ಸಾರಾಂಶ
ಸಚಿವ ಸತೀಶ ಜಾರಕಿಹೊಳಿ ಅವರು ತಮ್ಮ ಪುತ್ರ ರಾಹುಲ್‌ಗೆ ಒಳ್ಳೆಯ ಸಂಸ್ಕಾರ ನೀಡಿ ಯುವ ನಾಯಕರಾಗಿ ರೂಪಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ
ಕನ್ನಡಪ್ರಭ ವಾರ್ತೆ ಗೋಕಾಕ
ಸಮಾಜಕ್ಕೆ ಭರವಸೆಯ ಒಳ್ಳೆಯ ಯುವನಾಯಕರಾಗಿ ರಾಹುಲ್ ಜಾರಕಿಹೊಳಿ ಹೊರ ಹೊಮ್ಮುತ್ತಿದ್ದಾರೆಂದು ಹುಣಸಿಕೊಳ್ಳ ಮಠದ ಶ್ರೀ ಸಿದ್ದಬಸವ ಸ್ವಾಮೀಜಿ ಹೇಳಿದರು.ನಗರದ ಹಿಲ್ ಗಾರ್ಡನನಲ್ಲಿ ಶುಕ್ರವಾರ ಹಮ್ಮಿಕೊಂಡ ಯುವನಾಯಕ ರಾಹುಲ್ ಜಾರಕಿಹೊಳಿ 26ನೇ ಜನ್ಮ ದಿನದ ಸಂಭ್ರಮಾಚರಣೆ ದಿವ್ಯ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು. ಬುದ್ಧ, ಬಸವ, ಅಂಬೇಡ್ಕರ್ ಅವರ ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸುತ್ತ ತಮ್ಮ 30ವರ್ಷದ ಸುದೀರ್ಘ ರಾಜಕೀಯ ಪಯಣದಲ್ಲಿ ಯಶಸ್ವಿಯಾಗಿರುವ ಸಚಿವ ಸತೀಶ ಜಾರಕಿಹೊಳಿ ಅವರು ತಮ್ಮ ಪುತ್ರ ರಾಹುಲ್‌ಗೆ ಒಳ್ಳೆಯ ಸಂಸ್ಕಾರ ನೀಡಿ ಯುವ ನಾಯಕರಾಗಿ ರೂಪಿಸುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆ ಎಂದರು.
ಜಾತಿ ಮತ ಪಂಥಗಳನ್ನು ಬದಿಗೊತ್ತಿ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿರುವ ಸತೀಶ ಜಾರಕಿಹೊಳಿ ಅವರು ಯಾರ ವಿರೋಧಿಯು ಅಲ್ಲ. ಅವರ ಸುಪುತ್ರ ರಾಹುಲ್ ಅವರು ತಮ್ಮ ತಂದೆಯ ಮಾರ್ಗದರ್ಶನದಲ್ಲಿ ನಡೆದು ಸರಳ ಸಜ್ಜನಿಕೆಯ ಯುವ ನಾಯಕರಾಗಿದ್ದಾರೆ. ಭವಿಷ್ಯದಲ್ಲಿ ಅವರ ಮೇಲೆ ಬಹುದೊಡ್ಡ ಜವಾಬ್ದಾರಿ ಇದ್ದು ಅದನ್ನು ನಿಭಾಯಿಸಿ ಯಶಸ್ವಿಯಾಗಲೆಂದು ಹಾರೈಸಿದರು. ಈ ಸಂದರ್ಭದಲ್ಲಿ ಶೂನ್ಯ ಸಂಪಾದನ ಮಠದ ಶ್ರೀ ಬಸವಪ್ರಭು ಸ್ವಾಮಿಜಿ, ಕಪರಟ್ಟಿಯ ಬಸವರಾಜ ಸ್ವಾಮಿಜಿ, ವಿಧಾನ ಪರಿಷತ ಸದಸ್ಯ ಲಖನ ಜಾರಕಿಹೊಳಿ, ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಸೇರಿದಂತೆ ಜಿಲ್ಲೆಯ ಹಲವಾರು ಮುಖಂಡರು ಪಾಲ್ಗೊಂಡು ರಾಹುಲ್‌ಗೆ ಹುಟ್ಟು ಹಬ್ಬದ ಶುಭಾಶಯ ಕೋರಿದರು.