800 ಕಿ.ಮೀ. ದೂರದ ವಿಶಾಖಪಟ್ಟಣ ರೈಲ್ವೆ ವಲಯಕ್ಕೆ ರಾಯಚೂರು, ಯಾದಗಿರಿ ಜಿಲ್ಲೆ!ಕಲಬುರಗಿಯಲ್ಲಿ ಪ್ರತ್ಯೇಕ ರೈಲ್ವೆ ವಲಯ ಸ್ಥಾಪನೆಗೆ ಕಲ್ಯಾಣ ಕರ್ನಾಟಕದ ಭಾಗದ ಜನರು ಆಗ್ರಹಿಸುತ್ತಿರುವಾಗಲೇ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ರೈಲ್ವೆ ಜಾಲವನ್ನು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ಬುಧವಾರವಷ್ಟೇ ಆರಂಭವಾದ ದಕ್ಷಿಣ ಕರಾವಳಿ ರೈಲ್ವೆ ವಲಯಕ್ಕೆ ಸೇರ್ಪಡೆ ಮಾಡಲಾಗಿದೆ. ಇದು ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ.