ಕೃತಯುಗದಲ್ಲಿ ಅಗ್ನಿ ಹಾಗೂ ಆಹಾರದ ವಿಚಾರದಲ್ಲಿ ಮೊದಲ ತಪ್ಪು ಹೆಜ್ಜೆ ಆರಂಭವಾಯಿತು. ಅಗತ್ಯಕ್ಕಿಂತ ಹೆಚ್ಚು ಆಹಾರವನ್ನು ಸ್ವೀಕರಿಸಲು ಕೆಲವರು ಆರಂಭಿಸಿದರು. ಪರಿಣಾಮವಾಗಿ ಮಾನವರ ದೇಹ ಸ್ಥೂಲವಾಯಿತು, ಆಲಸ್ಯ, ಕೂಡಿಡುವ ಬುದ್ಧಿ, ಲೋಭ, ದ್ರೋಹ, ಸುಳ್ಳು, ಕಾಮ ಕ್ರೋಧಾದಿಗಳು, ಹೀಗೆ ಒಂದರಿಂದ ಒಂದು ದುರ್ಗುಣಗಳು ಬೆಳೆಯುತ್ತಾ ಸಾಗಿತು. ಮನುಷ್ಯನ ವ್ಯಕ್ತಿತ್ವ ಪತನದ ದಾರಿಯನ್ನು ಹಿಡಿಯಿತು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ.
ಅಶೋಕೆ: ಕೃತಯುಗದಲ್ಲಿ ಅಗ್ನಿ ಹಾಗೂ ಆಹಾರದ ವಿಚಾರದಲ್ಲಿ ಮೊದಲ ತಪ್ಪು ಹೆಜ್ಜೆ ಆರಂಭವಾಯಿತು. ಅಗತ್ಯಕ್ಕಿಂತ ಹೆಚ್ಚು ಆಹಾರವನ್ನು ಸ್ವೀಕರಿಸಲು ಕೆಲವರು ಆರಂಭಿಸಿದರು. ಪರಿಣಾಮವಾಗಿ ಮಾನವರ ದೇಹ ಸ್ಥೂಲವಾಯಿತು, ಆಲಸ್ಯ, ಕೂಡಿಡುವ ಬುದ್ಧಿ, ಲೋಭ, ದ್ರೋಹ, ಸುಳ್ಳು, ಕಾಮ ಕ್ರೋಧಾದಿಗಳು, ಹೀಗೆ ಒಂದರಿಂದ ಒಂದು ದುರ್ಗುಣಗಳು ಬೆಳೆಯುತ್ತಾ ಸಾಗಿತು. ಮನುಷ್ಯನ ವ್ಯಕ್ತಿತ್ವ ಪತನದ ದಾರಿಯನ್ನು ಹಿಡಿಯಿತು ಎಂದು ಶ್ರೀರಾಮಚಂದ್ರಾಪುರ ಮಠದ ಜಗದ್ಗುರು ಶಂಕರಾಚಾರ್ಯ ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ ಹೇಳಿದ್ದಾರೆ.
ಗೋಕರ್ಣದ ಅಶೋಕೆಯ ಮೂಲಮಠದ ಪರಿಸರದಲ್ಲಿ ನಡೆಯುತ್ತಿರುವ ''''ಅನ್ನಬ್ರಹ್ಮ ಚಾತುರ್ಮಾಸ್ಯ''''ದ ಧರ್ಮಸಭೆಯಲ್ಲಿ ಸೆ. 2ರಂದು ''''ಅನ್ನಂ ಬ್ರಹ್ಮ'''' ಮಾಲಿಕೆಯಲ್ಲಿ ಪ್ರವಚನ ಅನುಗ್ರಹಿಸಿದ ಶ್ರೀಗಳು, ಚರಕ ಸಂಹಿತೆಯು ಸೃಷ್ಟಿಯ ಆದಿಯಲ್ಲಿ ಮನುಷ್ಯರು ದೇವರಿಗೆ ಸರಿಸಮಾನವಾದ ಓಜಸ್ಸನ್ನು ಹೊಂದಿದ್ದರು. ಗಟ್ಟಿಮುಟ್ಟಾದ ಶರೀರವನ್ನು, ಪ್ರಸನ್ನವಾದ ಇಂದ್ರಿಯಗಳನ್ನು, ಪರಿಪೂರ್ಣ ಆರೋಗ್ಯವನ್ನು ಹೊಂದಿದ್ದರು ಎಂದಿದೆ. ಆಗ ರೋಗವೂ ಇರಲಿಲ್ಲ, ವೈದ್ಯರಿರಲಿಲ್ಲ, ವೈದ್ಯಶಾಸ್ತ್ರವೂ ಇರಲಿಲ್ಲ, ಔಷಧದ ಅಂಗಡಿಗಳೂ ಇರಲಿಲ್ಲ ಎಂದು ಶ್ರೀಗಳು ವಿವರಿಸಿದರು.ಹುಟ್ಟಿದ ಪ್ರತಿಜೀವಿಯೂ ಆಹಾರದ ಒಳಹೊರಗನ್ನು ತಿಳಿದುಕೊಳ್ಳಲೇ ಬೇಕು. ಆಹಾರದ ವಿಚಾರವನ್ನು ತಿಳಿದುಕೊಳ್ಳದೇ ಇದ್ದರೆ ಮನುಷ್ಯನಾಗಿ ಜೀವಿಸುವ ಹಕ್ಕನ್ನೇ ಕಳೆದುಕೊಂಡಂತೆ ಎಂದು ಅಭಿಪ್ರಾಯಪಟ್ಟರು.
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮಂಜುನಾಥ ಜನ್ನು, ಮಹೇಶ ಶೆಟ್ಟಿ, ಹನುಮಂತ ಗೌಡ ಮುಂತಾದವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ಶ್ರೀಗಳ ಆಶೀರ್ವಾದ ಪದೆದರು.ಉಪ್ಪಿನಂಗಡಿ ಹವ್ಯಕ ಮಂಡಲದ ಮಾಣಿ, ಕಬಕ , ಉಜಿರೆ, ಉಪ್ಪಿನಂಗಡಿ, ಉರುವಾಲು, ವೇಣೂರು ಹವ್ಯಕ ವಲಯಗಳ ಪರವಾಗಿ ವೈ.ಗಣರಾಜ ಕೊಣಮ್ಮೆ ಕುಟುಂಬದವರು ಗುರುಭಿಕ್ಷಾ ಸೇವೆ ಸಮರ್ಪಿಸಿದರು.ನಾರಾಯಣ ಭಟ್ ಹಾರೆಕೆರೆ, ಅರವಿಂದ ದರ್ಬೆ, ಗಣಪತಿ ಜಟ್ಟಿಮನೆ, ಮಹೇಶ ಕುದಪುಲಾ, ಪರಮೇಶ್ವ ಭಟ್ ವೇಣೂರು , ಶಿವಪ್ರಸಾದ ವೇಣೂರು ಹಾಗೂ ದಿನಪ್ರಧಾನರಾಗಿ ವೆಂಕಟಗಿರಿ ಎಮ್.ಆರ್ ದಂಪತಿ ಹಾಜರಿದ್ದರು.
ಅಂದು ನಮ್ಮ ಪೂರ್ವಜರ ಅಧಃಪತನ ಊಟದ ವಿಷಯದಿಂದಲೇ ಆರಂಭವಾಯಿತು. ಇಂದು ನಾವು ಅದನ್ನು ಸರಿಪಡಿಸಿಕೊಳ್ಳುವ ಮೂಲಕ ಅಗ್ನಿಯನ್ನು ಸರಿಪಡಿಸಿಕೊಳ್ಳಬೇಕು. ನಮ್ಮನ್ನು ಸರಿಪಡಿಸಿಕೊಂಡರೆ, ಕಲಿಯುಗದಲ್ಲೂ ನಮ್ಮಲ್ಲಿ ನಾವು ಕೃತಯುಗವನ್ನು ತಂದುಕೊಳ್ಳಬಹುದು.-ಶ್ರೀ ರಾಘವೇಶ್ವರ ಭಾರತೀ ಸ್ವಾಮೀಜಿ.