ರಾಜ್ಯ ಕೈಗಾರಿಕಾ ಮಂಡಳಿ ನೂತನ ಅಧ್ಯಕ್ಷರಾಗಿ ರಘುಮೂರ್ತಿ ಅಧಿಕಾರ ಸ್ವೀಕಾರ

| Published : Feb 13 2024, 12:46 AM IST

ರಾಜ್ಯ ಕೈಗಾರಿಕಾ ಮಂಡಳಿ ನೂತನ ಅಧ್ಯಕ್ಷರಾಗಿ ರಘುಮೂರ್ತಿ ಅಧಿಕಾರ ಸ್ವೀಕಾರ
Share this Article
  • FB
  • TW
  • Linkdin
  • Email

ಸಾರಾಂಶ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಕರ್ನಾಟಕ ರಾಜ್ಯ ಕೈಗಾರಿಕಾ ಮಂಡಳಿ ನೂತನ ಅಧ್ಯಕ್ಷರಾಗಿ ಸೋಮವಾರ ಬೆಂಗಳೂರಿನ ಮಂಡಳಿ ಕೇಂದ್ರ ಕಚೇರಿಯಲ್ಲಿ ಕ್ಷೇತ್ರದ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು

ಕನ್ನಡಪ್ರಭ ವಾರ್ತೆ ಚಳ್ಳಕೆರೆ

ಚಳ್ಳಕೆರೆ ವಿಧಾನಸಭಾ ಕ್ಷೇತ್ರದ ಶಾಸಕ ಟಿ. ರಘುಮೂರ್ತಿ ಕರ್ನಾಟಕ ರಾಜ್ಯ ಕೈಗಾರಿಕಾ ಮಂಡಳಿ ನೂತನ ಅಧ್ಯಕ್ಷರಾಗಿ ಸೋಮವಾರ ಬೆಂಗಳೂರಿನ ಮಂಡಳಿ ಕೇಂದ್ರ ಕಚೇರಿಯಲ್ಲಿ ಕ್ಷೇತ್ರದ ನೂರಾರು ಕಾರ್ಯಕರ್ತರ ಸಮ್ಮುಖದಲ್ಲಿ ಅಧಿಕಾರ ಸ್ವೀಕರಿಸಿದರು.

ಈ ಸಂದರ್ಭದಲ್ಲಿದ್ದ ಎಲ್ಲಾ ಕಾರ್ಯಕರ್ತರು, ಮುಖಂಡರು ರಘುಮೂರ್ತಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ಗೆ ಜಯಕಾರ ಹಾಕಿದರು. ಇದೇ ಸಂದರ್ಭದಲ್ಲಿ ಹೊಸದುರ್ಗ ಶಾಸಕ ಬಿ.ಜಿ.ಗೋವಿಂದಪ್ಪ ಸಹ ಆಹಾರ ನಿಗಮ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು.

ಬೆಂಗಳೂರಿನ ರಾಜಾಜಿನಗರದಲ್ಲಿರುವ ಕರ್ನಾಟಕ ರಾಜ್ಯ ಕೈಗಾರಿಕಾ ಮಂಡಳಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಹಿನ್ನೆಲೆಯಲ್ಲಿ ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದರು. ಅಧಿಕಾರ ಸ್ವೀಕರಿಸಿದ ಕೂಡಲೇ ಚಿತ್ರದುರ್ಗ ಶಾಸಕ ಕೆ.ಸಿ.ವೀರೇಂದ್ರ ಸನ್ಮಾನಿಸಿ, ರಘುಮೂರ್ತಿ ಹಿರಿಯ ರಾಜಕಾರಣಿ. ಸಂಯಮದಿಂದಲೇ ಎಲ್ಲಾ ಸಮಸ್ಯೆ ನಿವಾರಿಸುವ ಶಕ್ತಿ ಹೊಂದಿದ್ದಾರೆ. ಕೈಗಾರಿಕಾ ಮಂಡಳಿ ರಾಜ್ಯದ ಆರ್ಥಿಕ ಹಿತದೃಷ್ಟಿಯಿಂದ ಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಬೇಕಿದೆ. ರಘುಮೂರ್ತಿ ಕೈಗಾರಿಕಾ ಮಂಡಳಿಗೆ ಹೊಸ ಶಕ್ತಿ ತುಂಬುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಾರೆಂಬ ವಿಶ್ವಾಸವಿದೆ ಎಂದರು.

ರಘುಮೂರ್ತಿ ಮಾತನಾಡಿ, ಹ್ಯಾಟ್ರಿಕ್ ಗೆಲವು ಸಾಧಿಸಿ ಸಾಧನೆ ಮಾಡಿದ್ದೇನೆ. ಪಕ್ಷದಲ್ಲಿ ಯಾವುದೇ ಸ್ಥಾನಬಯಸದೆ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕೆಂಬ ಹಂಬಲ ನನ್ನದು. ಈ ಹಿನ್ನೆಲೆಯಲ್ಲಿ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬೇಡವೆಂದು ಪತ್ರಬರೆದಿದ್ದೆ. ಆದರೂ ನನ್ನ ಮೇಲೆ ವಿಶ್ವಾಸಗೌರವವಿಟ್ಟು ಈ ದೊಡ್ಡ ಸ್ಥಾನ ನೀಡಿದ್ದಾರೆ. ಅಧ್ಯಕ್ಷ ಸ್ಥಾನ ನೀಡಿದ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿ ಅಭಿನಂದಿಸಿದ ಅವರು, ಅವರ ಜತೆ ಚರ್ಚಿಸಿ ಕೈಗಾರಿಕೆಗಳ ಪುನಶ್ಚೇನಕ್ಕೆ ಸಂಬಂಧಪಟ್ಟಂತೆ ಸೂಕ್ತ ಪರಿಹಾರ ಕಂಡುಕೊಳ್ಳಲಾಗುವುದು ಎಂದು ತಿಳಿಸಿದರು.