30 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ. ಶಿಕ್ಷಣದ ಗುಣಮಟ್ಟ ಮತ್ತು ಉತ್ತಮ ನಿರ್ವಹಣೆಯೊಂದಿಗೆ ಮದರ್ ತೆರೆಸಾ ಸಂಸ್ಥೆ ಮುನ್ನಡೆಸುತ್ತಿರುವ ಆಡಳಿತ ಮಂಡಳಿಯ ಪರಿಶ್ರಮ ನಿಜಕ್ಕೂ ಮೆಚ್ಚುವಂತಹದ್ದು ಎಂದು ಕರ್ಣಾಟಕ ಬ್ಯಾಂಕಿನ ಉಡುಪಿ ಪ್ರಾದೇಶಿಕ ಕಚೇರಿ ಸಹಾಯಕ ಮಹಾಪ್ರಬಂಧಕರು ಹಾಗೂ ಪ್ರಾದೇಶಿಕ ಮುಖ್ಯಸ್ಥ ರಮೇಶ್ ವೈದ್ಯ ಹೇಳಿದರು.
ಶಂಕರನಾರಾಯಣ: 30 ವರ್ಷಗಳಿಂದ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿರುವ ಸಂಸ್ಥೆಯ ಕಾರ್ಯ ಶ್ಲಾಘನೀಯ. ಶಿಕ್ಷಣದ ಗುಣಮಟ್ಟ ಮತ್ತು ಉತ್ತಮ ನಿರ್ವಹಣೆಯೊಂದಿಗೆ ಮದರ್ ತೆರೆಸಾ ಸಂಸ್ಥೆ ಮುನ್ನಡೆಸುತ್ತಿರುವ ಆಡಳಿತ ಮಂಡಳಿಯ ಪರಿಶ್ರಮ ನಿಜಕ್ಕೂ ಮೆಚ್ಚುವಂತಹದ್ದು ಎಂದು ಕರ್ಣಾಟಕ ಬ್ಯಾಂಕಿನ ಉಡುಪಿ ಪ್ರಾದೇಶಿಕ ಕಚೇರಿ ಸಹಾಯಕ ಮಹಾಪ್ರಬಂಧಕರು ಹಾಗೂ ಪ್ರಾದೇಶಿಕ ಮುಖ್ಯಸ್ಥ ರಮೇಶ್ ವೈದ್ಯ ಹೇಳಿದರು.ಇಲ್ಲಿನ ಮದರ್ ತೆರೆಸಾ ಶಿಕ್ಷಣ ಸಂಸ್ಥೆಯಲ್ಲಿ ಪ್ರೌಢಶಾಲಾ ಹಾಗೂ ಪದವಿಪೂರ್ವ ವಿಭಾಗದ ವಾರ್ಷಿಕೋತ್ಸವ ಆವಿರ್ಭವ 2026-27 ಸಂಭ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.
ಸ್ಪರ್ಧಾತ್ಮಕ ಜಗತ್ತಿಗೆ ಸಿದ್ಧರಾಗಬೇಕು: ಸಂಸ್ಥೆಯ 2016ನೇ ಸಾಲಿನ ಹಳೆವಿದ್ಯಾರ್ಥಿ ಹಾಗೂ ಅಕ್ಷಯಕಲ್ಪ ಆರ್ಗ್ಯಾನಿಕ್ ಸಂಸ್ಥೆಯ ಡೈರೆಕ್ಟ್ ಡಿಸ್ಟ್ರಿಬ್ಯೂಷನ್ ವಿಭಾಗದ ಮುಖ್ಯಸ್ಥ ಚಂದನ್ ಶೆಟ್ಟಿ ಅವರು, ವಿದ್ಯಾರ್ಥಿಗಳಿಗೆ ಬದಲಾಗುತ್ತಿರುವ ಸ್ಪರ್ಧಾತ್ಮಕ ಜಗತ್ತಿಗೆ ಈಗಿನಿಂದಲೇ ಸಿದ್ಧರಾಗಬೇಕು, ಕೇವಲ ಅಂಕಗಳ ಗಳಿಕೆಯಷ್ಟೇ ಮುಖ್ಯವಲ್ಲ, ಜ್ಞಾನ, ಕೌಶಲ, ಆತ್ಮವಿಶ್ವಾಸ ಹಾಗೂ ನಿರಂತರ ಪರಿಶ್ರಮದಿಂದ ಜೀವನದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ತಿಳಿಸಿದರು.ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕ ಶಮಿತಾ ರಾವ್ ಹಾಗೂ ರೆನಿಟಾ ಲೋಬೋ ಅವರು, ಸಂಸ್ಥೆಯ 28 ವರ್ಷಗಳ ಸವಾಲಿನ ಹಾಗೂ ಸಾರ್ಥಕ ಪಯಣವನ್ನು ಸ್ಮರಿಸಿದರು. ಸಂಸ್ಥೆಯ ಬೆಳವಣಿಗೆಯಲ್ಲಿ ಪೋಷಕರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನೀಡಿದ ನಿರಂತರ ಸಹಕಾರ ಮತ್ತು ಪ್ರೋತ್ಸಾಹಕ್ಕೆ ಕೃತಜ್ಞತೆ ಸಲ್ಲಿಸಿದರು.ಸಂಸ್ಥೆಯ ರಾಜ್ಯಮಟ್ಟದ ಸಾಧಕರಾದ ಆಕಾಶ್ ಪೂಜಾರಿ ಹಾಗೂ ಸಮಿತ್ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಪ್ರಾಂಶುಪಾಲೆ ಜೈಸನ್ ಲೂಯಿಸ್ ಅವರು ವರದಿ ವಾಚಿಸಿದರು.ವಿದ್ಯಾರ್ಥಿಗಳು ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸಿದರು. ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಸಾನ್ವಿ ಶೆಟ್ಟಿ ನಿರೂಪಿಸಿದರು. ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದ ತನ್ವಿ ಸ್ವಾಗತಿಸಿದರು. ಉಪನ್ಯಾಸಕಿ ವೈಶಾಲಿ ಶೆಟ್ಟಿ ಅತಿಥಿಗಳ ಪರಿಚಯ ಮಾಡಿದರು. ರಕ್ಷಿತಾ ವಂದಿಸಿದರು.