. ಇಂದು ಸುಸಜ್ಜಿತ ಕಟ್ಟಡದಲ್ಲಿ ಅಂಗನವಾಡಿ ನಿರ್ಮಾಣಗೊಂಡಿದೆ.
ಇಸ್ಲಾಂಗಲ್ಲಿ, ಕಾಳಮ್ಮ ನಗರದಲ್ಲಿ ನೂತನ ಅಂಗನವಾಡಿ ಕೇಂದ್ರ ಉದ್ಘಾಟನೆ ಮಾಡಿದ ಶಾಸಕ
ಕನ್ನಡಪ್ರಭ ವಾರ್ತೆ ಯಲ್ಲಾಪುರಬಹುವರ್ಷಗಳಿಂದ ಈ ಗಲ್ಲಿಯಲ್ಲಿ ಅಂಗನವಾಡ ಕಟ್ಟಡ ಬೇಡಿಕೆ ಇತ್ತು. ಈವರೆಗೆ ಬಾಡಿಗೆ ಕಟ್ಟಡದಲ್ಲಿ ಅಂಗನವಾಡಿ ನಡೆಯುತ್ತಿತ್ತು. ಇಂದು ಸುಸಜ್ಜಿತ ಕಟ್ಟಡದಲ್ಲಿ ಅಂಗನವಾಡಿ ನಿರ್ಮಾಣಗೊಂಡಿದೆ ಎಂದು ಶಾಸಕ ಶಿವರಾಮ ಹೆಬ್ಬಾರ್ ಹೇಳಿದರು.
ಮಂಗಳವಾರ ಪಟ್ಟಣದ ಇಸ್ಲಾಂ ಗಲ್ಲಿ ಹಾಗೂ ಕಾಳಮ್ಮ ನಗರದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ, ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿ, ಕಾಳಮ್ಮನಗರದ ಸರ್ಕಾರಿ ಪ್ರೌಢಶಾಲೆಯ ಪಕ್ಕದ ರಸ್ತೆಗೆ ೧೦ ಲಕ್ಷ ರೂ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ, ಬಾಳಗಿಮನೆಯ ದತ್ತಮಂದಿರದ ಪಕ್ಕದ ರಸ್ತೆಯ ನಿರ್ಮಾಣಕ್ಕೂ ಹಾಗೂ ಗಾಂಧೀನಗರದ ಶ್ರೀಪಾದ ಹೆಗಡೆ ಮತ್ತು ಪದ್ಮಾ ಛಲವಾದಿ ಮನೆಯವರೆಗಿನ ಸಿಸಿ ರಸ್ತೆಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.ಸಮಾಜದಲ್ಲಿ ಪ್ರತಿಯೊಬ್ಬ ಮಕ್ಕಳಿಗೂ ಉತ್ತಮ ಗುಣಮಟ್ಟದ ಶಿಕ್ಷಣ ಪಡೆಯುವಂತೆ ವ್ಯವಸ್ಥೆ ಕಲ್ಪಿಸಲೇಬೇಕಾಗಿದೆ. ಅಂದಾಗ ಮಾತ್ರ ಸುಶಿಕ್ಷಿತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದ ಅವರು, ಮೂರು ಕಡೆಗಳಲ್ಲಿ ನಿರ್ಮಾಣವಾಗಲಿರುವ ಸಿಸಿ ರಸ್ತೆಯ ಕಾಮಗಾರಿ ಉತ್ತಮ ಗುಣಮಟ್ಟದಲ್ಲಿ ನಿರ್ಮಾಣ ಮಾಡುವಂತೆ ಎಂಜಿನಿಯರ್ ಮತ್ತು ಗುತ್ತಿಗೆದಾರರಿಗೆ ತಾಕೀತು ಮಾಡಿದರು.
ಈ ಸಂದರ್ಭ ಜಿಪಂ ಮಾಜಿ ಸದಸ್ಯ ವಿಜಯ ಮಿರಾಶಿ, ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ವಿ.ಎಸ್. ಭಟ್ಟ, ಗ್ಯಾರಂಟಿ ಅನುಷ್ಠಾನ ಸಮಿತಿಯ ತಾಲೂಕಾಧ್ಯಕ್ಷ ಉಲ್ಲಾಸ್ ಶಾನಭಾಗ, ಪಪಂ ಅಧ್ಯಕ್ಷೆ ನರ್ಮದಾ ನಾಯ್ಕ, ಉಪಾಧ್ಯಕ್ಷ ಅಮಿತ ಅಂಗಡಿ, ಮಾಜಿ ಅಧ್ಯಕ್ಷೆ ಸುನಂದಾ ದಾಸ್, ಕಾಂಗ್ರೆಸ್ ನಗರ ಘಟಕಾಧ್ಯಕ್ಷ ಸತೀಶ ನಾಯ್ಕ, ಪಪಂ ಸದಸ್ಯೆ ರೇಮಾ ಕಳ್ಳಿಕೇರಿ, ಪಪಂ ಮುಖ್ಯಾಧಿಕಾರಿ ಕುಮಾರ ನಾಯ್ಕ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಅಧಿಕಾರಿಗಳು ಉಪಸ್ಥಿತರಿದ್ದರು.