ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ನೊಬೆಲ್ ಪ್ರಶಸ್ತಿ ನೀಡಲಿ: ಕೆ.ಎಸ್.ಈಶ್ವರಪ್ಪ

| Published : Feb 20 2024, 01:50 AM IST / Updated: Feb 20 2024, 03:07 PM IST

KS Eshwarappa
ರಾಹುಲ್ ಗಾಂಧಿ, ಸಿದ್ದರಾಮಯ್ಯಗೆ ನೊಬೆಲ್ ಪ್ರಶಸ್ತಿ ನೀಡಲಿ: ಕೆ.ಎಸ್.ಈಶ್ವರಪ್ಪ
Share this Article
  • FB
  • TW
  • Linkdin
  • Email

ಸಾರಾಂಶ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.

ಚಿತ್ರದುರ್ಗ: ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಹುಲ್ ಗಾಂಧಿಗೆ ನೊಬೆಲ್ ಪ್ರಶಸ್ತಿ ಕೊಡಬೇಕೆಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ವ್ಯಂಗ್ಯವಾಡಿದರು.

ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಮಂದಿರ ಉದ್ಘಾಟನೆ ವೇಳೆಗೆ ಪರಿಶಿಷ್ಟರಿಗೆ ಆಹ್ವಾನ ನೀಡಿಲ್ಲ ಎಂದು ರಾಹುಲ್ ಹೇಳಿದ್ದಾರೆ.

ಮಾದಾರ ಚನ್ನಯ್ಯ ಶ್ರೀ, ಕಾಗಿನೆಲೆ ಶ್ರೀ ಸೇರಿ ಅನೇಕರು ಹೋಗಿ ಬಂದಿದ್ದಾರೆ. ಅಯೋಧ್ಯೆಗೆ ತೆರಳಿದ್ದಕ್ಕೆ ಶ್ರೀಗಳು ಆನಂದ ಪಟ್ಟಿದ್ದಾರೆ. ಇದಕ್ಕೆ ರಾಹುಲ್ ಏನು ಹೇಳುತ್ತಾರೆ ಎಂದರು.

ರಾಮಮಂದಿರ ನಿರ್ಮಾಣದಿಂದ ದೇಶದ ಜನರ ಒಗ್ಗೂಡಿಕೆ ಸಾಧ್ಯವಾಗಿದೆ. ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚಿನ ಲಾಭ ಆಗಲಿದೆ. ಎನ್‌ಡಿಎ 400ಕ್ಕೂ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ. ಒಂದು ಕಡೆ ಮೋದಿ ಆಡಳಿತ, ಮತ್ತೊಂದು ಕಡೆ ರಾಮ ಬಿಜೆಪಿಯ ಕಾಯಲಿದ್ದಾರೆ ಎಂದರು.

ಮುಖ್ಯಮಂತ್ರಿ ನುಡಿದಂತೆ ನಡೆದಿದ್ದೇವೆ ಎಂದು ಹೇಳುತ್ತಾರೆ. ಒಬ್ಬ ನಿರುದ್ಯೋಗಿಗೂ ಈವರೆಗೆ ಒಂದು ರುಪಾಯಿ ಕೊಟ್ಟಿಲ್ಲ.

ಪಾಪರ್ ಆಗಿದ್ದೇವೆಂದು ಹೇಳಲೂ ಸಿಎಂ, ಡಿಸಿಎಂ ಒಂದಾಗಲ್ಲ. ವಿದ್ಯುತ್ ಅಭಾವವಿದ್ದಾಗಲೂ ಅನೇಕ ಸಲ ದರ ಹೆಚ್ಚಿಸಿದ್ದಾರೆ ಎಂದರು.ಮಾದಾರ ಚನ್ನಯ್ಯಶ್ರೀ ಲೋಕಸಭೆಗೆ ಸ್ಪರ್ಧಿಸುವ ವಿಚಾರ ನನಗೆ ಗೊತ್ತಿಲ್ಲ. ಹಾಗೊಂದು ವೇಳೆ ಅವರು ಅಭ್ಯರ್ಥಿಯಾದರೆ ಖುಷಿ ಪಡುವುದಾಗಿ ಈಶ್ವರಪ್ಪ ಹೇಳಿದರು.