ತಂಬಾಕು ಸೇವನೆ ಬಿಟ್ಟು ಸುಂದರ ಜೀವನ ನಡೆಸಲಿ: ರವೀಂದ್ರ ನಂದಿಹಾಳ

| Published : Jun 09 2024, 01:33 AM IST

ತಂಬಾಕು ಸೇವನೆ ಬಿಟ್ಟು ಸುಂದರ ಜೀವನ ನಡೆಸಲಿ: ರವೀಂದ್ರ ನಂದಿಹಾಳ
Share this Article
  • FB
  • TW
  • Linkdin
  • Email

ಸಾರಾಂಶ

ತಂಬಾಕು ಸೇವನೆಯಿಂದ ಪ್ರತಿದಿನ ದೇಶದಲ್ಲಿ ಸಾವಿರಾರು ಜನ ಜೀವ ಕಳೆದುಕೊಳ್ಳುತ್ತಿದ್ದಾರೆ. ಶ್ವಾಸಕೋಶದ ತೊಂದರೆ, ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ರವೀಂದ್ರ ನಂದಿಹಾಳ ಹೇಳಿದರು.

ಕನ್ನಡಪ್ರಭ ವಾರ್ತೆ ಕುಷ್ಟಗಿ

ಇಂದಿನ ದಿನಮಾನಗಳಲ್ಲಿ ವಿದ್ಯಾರ್ಥಿಗಳು ತಂಬಾಕಿಗೆ ದಾಸರಾಗುತ್ತಿರುವದು ಕಂಡು ಬರುತ್ತಿದ್ದು, ಈ ತಂಬಾಕು ಸೇವನೆ ಬಿಟ್ಟು ಸುಂದರವಾದ ಜೀವನ ನಡೆಸಬೇಕು ಎಂದು ಆರೋಗ್ಯ ನಿರೀಕ್ಷಣಾಧಿಕಾರಿ ರವೀಂದ್ರ ನಂದಿಹಾಳ ಹೇಳಿದರು.

ತಾಲೂಕಿನ ದೋಟಿಹಾಳದ ಸರಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಯಾನಂದಪುರಿ ಸಂಘ ಹಾಗೂ ಗಾಯಿತ್ರಿ ಮಹಿಳಾ ಸಂಘದ ಸಂಯುಕ್ತಾಶ್ರಯದಲ್ಲಿ ನಡೆದ ವಿಶ್ವ ತಂಬಾಕು ರಹಿತ ದಿನಾಚರಣೆಯ ಅಂಗವಾಗಿ ಶಾಲಾ ಮಕ್ಕಳಿಂದ ಜಾಗೃತಿ ಜಾಥಾ ಕಾರ್ಯಕ್ರಮದಲ್ಲಿ ಮಾತನಾಡಿದರು. ತಂಬಾಕು ಸೇವನೆಯಿಂದ ಕ್ಯಾನ್ಸರ್ ಸೇರಿದಂತೆ ಹೃದಯ ಸಂಬಂಧಿ ಕಾಯಿಲೆಗಳು ಆವರಿಸಿಕೊಳ್ಳಲಿದ್ದು, ತಂಬಾಕು ಸೇವನೆ ತ್ಯಜಿಸಬೇಕು ಎಂದರು.

ತಂಬಾಕು ಸೇವನೆಯಿಂದ ಪ್ರತಿದಿನ ದೇಶದಲ್ಲಿ ಸಾವಿರಾರು ಜನ ಜೀವ ಕಳೆದುಕೊಳ್ಳುತ್ತಿದ್ದಾರೆ. ಶ್ವಾಸಕೋಶದ ತೊಂದರೆ, ಕ್ಯಾನ್ಸರ್ ಸೇರಿದಂತೆ ಇನ್ನಿತರ ಮಾರಕ ರೋಗಗಳಿಗೆ ತುತ್ತಾಗುತ್ತಿದ್ದಾರೆ. ನೂರಾರು ಜನರು ಹೃದ್ರೋಗ ಸಂಬಂಧಿ ಕಾಯಿಲೆಗಳಿಂದ ಮರಣ ಹೊಂದಲಿದ್ದಾರೆ ಎಂದರು.

ಮುಖ್ಯ ಶಿಕ್ಷಕ ಸಿದ್ರಾಮಪ್ಪ ಅಮರಾವತಿ ಮಾತನಾಡಿ, ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕರವಾಗಿದ್ದು ಪಾನ್ ಮಸಲಾ, ಗುಟ್ಕಾಗಳಂತಹ ತಂಬಾಕು ಮಿಶ್ರಿತ ಮಾದಕ ವಸ್ತುಗಳಿಗೆ ದಾಸರಾಗಬೇಡಿ. ಯುವಜನರು ಕೆಡುಕಿನೆಡೆಗೆ ಹೆಚ್ಚು ಆಕರ್ಷಿತರಾಗುತ್ತಿದ್ದಾರೆ. ಗುಟ್ಕಾ, ಸಿಗರೇಟ್‌, ಬೀಡಿ, ತಂಬಾಕು ಇತರ ಮಾದಕ ವಸ್ತುಗಳ ಸೇವನೆಯಿಂದ ತಮ್ಮ ಭವಿಷ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದಾರೆ. ತಂಬಾಕು ಉತ್ಪನ್ನ ಸೇವನೆ ಚಟ ತ್ಯಜಿಸುವ ಮೂಲಕ ಆರೋಗ್ಯವಂತ ಸಮಾಜ ನಿರ್ಮಾಣ ಮಾಡಬೇಕು ಎಂದರು.

ಈ ಸಂದರ್ಭದಲ್ಲಿ ಸಂಘದ ಕಾರ್ಯದರ್ಶಿ ಪೂರ್ಣಿಮಾ ದೇವಾಂಗಮಠ, ಶ್ರೀನಿವಾಸ ಕಂಟ್ಲಿ, ದೊಡ್ಡಬಸವ ಪಾಟೀಲ, ರಹೀನಾಬೇಗಂ ಕಂದಕೂರ, ಆಶಾ ಕಾರ್ಯಕರ್ತರು ಹಾಗೂ ಶಾಲಾ ಶಿಕ್ಷಕರು ಇದ್ದರು. ಮಕ್ಕಳು ಗ್ರಾಮದ ಪ್ರಮುಖ ಬೀದಿಗಳಲ್ಲಿ ಜಾಗೃತಿ ಜಾಥಾವನ್ನು ನಡೆಸಿದರು.