ಭಾರತೀಯ ಸಂಸ್ಕೃತಿ ಜಗತ್ತಿಗೆ ಪರಿಚಯಿಸಿದ ಜಕಣಾಚಾರಿ: ಡಾ.ಕೆ.ಆರ್ ದುರುಗೇಶತಮ್ಮ ಅದ್ಭುತವಾದ ಕಲೆ ಮೂಲಕ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಪರಿಚಯಿಸಿರುವ ಅಮರ ಶಿಲ್ಪಿ ಜಕಣಾಚಾರಿ ಅವರು ಆದರ್ಶ, ಮಾನವೀಯ ಮೌಲ್ಯಗಳನ್ನು ಮಕ್ಕಳಲ್ಲಿ ಬೆಳೆಸಿ ಹಾಗೂ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡುವ ಮೂಲಕ ವಿಶ್ವಕರ್ಮ ಸಮಾಜ ಅಭಿವೃದ್ಧಿ ಹೊಂದಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಕೆ.ಆರ್ ದುರುಗೇಶ ಹೇಳಿದರು.ಸ್ಥಳೀಯ ಕನ್ನಡ ಭವನದಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಜ್ಯೋತಿ ಬೆರಳಗಿಸುವ ಮೂಲಕ ಉದ್ಘಾಟಿಸಿ ಸೋಮವಾರ ಮಾತನಾಡಿದರು.