ಸಾರಾಂಶ
ಅತೀ ಶೀಘ್ರದಲ್ಲಿ ಆಶ‍್ರಯ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತರೀಕೆರೆ ಶಾಸಕ ಜಿ.ಎಚ್. ಶ‍್ರೀನಿವಾಸ್ ಹೇಳಿದರು.ಅಜ್ಜಂಪುರ ಪಟ್ಟಣ ಪಂಚಾಯ್ತಿಯಲ್ಲಿ ಎಸ್.ಸಿ. ಎಸ್.ಟಿ ವಿದ್ಯಾರ್ಥಿಗಳಿಗೆ ರಾಜ್ಯ ಹಣಕಾಸು ನಿಗಮದ ಸಹಾಯ ಧನ, ವೈದಕೀಯ, ಇಂಜಿನಿಯರಿಂಗ್ ಪದವೀಧರರಿಗೆ ಲ್ಯಾಪ್ ಟಾಪ್ ವಿತರಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮೇಲೆ ಬರಲೆಂದು ರಾಜ್ಯದಲ್ಲೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಶೇ. 17 ರಿಂದ ಶೇ 24 ರವರೆಗೆ ಪ್ರೋತ್ಸಾಹಧನ ಹೆಚ್ಚಿಸಿದ್ದಾರೆ. ಈ ಯೋಜನೆ ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕೆಂದರು.
ಎಸ್.ಎಫ್ ಸಿ ಯೋಜನೆಯಡಿ ವಿದ್ಯಾರ್ಥಿಗಳಿಗೆ ಪಟ್ಟಣ ಪಂಚಾಯ್ತಿಯಿಂದ ಧನ ಸಹಾಯ
ಕನ್ನಡಪ್ರಭವಾರ್ತೆ ಅಜ್ಜಂಪುರಅತೀ ಶೀಘ್ರದಲ್ಲಿ ಆಶ‍್ರಯ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ತರೀಕೆರೆ ಶಾಸಕ ಜಿ.ಎಚ್. ಶ‍್ರೀನಿವಾಸ್ ಹೇಳಿದರು.
ಅಜ್ಜಂಪುರ ಪಟ್ಟಣ ಪಂಚಾಯ್ತಿಯಲ್ಲಿ ಎಸ್.ಸಿ. ಎಸ್.ಟಿ ವಿದ್ಯಾರ್ಥಿಗಳಿಗೆ ರಾಜ್ಯ ಹಣಕಾಸು ನಿಗಮದ ಸಹಾಯ ಧನ, ವೈದಕೀಯ, ಇಂಜಿನಿಯರಿಂಗ್ ಪದವೀಧರರಿಗೆ ಲ್ಯಾಪ್ ಟಾಪ್ ವಿತರಿಸಿ ಮಾತನಾಡಿದರು. ಪರಿಶಿಷ್ಟ ಜಾತಿ ಮತ್ತು ಪಂಗಡದವರು ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿ ಮೇಲೆ ಬರಲೆಂದು ರಾಜ್ಯದಲ್ಲೇ ಮೊದಲ ಬಾರಿಗೆ ಸಿಎಂ ಸಿದ್ದರಾಮಯ್ಯ ಶೇ. 17 ರಿಂದ ಶೇ 24 ರವರೆಗೆ ಪ್ರೋತ್ಸಾಹಧನ ಹೆಚ್ಚಿಸಿದ್ದಾರೆ. ಈ ಯೋಜನೆ ಸದ್ಬಳಕೆ ಮಾಡಿಕೊಂಡು ಮುಂದೆ ಬರಬೇಕೆಂದರು.ಸದ್ಯದಲ್ಲೇ ಮಿನಿ ವಿಧಾನ ಸೌಧ, ಇಂದಿರಾ ಕ್ಯಾಂಟೀನ್, ಗ್ರಂಥಾಲಯ ಉದ್ಘಾಟಿಸಲಾಗುತ್ತದೆ. ₹84 ಲಕ್ಷದಲ್ಲಿ ಪಟ್ಟಣದ ಬಸ್ ನಿಲ್ದಾಣ ಐಟೆಕ್ ಮಾಡಲಾಗುತ್ತದೆ. ಕ್ಷೇತ್ರದ ಅಭಿವೃದ್ಧಿಗೆ ಇನ್ನು ಹೆಚ್ಚಿನ ಅನುದಾನ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.
ಈ ಸಮಾರಂಬದಲ್ಲಿ ಪಪಂ ಮುಖ್ಯಾಧಿಕಾರಿ ಟಿ.ಜಿ. ರಮೇಶ್, ಕೆಪಿಸಿಸಿ ಸದಸ್ಯ ಜಿ.ನಟರಾಜ್, ಮಾಜಿ ತಾ.ಪಂ. ಪಂಚಾಯಿತಿ ಅಧ್ಯಕ್ಷ ಆರ್. ಕೃಷ್ಣಪ್ಪ ಮಾತನಾಡಿದರು. ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಬಿ. ಕೆ. ರಾಘವೇಂದ್ರ, ಜೋಗಿ ಎನ್ ಪ್ರಕಾಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ದಯಾನಂದ್, ನಗರ ಘಟಕ ಅಧ್ಯಕ್ಷ ತಿಪ್ಪೇಶ್ ಮಡಿವಾಳ್, ನವೀನ್ ಮಂದಾಲಿ, ಉಪಾಧ್ಯಕ್ಷೆ ನೀಲಾಂಬಿಕೆ, ಮಂಜುಳ, ಚನ್ನಬಸಮ್ಮ ಗ್ಯಾರಂಟಿ ಯೋಜನೆ ತಾಲೂಕು ಅಧ್ಯಕ್ಷ ಎಂ ಜೆ ಕುಮಾರ್, ರಿಯಾಜ್ ಅಹಮದ್, ಕೆಡಿಪಿ ಸದಸ್ಯದ ಅಣ್ಣಪ್ಪ, ಮಹೇಂದ್ರ ಚಾರ್, ಮಲ್ಲಿಕಾರ್ಜುನ ಭಾಗವಹಿಸಿದ್ದರು. ಮೋಹನ್ ಕುಮಾರ್ ಜಾದವ್ ಕಾರ್ಯಕ್ರಮ ನಿರೂಪಣೆ ಮಾಡಿದರು.