ಸಾರಾಂಶ
ರಾಮನಗರ: ನಮ್ಮ ಕ್ಲಿನಿಕ್‌ನಲ್ಲಿ ಸಾರ್ವಜನಿಕರಿಗೆ ಗುಣಮಟ್ಟದ ಸೇವೆ ನೀಡುವಂತೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್ ತಿಳಿಸಿದರು.
ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಹಯೋಗದಲ್ಲಿ ನಗರದ ಹಳೆಯ ಜಿಲ್ಲಾ ಆಸ್ಪತ್ರೆಯ ಆವರಣದಲ್ಲಿ ಇತ್ತೀಚೆಗೆ ನೂತನ ನಮ್ಮ ಕ್ಲಿನಿಕ್ ಉದ್ಘಾಟನೆ ಹಾಗೂ ಅತಿಸಾರ ತಡೆಗಟ್ಟುವಿಕೆ ಅಭಿಯಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಅತಿಸಾರ ತಡೆಗಟ್ಟುವಿಕೆ ಅಭಿಯಾನವನ್ನು ಜುಲೈ-31ರವರೆಗೆ ಆಯೋಜಿಸಿದ್ದು, ಅಭಿಯಾನದಲ್ಲಿ ಜಿಲ್ಲಾದ್ಯಂತ ಐದು ವರ್ಷದ ಒಳಗಿನ ಮಕ್ಕಳಿಗೆ ಆಶಾ ಕಾರ್ಯಕರ್ತೆಯರು ಮನೆಮನೆಗೆ ತೆರಳಿ ಸಮೀಕ್ಷೆ ನಡೆಸಿ ಪ್ರತಿದಿನ ವರದಿ ನೀಡಿಬೇಕು ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಿರಂಜನ್ ಮಾತನಾಡಿ, ಒಂದು ಮಗುವಿಗೆ ಎರಡು ಪ್ಯಾಕೆಟ್ ಒಆರ್‌ಎಸ್ ಮತ್ತು ಒಂದು ಸ್ಟಿçಪ್ ಜಿಂಕ್ ಮಾತ್ರೆ ಕೊಡುತ್ತಾರೆ. ಇದನ್ನು ಮುನ್ನೆಚ್ಚರಿಕಾ ಕ್ರಮವಾಗಿ ನೀಡುತ್ತಿದ್ದು, ಭೇದಿ ಆದಲ್ಲಿ ಮಾತ್ರ ಒಆರ್‌ಎಸ್ ಮತ್ತು ಜಿಂಕ್ ಮಾತ್ರೆಯನ್ನು 14 ದಿನಗಳವರೆಗೆ ಉಪಯೋಗಿಸಬೇಕು. ಈ ಮಾಹಿತಿಯು ಪ್ರತಿಯೊಬ್ಬ ಪಾಲಕರಿಗೂ ನೀಡಲಾಗುತ್ತಿದೆ. ಗುಣಮುಖವಾಗದಿದ್ದಲ್ಲಿ ತಕ್ಷಣವೇ ಹತ್ತಿರದ ಸರ್ಕಾರಿ ಆಸ್ಪತ್ರೆಗೆ ತೋರಿಸಬೇಕು. ಅತಿಸಾರದಿಂದ ಉಂಟಾಗುವ ತಡೆಗಟ್ಟಬಹುದಾದ ಮರಣವನ್ನು ತಪ್ಪಿಸುವುದು ಅಭಿಯಾನದ ಉದ್ದೇಶವಾಗಿದೆ ಎಂದರು.ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ವಿ.ರಾಜು ಮಾತನಾಡಿ, ಅತಿಸಾರ ದಿಂದ ಶೂನ್ಯ ಮರಣ ಎಂಬ ಉದ್ದೇಶ ಇಟ್ಟುಕೊಂಡು ಕಾರ್ಯಕ್ರಮ ರೂಪಿಸಲಾಗಿದೆ. ಗ್ರಾಮ ಆರೋಗ್ಯ ದಿನಾಚರಣೆ, ಗ್ರಾಮ ಆರೋಗ್ಯ ನೈರ್ಮಲ್ಯ ಸಮಿತಿ, ಅಂಗನವಾಡಿ ಮತ್ತು ಶಾಲೆಗಳಲ್ಲಿ, ವಸತಿ ನಿಲಯಗಳಲ್ಲಿ ಎಲ್ಲ ಸ್ವಸಹಾಯ ಗುಂಪುಗಳಲ್ಲಿ ಸಭೆಯನ್ನು ಏರ್ಪಡಿಸಿ ಮಾಹಿತಿ ನೀಡಲಾಗುತ್ತಿದೆ. ಸ್ವಚ್ಛತೆ ಬಗ್ಗೆ ಮತ್ತು ಕೈ ತೊಳೆಯುವ ವಿಧಾನಗಳ ಬಗ್ಗೆ ಮಾಹಿತಿ ಕೊಡಲಾಗುತ್ತಿದೆ. ಇದು ರಾಜ್ಯ ಮತ್ತು ಕೇಂದ್ರ ಸರ್ಕಾರದ ಉತ್ತಮ ಯೋಜನೆಯಾಗಿದೆ ಎಂದು ತಿಳಿಸಿದರು.
ಜಿಲ್ಲಾ ಆರೋಗ್ಯಶಿಕ್ಷಣಾಧಿಕಾರಿ ಕೆ.ಜೆ.ಅರ್ಪಿತಾ ಮಾತನಾಡಿ, ಅತಿಸಾರದ ನಿರ್ವಹಣೆಯೊಂದಿಗೆ ನೈರ್ಮಲ್ಯ ಚಟುವಟಿಕೆಗಳನ್ನು ನಡೆಸಲಾಗುತ್ತದೆ. ಶಾಲೆಗಳಲ್ಲಿ ಕೈತೊಳೆಯುವ ಪ್ರಾತ್ಯಕ್ಷತೆ ಮಾಡಲಾಗುತ್ತಿದೆ ಎಂದರು.ರಾಮನಗರ ನಗರಸಭೆ ಉಪಾಧ್ಯಕ್ಷರಾದ ಆಯೆಷಾ ಬಾನು, ಜಿಲ್ಲಾ ಶಸ್ತ್ರ ಚಿಕಿತ್ಸಕರಾದ ಡಾ. ಮಂಜುನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಕಿರಣ್ ಶಂಕರ್, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ. ಕುಮಾರ್, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಪದ್ಮಾವತಿ, ತಾಲೂಕು ಆರೋಗ್ಯಾಧಿಕಾರಿ ಡಾ. ಉಮಾ, ನಮ್ಮ ಕ್ಲಿನಿಕ್ ಸಿಬ್ಬಂದಿ ಮತ್ತು ಸಾರ್ವಜನಿಕರು ಹಾಜರಿದ್ದರು.
29ಕೆಆರ್ ಎಂಎನ್ 5.ಜೆಪಿಜಿರಾಮನಗರದ ಹಳೆಯ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನೂತನ ನಮ್ಮ ಕ್ಲಿನಿಕ್ ಅನ್ನು ಶಾಸಕ ಇಕ್ಬಾಲ್ ಹುಸೇನ್ ಉದ್ಘಾಟನೆ ಮಾಡಿದರು.