ಅಧಿಕಾರಿಗಳೊಂದಿಗೆ ಸಚಿವ ಬೋಸರಾಜು ಸುಧೀರ್ಘ ಚರ್ಚೆ ಶುದ್ಧ ಕುಡಿಯುವ ನೀರು ಸರಬರಾಜು, ವಿಮಾನ ನಿಲ್ದಾಣ ಕಾಮಗಾರಿ, ಮಾವಿನ ಕೆರೆ ಅಭಿವೃದ್ಧಿ, ಶೈಕ್ಷಣಿಕ ಸೌಲಭ್ಯಗಳು, ಕೆಕೆಆರ್ ಡಿ ಬಿ ಅಭಿವೃದ್ಧಿ ಕಾಮಗಾರಿಗಳು, ಕೇಂದ್ರ ಗ್ರಂಥಾಲಯಕ್ಕೆ ಸೌಲಭ್ಯ ಸೇರಿ ಜಿಲ್ಲೆಯ ವಿವಿಧ ಸಮಸ್ಯೆಗಳ ಕುರಿತು ಸಣ್ಣ ನೀರಾವರಿ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಸಚಿವ ಎನ್.ಎಸ್ ಬೋಸರಾಜು ಅವರು ನಗರದ ಡಿಸಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳ ಜೊತೆ ಸುದೀರ್ಘವಾಗಿ ಚರ್ಚಿಸಿದರು.