ಸಾರಾಂಶ
ಮೂಡಲಗಿ: ಗದ್ದೆಯಲ್ಲಿ ನೀರು ಹಾಯಿಸುವ ಸುಲುವಾಗಿ ಮೂವರು ಮಧ್ಯೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಮೂಡಲಗಿ: ಗದ್ದೆಯಲ್ಲಿ ನೀರು ಹಾಯಿಸುವ ಸುಲುವಾಗಿ ಮೂವರು ಮಧ್ಯೆ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ ಕೊಲೆಯಲ್ಲಿ ಅಂತ್ಯವಾದ ಘಟನೆ ತಾಲೂಕಿನ ಪುಲಗಡ್ಡಿ ಗ್ರಾಮದಲ್ಲಿ ಸೋಮವಾರ ನಡೆದಿದೆ.
ರಾಮಪ್ಪ ಬಸವಂತಪ್ಪ ಕೌಜಲಗಿ(25) ಮೃತ ವ್ಯಕ್ತಿ. ಸಿದ್ದಪ್ಪ ಮಲ್ಲಪ್ಪ ಕೌಜಲಗಿ(24) ಕೊಲೆ ಮಾಡಿದ ಆರೋಪಿ. ಇವರಿಬ್ಬರು ಸಂಬಂಧಿಕರಾಗಿದ್ದು, ಸೋಮವಾರ ಗದ್ದೆಯಲ್ಲಿ ನೀರು ಹಾಯಿಸುವ ವೇಳೆ ನೀರಿಗಾಗಿ ರಾಮಪ್ಪ ಹಾಗೂ ಅವನ ತಂದೆ ಬಸವಂತಪ್ಪ ಹಾಗೂ ಸಿದ್ದಪ್ಪನ ನಡುವೆ ಜಗಳವಾಗಿ ಅದು ವಿಕೋಪಕ್ಕೆ ತಿರುಗಿ ಸಿದ್ದಪ್ಪ ಕೈಯಲ್ಲಿದ್ದ ಕುಡುಗೋಲಿನಿಂದ ರಾಮಪ್ಪನನ್ನು ಕೊಚ್ಚಿ ಕೊಲೆ ಮಾಡಿದ್ದು, ತಡೆಯಲು ಹೋದ ರಾಮಪ್ಪನ ತಂದೆ ಬಸವಂತಪ್ಪನ ಮೇಲೆಯೂ ಹಲ್ಲೆ ಮಾಡಿರುವ ಬಗ್ಗೆ ಸಿದ್ದಪ್ಪ ಪೊಲೀಸ್ ಅಧಿಕಾರಿಗಳ ಮುಂದೆ ಬಾಯಿ ಬಿಟ್ಟಿದ್ದಾನೆ ಎನ್ನಲಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಗಂಭೀರ ಗಾಯಗೊಂಡ ಬಸವಂತಪ್ಪನನ್ನು ಗೋಕಾಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.ಗ್ರಾಮದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಘಟನಾ ಸ್ಥಳಕ್ಕೆ ಅಡಿಷನಲ್ ಎಸ್ ಪಿ ಶ್ರುತಿ. ಎನ್.ಎಸ್, ಡಿವೈಎಸ್ಪಿ ದೂದಪೀರ್ ಮುಲ್ಲಾ, ಸಿಪಿಐ ಶ್ರೀಶೈಲ್ ಬ್ಯಾಕೋಡ, ಪಿಎಸ್ಐ ರಾಜು ಪೊಜೇರಿ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡು ಪರಿಶೀಲನೆ ನಡೆಸಿದ್ದಾರೆ.