ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ಅನ್ನಬ್ರಹ್ಮ ಚಾತುರ್ಮಾಸ್ಯದ ಧರ್ಮಸಭೆಯಲ್ಲಿ ಬುಧವಾರ ಅನ್ನಂ ಬ್ರಹ್ಮ ಮಾಲಿಕೆಯಲ್ಲಿ ಉಷಃಪಾನ - ನಾಸಾಪಾನ ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು

ಅಶೋಕೆ: ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನವೂ ನಿಯಮಿತವಾಗಿ ನೀರನ್ನು ಸೇವಿಸುವ ಉಷಃಪಾನ ಹಾಗೂ ನಾಸಾಪಾನ ಪದ್ಧತಿಗಳನ್ನು ಅಳವಡಿಸಿಕೊಂಡರೆ ಮನುಷ್ಯನು ಮುಪ್ಪು ಹಾಗೂ ರೋಗಗಳಿಲ್ಲದ ನೂರು ವರ್ಷಗಳ ಕಾಲದ ಆರೋಗ್ಯಯುತ ಜೀವನವನ್ನು ನಡೆಸಲು ಸಾಧ್ಯ ಎಂದು ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ.ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ಅನ್ನಬ್ರಹ್ಮ ಚಾತುರ್ಮಾಸ್ಯದ ಧರ್ಮಸಭೆಯಲ್ಲಿ ಬುಧವಾರ ''''''''ಅನ್ನಂ ಬ್ರಹ್ಮ'''''''' ಮಾಲಿಕೆಯಲ್ಲಿ ಉಷಃಪಾನ - ನಾಸಾಪಾನ'''''''' ಕುರಿತಾಗಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಸೂರ್ಯೋದಯಕ್ಕೂ ಪೂರ್ವದಲ್ಲಿ ಪ್ರತಿದಿನ ಎಂಟು ಬೊಗಸೆ ನೀರನ್ನು ಸೇವಿಸುವುದನ್ನು ಉಷಃಪಾನ ಎಂದು ಕರೆಯಲಾಗಿದ್ದು, ಆಯುರ್ವೇದ ಹಾಗೂ ಯೋಗಶಾಸ್ತ್ರದಲ್ಲಿ ಈ ಕುರಿತಾಗಿ ಉಲ್ಲೇಖಗಳಿದ್ದು, ಪ್ರತಿದಿನ ಇದನ್ನು ಆಚರಿಸುವಂತೆ ಸೂಚಿಸಲಾಗಿದೆ ಎಂದರು.

ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಘವೇಂದ್ರ ಭಟ್, ವೇ.ಬ್ರ. ರವೀಶ್ ತಂತ್ರಿ, ಹಿರಿಯ ಸಾಹಿತಿ ಭುವನೇಶ್ವರೀ ಹೆಗಡೆ ಉಪಸ್ಥಿತರಿದ್ದು, ಶ್ರೀಗಳ ಆಶೀರ್ವಾದ ಪಡೆದರು. ಶಿವರಾಮಚಂದ್ರ ಶಿವಾಲ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು. ರಾಜಾರಾಮ ಮರಿಗದ್ದೆ ದಂಪತಿಗಳು ದಿನಪ್ರಧಾನರಾಗಿದ್ದರು.

ಘನಪಾರಾಯಣ ಪ್ರಾರಂಭ: ಚಾತುರ್ಮಾಸ್ಯದ ಶುಭ ಸಂದರ್ಭದಲ್ಲಿ ಪ್ರತಿವರ್ಷದಂತೆ ಈ ವರ್ಷವೂ ಕೃಷ್ಣ ಯಜುರ್ವೇದದ ತೈತ್ತಿರೀಯ ಶಾಖೆಯ ಘನಪಾರಾಯಣವು ವೇ.ಬ್ರ. ಪಳ್ಳತ್ತಡ್ಕ ಶಂಕರನಾರಾಯಣ ಭಟ್ಟ ಘನಪಾಠಿಗಳ ನೇತೃತ್ವದಲ್ಲಿ ನಾಡಿನ ಪ್ರಮುಖ ಹತ್ತು ಘನಪಾಠಿಗಳಿಂದ ಪ್ರಾರಂಭವಾಯಿತು.