ಪರಿಣಾಮಕಾರಿ ಬೋಧನೆಯಿಂದ ಗುಣಮಟ್ಟದ ಶಿಕ್ಷಣ: ಪುಟ್ಟಪ್ಪ ಹೆಗ್ಡೆ

| Published : Jul 06 2025, 01:48 AM IST

ಸಾರಾಂಶ

ಶೃಂಗೇರಿ: ಸರ್ಕಾರಗಳು ಶೈಕ್ಷಣಿಕ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದ್ದು ,ವಿವಿಧ ಯೋಜನೆಗಳ ಮೂಲಕ ಸೌಲಭ್ಯ ಕಲ್ಪಿಸಿಕೊಡುತ್ತಿದೆ. ಶಾಲೆಗಳಲ್ಲಿ ಪರಿಣಾಮಕಾರಿ ಬೋಧನೆಯಿಂದ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯ ಎಂದು ನೆಮ್ಮಾರು ಗ್ರಾಮ ಪಂಚಾಯಿತಿ ಸದಸ್ಯ ಎಚ್.ಜಿ .ಪುಟ್ಟಪ್ಪ ಹೆಗ್ಡೆ ಹೇಳಿದರು.

ತಾಲೂಕಿನ ನೆಮ್ಮಾರು ಪಂಚಾಯಿತಿ ನೆಮ್ಮಾರು ಸರ್ಕಾರಿ ಪ್ರೌಢ ಶಾಲಾವರಣದಲ್ಲಿ ಆಯೋಜಿಸಲಾಗಿದ್ದ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದೈಹಿಕ ಶಿಕ್ಷಕರು ಮಕ್ಕಳಿಗೆ ಕ್ರೀಡಾ ಚಟುವಟಿಕೆಗಳಿಗೆ ಉತ್ತಮ ತರಬೇತಿ ನೀಡಿ ಕ್ರೀಡಾಪಟುಗಳನ್ನಾಗಿ ರೂಪಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಶಾಲೆಗಳಲ್ಲಿ ಅಗತ್ಯ ಸುಸಜ್ಜಿತ ಕ್ರೀಡಾಂಗಣಗಳಿದ್ದು ಕ್ರೀಡಾಚಟುವಟಿಕೆಗಳಿಗೆ ಉತ್ತೇಜನ ನೀಡುತ್ತಿವೆ ಎಂದು ಹೇಳಿದರು.

ಸರ್ಕಾರಿ ಶಾಲೆಗಳ ಬಗ್ಗೆ ಕಡೆಗಣನೆ ಬೇಡ. ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ, ಉತ್ತಮ ಸೌಲಭ್ಯಗಳಿದ್ದರೂ ವಿದ್ಯಾರ್ಥಿಗಳ ಕೊರತೆ ಕಾಣುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸರ್ಕಾರಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪುತ್ತಿವೆ ಈ ಬಗ್ಗೆ ಗಂಭೀರವಾಗಿ ಚಿಂತಿಸ ಬೇಕಿದೆ ಎಂದರು.

ಇದೇ ಸಂದರ್ಭದಲ್ಲಿ ಬೇಗಾರು ಹಾಗೂ ತೆಕ್ಕೂರು ಶಾಲೆಗಳಲ್ಲಿ ದೈಹಿಕ ಶಿಕ್ಷಕರಾಗಿ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಣ ಶಿಕ್ಷಕ ಎನ್.ಸುರೇಶ್ಅ ವರನ್ನು ಸನ್ಮಾನಿಸಿ ಬೀಳ್ಕೊಡಲಾಯಿತು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಶ್ರೀನಾಥ್, ಸಿದ್ದರಾಜು, ಡಾ.ಬಿ.ಆರ್ ಗಂಗಾಧರಪ್ಪ ಮತ್ತಿತರರು ಇದ್ದರು.

2 ಶ್ರೀ ಚಿತ್ರ 2-

ಶೃಂಗೇರಿ ನೆಮ್ಮಾರು ಸರ್ಕಾರಿ ಪ್ರೌಡಶಾಲಾವರಣದಲ್ಲಿ ನಡೆದ ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಕಾರ್ಯಾಗಾರದಲ್ಲಿ ನಿವೃತ್ತಿ ಹೊಂದಿದ ದೈಹಿಕ ಶಿಕ್ಷಣ ಶಿಕ್ಷಕ ಸುರೇಶ್‌ ಅವರನ್ನು ಸನ್ಮಾನಿಯಲಾಯಿತು.