ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಬೋಧನೆ ಮುಖ್ಯ: ಪ್ರೊ.ಪ್ರಕಾಶ ಹೊಸಮನಿ

| Published : May 20 2024, 01:30 AM IST

ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಬೋಧನೆ ಮುಖ್ಯ: ಪ್ರೊ.ಪ್ರಕಾಶ ಹೊಸಮನಿ
Share this Article
  • FB
  • TW
  • Linkdin
  • Email

ಸಾರಾಂಶ

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲಿಯುವ ಎಲ್ಲಾ ವಿದ್ಯಾರ್ಥಿಗಳಿಗೆ ಕೌಶಲ್ಯ ಮತ್ತು ಗುಣಮಟ್ಟದ ಬೋಧನೆ ದೊರೆಯಬೇಕು ಎಂದು ಕಾಲೇಜು ಶಿಕ್ಷಣ ಇಲಾಖೆ ಧಾರವಾಡ ಪ್ರಾದೇಶಿಕ ಕೇಂದ್ರದ ಜಂಟಿ ನಿರ್ದೇಶಕರಾದ ಪ್ರೊ.ಪ್ರಕಾಶ ಹೊಸಮನಿ ಹೇಳಿದರು.

ಕನ್ನಡಪ್ರಭ ವಾರ್ತೆ ಬಾಗಲಕೋಟೆ

ರಾಜ್ಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಲಿಯುವ ಎಲ್ಲಾ ವಿದ್ಯಾರ್ಥಿಗಳಿಗೆ ಕೌಶಲ್ಯ ಮತ್ತು ಗುಣಮಟ್ಟದ ಬೋಧನೆ ದೊರೆಯಬೇಕು.ಇದರಿಂದ ವಿದ್ಯಾರ್ಥಿಗಳ ಕಲಿಕಾ ಮಟ್ಟವು ಉನ್ನತ ಶ್ರೇಣಿಗೆ ತಲುಪಿ ಸಮಾಜದಲ್ಲಿ ಸಾಧಕರಾಗಲು ಸಾಧ್ಯವಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಧಾರವಾಡ ಪ್ರಾದೇಶಿಕ ಕೇಂದ್ರದ ಜಂಟಿ ನಿರ್ದೇಶಕರಾದ ಪ್ರೊ.ಪ್ರಕಾಶ ಹೊಸಮನಿ ಹೇಳಿದರು.

ಅವರು ಬಾಗಲಕೋಟೆ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಭೇಟಿ ನೀಡಿ, ನಂತರ ಬೋಧಕರೊಂದಿಗೆ ಉನ್ನತ ಶಿಕ್ಷಣದಲ್ಲಿ ಗುಣಮಟ್ಟದ ಬೋಧನೆ ಕುರಿತು ಚರ್ಚಿಸಿ ಮಾತನಾಡಿದರು. ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರ ಪರಿಶ್ರಮದಿಂದ ಕಾಲೇಜುಗಳು ಉನ್ನತ ಮಟ್ಟದಲ್ಲಿ ಬೆಳೆಯುತ್ತವೆ ಎಂದರು

ಪ್ರಾಚಾರ್ಯರಾದ ಡಾ.ಅರುಣಕುಮಾರ ಗಾಳಿ ಅವರು ಮಾತನಾಡಿ, ನಮ್ಮ ಜಂಟಿ ನಿರ್ದೇಶಕರ ಮಾರ್ಗದರ್ಶನದೊಂದಿಗೆ ಕಾಲೇಜಿನ ವಿದ್ಯಾರ್ಥಿಗಳಿಗೆ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳೊಂದಿಗೆ ಉತ್ತಮ ಶಿಕ್ಷಣ ನೀಡುವಲ್ಲಿ ನಮ್ಮ ಕಾಲೇಜಿನ ಸರ್ವ ಸಿಬ್ಬಂದಿಯವರ ಪ್ರಾಮಾಣಿಕ ಪರಿಶ್ರಮವಿದೆ ಎಂದರು. ಕಾಲೇಜಿನ ಪರವಾಗಿ ಜಂಟಿ ನಿರ್ದೇಶಕರಾದ ಪ್ರೊ.ಪ್ರಕಾಶ ಹೊಸಮನಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು. ಕಾಲೇಜಿನ ಐಕ್ಯೂಎಸಿ ಸಂಚಾಲಕ ಪ್ರೊ.ಅಜೀತ್ ನಾಗರಾಳೆ, ಡಾ.ಜಿ.ಜಿ.ಹಿರೇಮಠ ಸೇರಿದಂತೆ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.