ಬೇಲೂರು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಳೇಬೀಡಿನ ರಘುನಾಥ್‌ ಆಯ್ಕೆ

| Published : Feb 06 2025, 11:45 PM IST

ಬೇಲೂರು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಳೇಬೀಡಿನ ರಘುನಾಥ್‌ ಆಯ್ಕೆ
Share this Article
  • FB
  • TW
  • Linkdin
  • Email

ಸಾರಾಂಶ

ಬೇಲೂರು ತಾಲೂಕು ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾಗಿ ರಘುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ್ ಆಯ್ಕೆಯಾದರು. ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದಲ್ಲಿ ಜಿಲ್ಲಾಧ್ಯಕ್ಷ ವೇಣುಕುಮಾರ್, ರಾಜ್ಯ ಪತ್ರಕರ್ತ ಸಂಘದ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರಾದ ರವಿ ನಾಕಾಲಗೂಡು, ಪ್ರಧಾನ ಕಾರ್ಯದರ್ಶಿ ಶಶಿಧರ್‌, ಉಪಾಧ್ಯಕ್ಷ ಹರೀಶ್ ಅವರ ಸಮ್ಮುಖದಲ್ಲಿ ತಾಲೂಕು ಸಂಘದ ಅಧ್ಯಕ್ಷರಾಗಿ ರಘುನಾಥ್, ಕಾರ್ಯದರ್ಶಿಯಾಗಿ ಶಿವರಾಜ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ಕನ್ನಡಪ್ರಭ ವಾರ್ತೆ ಬೇಲೂರು

ತಾಲೂಕು ಪತ್ರಕರ್ತ ಸಂಘದ ನೂತನ ಅಧ್ಯಕ್ಷರಾಗಿ ರಘುನಾಥ್, ಪ್ರಧಾನ ಕಾರ್ಯದರ್ಶಿಯಾಗಿ ಶಿವರಾಜ್ ಆಯ್ಕೆಯಾದರು.

ಜಿಲ್ಲಾ ಕಾರ್ಯ ನಿರತ ಪತ್ರಕರ್ತ ಸಂಘದಲ್ಲಿ ಜಿಲ್ಲಾಧ್ಯಕ್ಷ ವೇಣುಕುಮಾರ್, ರಾಜ್ಯ ಪತ್ರಕರ್ತ ಸಂಘದ ಕಾರ್ಯಕಾರಿ ಸಮಿತಿಯ ವಿಶೇಷ ಆಹ್ವಾನಿತ ಸದಸ್ಯರಾದ ರವಿ ನಾಕಾಲಗೂಡು, ಪ್ರಧಾನ ಕಾರ್ಯದರ್ಶಿ ಶಶಿಧರ್‌, ಉಪಾಧ್ಯಕ್ಷ ಹರೀಶ್ ಅವರ ಸಮ್ಮುಖದಲ್ಲಿ ತಾಲೂಕು ಸಂಘದ ಅಧ್ಯಕ್ಷರಾಗಿ ರಘುನಾಥ್, ಕಾರ್ಯದರ್ಶಿಯಾಗಿ ಶಿವರಾಜ್, ಉಪಾಧ್ಯಕ್ಷರಾಗಿ ಅರುಣ್ ಕುಮಾರ್ ಅವಿರೋಧವಾಗಿ ಆಯ್ಕೆಯಾದರು.

ಸಮನ್ವಯ ಸಮಿತಿಯಲ್ಲಿ ಬೇಲೂರು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಎ. ರಾಘವೇಂದ್ರ ಹೊಳ್ಳ, ಪೈಂಟ್ ರವಿ, ಮಾಜಿ ಕಾರ್ಯದರ್ಶಿ ವೆಂಕಟೇಶ್, ಲಕ್ಷ್ಮಣ್, ಮಾಜಿ ಅಧ್ಯಕ್ಷರು ಭಾರತಗೌಡ, ಶ್ರೀನಿಧಿ, ತಾರಾನಾಥ್ ಅವರನ್ನು ಆಯ್ಕೆ ಮಾಡಲಾಯಿತು. ನೂತನ ಅಧ್ಯಕ್ಷ ಹಳೇಬೀಡು ರಘುನಾಥ್ ಮಾತನಾಡಿ, ತಾಲೂಕು ಪತ್ರಕರ್ತರ ಸಂಘ ಬಲಿಷ್ಠವಾಗಿದ್ದು ಉತ್ತಮ ವರದಿಗಳನ್ನು ಮಾಡುವ ಪತ್ರಕರ್ತರನ್ನು ಹೊಂದಿದೆ. ಹಳೇಬೀಡು ಗ್ರಾಮೀಣ ಭಾಗದವರನ್ನು ಗುರುತಿಸಿ ಅಧ್ಯಕ್ಷ ಸ್ಥಾನ ನೀಡಲು ಸಹಕರಿಸಿದ ರಾಜ್ಯ, ಜಿಲ್ಲಾ , ತಾಲೂಕು ಸಮಿತಿಗೆ ಕೃತಜ್ಞತೆಗಳನ್ನು ಸಲ್ಲಿಸಿದರು.

ಪತ್ರಕರ್ತರ ಸಂಘದ ನೂತನ ಕಾರ್ಯದರ್ಶಿ ಬಿ ಶಿವರಾಜ್ ಮಾತನಾಡಿ, ಯಾವುದೇ ನಿರ್ಣಯಗಳನ್ನು ಕೈಗೊಳ್ಳುವಾಗ ಪತ್ರಕರ್ತರ ಸಂಘದ ಎಲ್ಲಾ ಸದಸ್ಯರ ಅಭಿಪ್ರಾಯವನ್ನು ಪಡೆದು ಒಮ್ಮತದ ತೀರ್ಮಾನದ ನಂತರ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ಬೇಲೂರು ತಾಲೂಕಿನ ಪತ್ರಕರ್ತರ ಸಂಘದ ಸದಸ್ಯರು ಹಾಜರಿದ್ದರು.