ಎರಡು ಲಕ್ಷ ಮತಗಳ ಅಂತರದಿಂದ .ರಾಘವೇಂದ್ರ ಗೆಲುವು: ಬಿ.ಎಸ್.ಯಡಿಯೂರಪ್ಪ

| Published : May 01 2024, 01:19 AM IST

ಎರಡು ಲಕ್ಷ ಮತಗಳ ಅಂತರದಿಂದ .ರಾಘವೇಂದ್ರ ಗೆಲುವು: ಬಿ.ಎಸ್.ಯಡಿಯೂರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ನಮ್ಮ ಅಭ್ಯರ್ಥಿ ಬಿವೈ ರಾಘವೇಂದ್ರ ಗೆಲ್ಲುವು ಸಾಧಿಸುವ ವಿಶ್ವಾಸ ಹೆಚ್ಚುತ್ತಿದೆ.ಎರಡರಿಂದ ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ದೇವ ದುರ್ಲಭವಾದ ಸ್ವಾಗತ ಎಲ್ಲೆಡೆ ದೊರೆಯುತ್ತಿದೆ

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಲೋಕಸಭಾ ಚುನಾವಣೆಯಲ್ಲಿ ಬಿ.ವೈ.ರಾಘವೇಂದ್ರ ಅವರು ಸುಮಾರು ಎರಡು ಲಕ್ಷ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ನಗರದ ಸಾಗರ ರಸ್ತೆಯಲ್ಲಿರುವ ಪೆಸಿಟ್ ಕಾಲೇಜಿನ ಪ್ರೇರಣಾ ಸಭಾಂಗಣದಲ್ಲಿ ಆಯೋಜಿಸಿದ್ದ ವೃತ್ತಿಪರರ ಜೊತೆಗೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಇಲ್ಲಿನ ಉತ್ಸಾಹ ನೋಡಿದರೆ ನಮ್ಮ ಅಭ್ಯರ್ಥಿ ಬಿವೈ ರಾಘವೇಂದ್ರ ಗೆಲ್ಲುವು ಸಾಧಿಸುವ ವಿಶ್ವಾಸ ಹೆಚ್ಚುತ್ತಿದೆ.

ಎರಡರಿಂದ ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ. ದೇವ ದುರ್ಲಭವಾದ ಸ್ವಾಗತ ಎಲ್ಲೆಡೆ ದೊರೆಯುತ್ತಿದೆ ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನೇತೃತ್ವದಲ್ಲಿ ಪಕ್ಷ ಸಂಘಟನೆ ನಡೆಯುತ್ತಿದೆ. 28 ಸಂಸದರನ್ನು ಕರೆದುಕೊಂಡು ದೆಹಲಿಗೆ ಬರುತ್ತೇನೆ ಎಂದು ನಾನು ನಡ್ಡಾವರಿಗೆ ಹೇಳಿದ್ದೇನೆ. ರಾಜ್ಯದಲ್ಲಿ ಬಿಜೆಪಿ 28 ಸ್ಥಾನಗಳಲ್ಲಿ ಗೆಲ್ಲುವ ವಿಶ್ವಾಸ ಇದೆ. ಒಂದೆರೆಡು ವ್ಯತ್ಯಾಸ‌ ಆಗಬಹುದು ಅಷ್ಟೆ ಎಂದರು. ರಾಜ್ಯದ ಎಲ್ಲಾ ಕಡೆ ಈಗಾಗಲೆ ಪ್ರವಾಸ ಮಾಡಿದ್ದೇನೆ. ಎಲ್ಲೆಡೆ ಬಿಜೆಪಿ ಪರವಾಗಿ ಇದೇ ತರಹ ವಾತಾವರಣ ಇದೆ. ಈ ಬಾರಿ ಉತ್ತಮ ಫಲಿತಾಂಶ ಲಭ್ಯವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಯಡಿಯೂರಪ್ಪ, ರಾಜ್ಯ ಸರ್ಕಾರ ಆರ್ಥಿಕವಾಗಿ ಸಂಪೂರ್ಣ ದಿವಾಳಿಯಾಗಿದೆ. ಬರ ನಿರ್ವಹಣೆ ಮಾಡುವಲ್ಲಿ ವಿಫಲವಾಗಿದೆ. ಎಲ್ಲದಕ್ಕೂ ಕೇಂದ್ರದ ಕಡೆ ಬೆಟ್ಟು ತೋರಿಸುವ ಸಂಸ್ಕೃತಿ ಸರಿಯಲ್ಲ ಎಂದರು.

ಕೇಂದ್ರ ಸರ್ಕಾರವನ್ನು ದೂರುವುದರ ಬದಲು ಈಗಾಗಲೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನವನ್ನು ಸಮರ್ಪಕ ರೀತಿಯಲ್ಲಿ ಬಳಕೆ ಮಾಡುವಲ್ಲಿ ರಾಜ್ಯ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.