ಹಳದಿ, ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಶೀಘ್ರ ಕ್ರಮ: ಸಚಿವ ಚೆಲುವರಾಯ ಸ್ವಾಮಿ
2 Min read
KannadaprabhaNewsNetwork
Published : Oct 16 2023, 01:45 AM IST
Share this Article
FB
TW
Linkdin
Whatsapp
ಚಿತ್ರ:ಎಸ್ಯುಬಿ:ಅಕ್ಟೋಬರ್:೧೫:೦೧: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆದಿತ್ಯವಾರ ಕೃಷಿ ಸಚಿವ ಎನ್.ಚೆಲುವರಾಯ ಸ್ವಾಮಿ ಭೇಟಿ ನೀಡಿದರು.ಈ ಸಂದರ್ಭ ಪ್ರಮುಖರಾದ ಸುಧೀರ್ ಕುಮಾರ್ ಶೆಟ್ಟಿ, ಅಶೋಕ್ ನೆಕ್ರಾಜೆ, ಹರೀಶ್ ಇಂಜಾಡಿ ಉಪಸ್ಥಿತರಿದ್ದರು. | Kannada Prabha
Image Credit: KP
ಶಿವಮೊಗ್ಗದ ಕೃಷಿ ವಿಶ್ವ ವಿದ್ಯಾನಿಲಯದ ಉಪಕುಲಪತಿ ಮತ್ತು ಕೃಷಿ ವಿಜ್ಞಾನಿ ಡಾ. ಜಗದೀಶ್ ಅವರಿಗೆ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಿ 10 ದಿನಗಳ ಒಳಗೆ ವರದಿ ಸಲ್ಲಿಸಲು ತಿಳಿಸಲಾಗಿದೆ. ವರದಿ ಬಂದ ತಕ್ಷಣ ರೈತರಿಗೆ ಅನುಕೂಲವಾಗುವ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಹೇಳಿದರು.
ಕನ್ನಡಪ್ರಭ ವಾರ್ತೆ ಸುಬ್ರಹ್ಮಣ್ಯ ಶಿವಮೊಗ್ಗ, ಮಂಗಳೂರು ಉಡುಪಿ ಭಾಗದಲ್ಲಿ ಅಡಕೆ ಬೆಳೆಗೆ ಬಾಧಿಸುವ ಎಲೆಚುಕ್ಕಿ ರೋಗ ಮತ್ತು ಹಳದಿ ರೋಗ ನಿಯಂತ್ರಣಕ್ಕೆ ಸರ್ಕಾರ ಶೀಘ್ರ ಕ್ರಮ ಕೈಗೊಳ್ಳಲಿದೆ. ಶಿವಮೊಗ್ಗದ ಕೃಷಿ ವಿಶ್ವ ವಿದ್ಯಾನಿಲಯದ ಉಪಕುಲಪತಿ ಮತ್ತು ಕೃಷಿ ವಿಜ್ಞಾನಿ ಡಾ. ಜಗದೀಶ್ ಅವರಿಗೆ ಹಳದಿ ರೋಗ ಮತ್ತು ಎಲೆಚುಕ್ಕಿ ರೋಗದ ಬಗ್ಗೆ ಅಧ್ಯಯನ ನಡೆಸಿ 10 ದಿನಗಳ ಒಳಗೆ ವರದಿ ಸಲ್ಲಿಸಲು ತಿಳಿಸಲಾಗಿದೆ. ವರದಿ ಬಂದ ತಕ್ಷಣ ರೈತರಿಗೆ ಅನುಕೂಲವಾಗುವ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಕೃಷಿ ಸಚಿವ ಎನ್. ಚೆಲುವರಾಯ ಸ್ವಾಮಿ ಹೇಳಿದರು. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಾನುವಾರ ಭೇಟಿ ನೀಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ರೋಗಗಳನ್ನು ನಿಯಂತ್ರಣ ಮಾಡಲು ಕೃಷಿ ವಿಜ್ಞಾನಿಗಳಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು. ಈ ಬಗ್ಗೆ ವೈಜ್ಞಾನಿಕವಾಗಿ ಅಧ್ಯಯನ ಮಾಡಿ ರೋಗ ನಿಯಂತ್ರಣದ ಸೂತ್ರಗಳನ್ನು ಕಂಡು ಹಿಡಿಯಲಾಗುವುದು ಎಂದರು. ಕಾಂಗ್ರೆಸ್ ಸರ್ಕಾರ ಬಂದ ನಂತರ ರೈತರ ಆತ್ಮಹತ್ಯೆಗಳಂತಹ ಪ್ರಕರಣಗಳು ಕಡಿಮೆಯಾಗಿವೆ. ಅನೇಕ ವಿನೂತನ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ರೈತರ ಅನುಕೂಲತೆಗೆ ಮಾಡಲಾಗಿದೆ. ರೈತರ ಹಿತಕ್ಕಾಗಿ ಇನ್ನಷ್ಟು ವಿಶೇಷ ಯೋಜನೆಗಳನ್ನು ಶೀಘ್ರವೇ ಜಾರಿಗೊಳಿಸಲಾಗುವುದು ಎಂದು ಸಚಿವರು ತಿಳಿಸಿದರು. ಬಿತ್ತನೆ ಬೀಜ, ರಸಗೊಬ್ಬರ ಕೊರತೆ ಇಲ್ಲ: ರಾಜ್ಯದಲ್ಲಿ ಬಿತ್ತನೆ ಬೀಜ ಮತ್ತು ರಸಗೊಬ್ಬರಕ್ಕೆ ಕೊರತೆ ಇಲ್ಲ.ಇವುಗಳು ಹೇರಳವಾಗಿ ಸಂಗ್ರಹವಾಗಿದೆ. ರಾಜ್ಯದ ರೈತರಿಗೆ ಬೇಕಾದಷ್ಟು ಬಿತ್ತನೆ ಬೀಜ ಮತ್ತು ರಸಗೊಬ್ಬರ ವಿತರಿಸಲಾಗಿದೆ. ಕಳಪೆ ಬಿತ್ತನೆ ಬೀಜ ವಿತರಣೆಗೆ ಕಡಿವಾಣ ಹಾಕಲಾಗಿದೆ ಎಂದರು. ಸಾವಯವ ಕೃಷಿ ಯೋಜನೆಯಡಿಯಲ್ಲಿ ರೈತರಿಗೆ ಒಂದು ಹೆಕ್ಟೇರ್‌ಗೆ 10 ಸಾವಿರ ರು. ಸಹಾಯಧನ ನೀಡಲಾಗುತ್ತಿದೆ. 1 ಅಥವಾ 2 ಹೆಕ್ಟೇರ್ ಭೂಮಿ ಹೊಂದಿರುವ ರೈತರು ಈ ಯೋಜನೆಯ ಫಲಾನುಭವಿಗಳಾಗಿರುತ್ತಾರೆ ಎಂದ ಸಚಿವರು, ರಾಜ್ಯದ ೧೯೫ ತಾಲೂಕುಗಳನ್ನು ಬರ ಪೀಡಿತ ತಾಲೂಕು ಎಂಬುದಾಗಿ ಗುರುತಿಸಲಾಗಿದೆ. ಹೆಚ್ಚುವರಿಯಾಗಿ ಮತ್ತೆ ೨೧ ತಾಲೂಕುಗಳನ್ನು ಬರಪೀಡಿತ ಎಂದು ಗುರುತಿಸಲಾಗುತ್ತದೆ. ಈ ತಾಲೂಕುಗಳಿಗೆ ಸರ್ಕಾರದಿಂದ ಹೆಚ್ಚುವರಿ ಅನುದಾನ ಬಿಡುಗಡೆಗೊಳಿಸಲಾಗುವುದು ಎಂದು ತಿಳಿಸಿದರು. ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಲು ನಿರ್ಧರಿಸಲಾಗಿದೆ. ಹಾಲಿಗೆ ಲೀಟರ್‌ಗೆ 3 ರುಪಾಯಿ ಹೆಚ್ಚುವರಿಯಾಗಿ ಹೈನುಗಾರರಿಗೆ ನೀಡಲು ತೀರ್ಮಾನಿಸಲಾಗಿದೆ. ಈ ಮೂಲಕ ಹೈನುಗಾರಿಕೆಯ ಅಭಿವೃದ್ದಿಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದರು. ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ನಿಕಟಪೂರ್ವ ತಾ.ಪಂ. ಸದಸ್ಯ ಅಶೋಕ್ ನೆಕ್ರಾಜೆ, ಸುಬ್ರಹ್ಮಣ್ಯ ಗ್ರಾಮ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿ, ಕಾಂಗ್ರೆಸ್ ಯುವ ಮುಖಂಡರಾದ ಶೇಷಕುಮಾರ್ ಶೆಟ್ಟಿ, ಮನೋಜ್ ಕೈಕಂಬ, ಶ್ರೀ ದೇವಳದ ಎಇಒ ರಾಜಣ್ಣ, ವ್ಯವಸ್ಥಾಪನಾ ಸಮಿತಿ ಸದಸ್ಯ ಶ್ರೀವತ್ಸ ಬೆಂಗಳೂರು ಉಪಸ್ಥಿತರಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.