ರೈತರು ಬೆಳೆದ ರಾಗಿಯನ್ನು ಕನಿಷ್ಠ ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡುವ ಉದ್ದೇಶದಿಂದ ಖರೀದಿ ಕೇಂದ್ರವನ್ನು ತೆರೆಯಲಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ತಿಳಿಸಿದರು. ದಲ್ಲಾಳಿಗಳಿಗೆ ರಾಗಿ ಮಾರಾಟ ಮಾಡದೆ ನೇರವಾಗಿ ರೈತರು ರಾಗಿ ಖರೀದಿ ಕೇಂದ್ರದ ಮೂಲಕ ಮಾರಾಟ ಮಾಡಿ ಆದಾಯ ದ್ವಿಗುಣ ಮಾಡಿಕೊಳ್ಳುವಂತೆ ಹಾಗೂ ಕೃಷಿ ಚಟುವಟಿಕೆಯೊಂದಿಗೆ ಹೈನುಗಾರಿಕೆಯಿಂದ ಆದಾಯ ದ್ವಿಗುಣ ಮಾಡಿಕೊಳ್ಳುವಂತೆ ರೈತರಿಗೆ ಮನವಿ ಮಾಡಿದರು ಕಾರ್ಯಕ್ರಮದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ತಹಸೀಲ್ದಾರ್ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.

ಕನ್ನಡಪ್ರಭ ವಾರ್ತೆ ರಾಮನಾಥಪುರ ರೈತರು ಬೆಳೆದ ರಾಗಿಯನ್ನು ಕನಿಷ್ಠ ಬೆಂಬಲ ಬೆಲೆಯೊಂದಿಗೆ ಖರೀದಿ ಮಾಡುವ ಉದ್ದೇಶದಿಂದ ಖರೀದಿ ಕೇಂದ್ರವನ್ನು ತೆರೆಯಲಾಗಿದೆ ಎಂದು ಮಾಜಿ ಸಚಿವ ಹಾಗೂ ಶಾಸಕ ಎ. ಮಂಜು ತಿಳಿಸಿದರು.ರಾಮನಾಥಪುರದ ಸುಬ್ರಹ್ಮಣ್ಯ ನಗರದಲ್ಲಿರುವ ರೇಷ್ಮೇ ಇಲಾಖೆ ಅವರಣದಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವತಿಯಿಂದ ರಾಗಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರೈತರು ತಮ್ಮ ಫ್ರೂಟ್ ಐಡಿ ಸಂಖ್ಯೆ, ಹಾಗೂ ಅಧಾರ್‌ ಕಾರ್ಡ್ ಅನ್ನು ಸಂಬಧಿಸಿದ ನೋಂದಣಿ ಅಥವಾ ಖರೀದಿ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಮೂಲಕ ನೋಂದಣಿ ಮಾಡಿಸಿದ ರೈತರು ತಮ್ಮ ಹೆಸರುಗಳನ್ನು ನೋಂದಾಯಿಸಿಕೊಂಡು ತಾವು ಬೆಳೆದ ರಾಗಿಯನ್ನು ಖರೀದಿ ಕೇಂದ್ರಕ್ಕೆ ತಂದು ಮಾರಾಟ ಮಾಡಬೇಕು. ಎಂಎಸ್‌ಪಿ ಯೋಜನೆಯಡಿ ನೇರವಾಗಿ ರೈತರಿಂದ ರಾಗಿ ಪ್ರತಿ ಕ್ವಿಂಟಲ್ ರಾಗಿಗೆ 4886 ರು. ನಿಗದಿಯಾಗಿದ್ದು, ದಲ್ಲಾಳಿಗಳಿಗೆ ರಾಗಿ ಮಾರಾಟ ಮಾಡದೆ ನೇರವಾಗಿ ರೈತರು ರಾಗಿ ಖರೀದಿ ಕೇಂದ್ರದ ಮೂಲಕ ಮಾರಾಟ ಮಾಡಿ ಆದಾಯ ದ್ವಿಗುಣ ಮಾಡಿಕೊಳ್ಳುವಂತೆ ಹಾಗೂ ಕೃಷಿ ಚಟುವಟಿಕೆಯೊಂದಿಗೆ ಹೈನುಗಾರಿಕೆಯಿಂದ ಆದಾಯ ದ್ವಿಗುಣ ಮಾಡಿಕೊಳ್ಳುವಂತೆ ರೈತರಿಗೆ ಮನವಿ ಮಾಡಿದರು ಕಾರ್ಯಕ್ರಮದಲ್ಲಿ ಆಹಾರ ಇಲಾಖೆ ಅಧಿಕಾರಿಗಳು ತಹಸೀಲ್ದಾರ್ ಹಾಗೂ ರೈತ ಮುಖಂಡರು ಉಪಸ್ಥಿತರಿದ್ದರು.ಈ ಸಂದರ್ಭದಲ್ಲಿ ರೈತ ಮುಖಂಡರಾದ ಯೋಗಣ್ಣ, ಹರಳಹಳ್ಳಿ ಎಚ್. ಎಸ್. ತಮ್ಮೇಗೌಡ, ಸಾಧಿಕ್, ಕುಮಾರ್, ಅಹಾರ ಇಲಾಖೆಯ ಮಂಜು, ಶಿವಕುಮಾರ್ ಮುಂತಾದವರು ಇದ್ದರು.