ಸಾರಾಂಶ
ಜಿಲ್ಲೆಯಲ್ಲಿ ಕಾಡಾನೆಗಳ ಮೇಲೆ ನಿಯಂತ್ರಣ ಸಾಧಿಸಲು ಅರಣ್ಯ ಇಲಾಖೆಯಿಂದ ಒಂಭತ್ತು ಕಾಡನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ.ಇತ್ತೀಚಿಗೆ ಅರಣ್ಯ ಇಲಾಖೆಯಿಂದ ಕಾಡಾನೆಗೆ ಅಳವಡಿಸಿದ್ದ ರೇಡಿಯೋ ಕಾಲರ್ ಕಿತ್ತು ದಾರಿಯಲ್ಲಿ ಬಿದ್ದಿದ್ದು ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕನ್ನಡಪ್ರಭ ವಾರ್ತೆ ಬೇಲೂರು
ಇತ್ತೀಚಿಗೆ ಅರಣ್ಯ ಇಲಾಖೆಯಿಂದ ಕಾಡಾನೆಗೆ ಅಳವಡಿಸಿದ್ದ ರೇಡಿಯೋ ಕಾಲರ್ ಕಿತ್ತು ದಾರಿಯಲ್ಲಿ ಬಿದ್ದಿದ್ದು ಅರಣ್ಯ ಇಲಾಖೆಯ ಕಾರ್ಯವೈಖರಿಗೆ ಸಾರ್ವಜನಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಜಿಲ್ಲೆಯಲ್ಲಿ ಕಾಡಾನೆಗಳ ಮೇಲೆ ನಿಯಂತ್ರಣ ಸಾಧಿಸಲು ಅರಣ್ಯ ಇಲಾಖೆಯಿಂದ ಒಂಭತ್ತು ಕಾಡನೆಗಳಿಗೆ ರೇಡಿಯೋ ಕಾಲರ್ ಅಳವಡಿಕೆ ಕಾರ್ಯಾಚರಣೆ ನಡೆಸಲಾಗುತ್ತಿದೆ. ಮೂರು ದಿನದಲ್ಲಿ ಎರಡು ಸಾಕಾನೆಗೆ ಈಗಾಗಲೇ ರೇಡಿಯೋ ಕಾಲರ್ ಅಳವಡಿಕೆ ಮಾಡಿದ್ದು, ಈ ನಡುವೆ ಬೇಲೂರು ತಾಲೂಕಿನ ಕೋಡಿಹಳ್ಳಿ ಗ್ರಾಮದ ಜಮೀನಿನಲ್ಲಿ ರೇಡಿಯೋ ಕಾಲರ್ ಒಂದು ಆನೆಯ ಕೊರಳಿನಿಂದ ಕಳಚಿ ಬಿದ್ದಿದ್ದು ಲಕ್ಷಾಂತರ ಹಣವನ್ನು ಖರ್ಚು ಮಾಡಿ ಯಾವ ಪುರುಷಾರ್ಥಕ್ಕೆ ರೇಡಿಯೋ ಕಾಲರ್ ಅಳವಡಿಸಿದ್ದಾರೆ ಎಂದು ಗ್ರಾಮಸ್ಥರು ಪ್ರಶ್ನೆ ಮಾಡುತ್ತಿದ್ದಾರೆ.
ರೇಡಿಯೋ ಕಾಲರ್ ಕಳಚಿ ಬಿದ್ದಿರುವುದರಿಂದ ಮತ್ತೆ ಆನೆಯನ್ನು ಸೆರೆ ಹಿಡಿಯುವ ಕಾರ್ಯಾಚರಣೆ ಮಾಡಲಾಗಿದೆ. ಸಕಲೇಶಪುರ ಬೇಲೂರು ಆಲೂರು ತಾಲೂಕಿನಲ್ಲಿ ಕಾಡಾನೆಗಳ ಉಪಟಳ ಹೆಚ್ಚಿದ್ದು ಅರಣ್ಯ ಇಲಾಖೆ ಸಿಬ್ಬಂದಿ ಜಾಗರೂಕತೆ ಹಾಗೂ ಕಾರ್ಯದಕ್ಷತೆಯಿಂದ ಕೆಲಸ ಮಾಡಿದರೆ ಈ ರೀತಿ ಘಟನೆಗಳು ನಡೆಯುವುದಿಲ್ಲ ಎಂದು ಗ್ರಾಮಸ್ಥರು ಅಭಿಪ್ರಾಯಿಸಿದ್ದಾರೆ.