ಜಿಲ್ಲೆಯಲ್ಲಿ 79 ಟನ್ ಯೂರಿಯಾ ಕಾಳ ಸಂತೆಗೆ !ಕನ್ನಡಪ್ರಭ ವಾರ್ತೆ ರಾಯಚೂರುರಾಜ್ಯಾದ್ಯಂತ ರಸಗೊಬ್ಬರ ಕೃತಕ ಕೊರತೆಯ ಸಮಸ್ಯೆ ತೀವ್ರವಾಗಿರುವ ಸಮಯದಲ್ಲಿಯೇ ಜಿಲ್ಲೆಯಲ್ಲಿ ಸುಮಾರು 79 ಟನ್ ಯೂರಿಯಾ ಕಾಳ ಸಂತೆಯಲ್ಲಿ ಮಾರಾಟ ಮಾಡಿರುವ ಪ್ರಕರಣ ಬಯಲಿಗೆ ಬಂದಿದ್ದು, ರಸಗೊಬ್ಬರ ಅಭಾವದ ಪರಿಸ್ಥಿತಿಗೆ ಕಾರಣವಾಗಿರುವ ಹಲವಾರು ಅಂಶಗಳಲ್ಲಿ ಇದೊಂದು ಎನ್ನುವ ಸಂಗತಿಯನ್ನು ಪ್ರತಿಬಿಂಬಿಸುವಂತೆ ಮಾಡಿದೆ.