ರಾಹುಲ್ ಗಾಂಧಿ ಸೋಮವಾರ ಮಧ್ಯಾಹ್ನ 12.30ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಹೆಲಿಕಾಫ್ಟರ್ ಮೂಲಕ ಕೇರಳದ ವಯನಾಡಿಗೆ ತೆರಳಿದರು.

ಕನ್ನಡಪ್ರಭ ವಾರ್ತೆ ಮೈಸೂರು

ಕಾಂಗ್ರೆಸ್ ನಾಯಕ, ಸಂಸದ ರಾಹುಲ್ ಗಾಂಧಿ ಅವರು ವಯನಾಡು ಲೋಕಸಭಾ ಉಪ ಚುನಾವಣೆ ಪ್ರಚಾರದಲ್ಲಿ ಭಾಗವಹಿಸಲು ಸೋಮವಾರ ಮೈಸೂರು ಮೂಲಕ ವಯನಾಡಿಗೆ ತೆರಳಿದರು. ರಾಹುಲ್ ಗಾಂಧಿ ಸೋಮವಾರ ಮಧ್ಯಾಹ್ನ 12.30ಕ್ಕೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು. ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಹೆಲಿಕಾಫ್ಟರ್ ಮೂಲಕ ಕೇರಳದ ವಯನಾಡಿಗೆ ತೆರಳಿದರು. ಈ ವೇಳೆ ಕೆಪಿಸಿಸಿ ಉಪಾಧ್ಯಕ್ಷ ಎಸ್.ಎ. ಸುಧೀಂದ್ರ, ಎನ್ಎಸ್ ಯುಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಾಗೇಶ್ ಕರಿಯಪ್ಪ, ಮುಖಂಡರಾದ ಹೊಯ್ಸಳ, ರೋಹಿತ್ ಸಿಂಗ್ ಮೊದಲಾದವರು ಇದ್ದರು.