ಊಟವಿಲ್ಲದೇ ಕೆಲವು ಕಾಲ ಬದುಕಬಹುದು. ಆದರೆ ಉಸಿರಾಟವಿಲ್ಲದೇ ಬದುಕಿರಲು ಸಾಧ್ಯವೇ ಇಲ್ಲ. ಯೋಗಿಯ ಸಮಾಧಿಸ್ಥಿತಿಯಲ್ಲಿ ಮಾತ್ರ ಉಸಿರಾಟವಿಲ್ಲದೆಯೂ ಬದುಕಿರಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದ್ದಾರೆ.

ಮಂಗಳೂರು: ಊಟವಿಲ್ಲದೇ ಕೆಲವು ಕಾಲ ಬದುಕಬಹುದು. ಆದರೆ ಉಸಿರಾಟವಿಲ್ಲದೇ ಬದುಕಿರಲು ಸಾಧ್ಯವೇ ಇಲ್ಲ. ಯೋಗಿಯ ಸಮಾಧಿಸ್ಥಿತಿಯಲ್ಲಿ ಮಾತ್ರ ಉಸಿರಾಟವಿಲ್ಲದೆಯೂ ಬದುಕಿರಬಹುದು ಎಂದು ಶ್ರೀರಾಮಚಂದ್ರಾಪುರ ಮಠದ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಹೇಳಿದ್ದಾರೆ.ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ‘ಅನ್ನಬ್ರಹ್ಮ ಚಾತುರ್ಮಾಸ್ಯ’ದ ಧರ್ಮಸಭೆಯಲ್ಲಿ ಮಂಗಳವಾರ ‘ಅನ್ನಂ ಬ್ರಹ್ಮ’ ಮಾಲಿಕೆಯಲ್ಲಿ ಉಸಿರಾಟದ ಸೂಕ್ಷ್ಮಗಳ ಕುರಿತಾಗಿ ಅವರು ಪ್ರವಚನ ನೀಡಿದರು.

ಉಸಿರಾಟದ ಗತಿಯು ಹಂಸದಂತೆ ಧಾವಂತ ಇಲ್ಲದೇ ಸರಾಗವಾಗಿ ಆದಾಗ ಸಮಾಧಾನವನ್ನು ಸಾಧಿಸಿಕೊಳ್ಳಲು ಸಾಧ್ಯ. ಸಮಾಧಾನದಿಂದ ಶರೀರ, ಮನಸ್ಸು, ಜೀವನಕ್ಕೆ ಅಪಾರವಾದ ಪ್ರಯೋಜನವನ್ನು ಪಡೆದುಕೊಳ್ಳಬಹುದು ಎಂದು ವಿವರಿಸಿದರು.ನಿವೃತ್ತ ರಾಜ್ಯ ಪೋಲಿಸ್ ಮಹಾನಿರ್ದೇಶಕ ಹಾಗೂ ಶ್ರೀಮಠದ ಸಮ್ಮುಖ ಸರ್ವಾಧಿಕಾರಿಗಳಾದ ತಿಮ್ಮಪ್ಪಯ್ಯ ಮಡಿಯಾಳ್ ದಂಪತಿ ಶ್ರೀಗಳಿಂದ ಆಶೀರ್ವಾದ ಪಡೆದರು. ಮುಳ್ಳೇರಿಯಾ ಹವ್ಯಕ ಮಂಡಲದ ಗುತ್ತಿಗಾರು, ಎಣ್ಮಕಜೆ, ಗುಂಪೆ, ಸುಳ್ಯ, ಕಾಸರಗೊಡು, ಕೊಡಗು ಹವ್ಯಕ ವಲಯಗಳ ಪರವಾಗಿ ಶಿವರಾಮಚಂದ್ರ ಶಿವಾಲ ಕುಟುಂಬದವರು ಗುರುಭಿಕ್ಷಾಸೇವೆ ಸಮರ್ಪಿಸಿದರು. ವಿನೋದ್ ಹೆಗಡೆ, ನಂದನ್ ಹೆಗಡೆ, ಸುಬ್ರಹ್ಮಣ್ಯ ಭಟ್ ಕೆರೆಮೂಲೆ, ಕೃಷ್ಣಮೂರ್ತಿ ಮಾಡಾವು, ಕೃಷ್ಣಪ್ರಮೋದ, ಕೇಶವ ಪ್ರಕಾಶ ಗುಂಪೆ, ದಿನಪ್ರಧಾನರಾಗಿ ಶಿರಸಿ ಲಕ್ಷ್ಮಣ ಶಾನಭಾಗ ದಂಪತಿ ಇದ್ದರು.