ಸಾರಾಂಶ
ಕನ್ನಡಪ್ರಭ ವಾರ್ತೆ ಇಂಡಿ ತಾಲೂಕಿನ ಅಥರ್ಗಾ ಗ್ರಾಮದಿಂದ 1 ಕಿ.ಮೀ ಅಂತರದಲ್ಲಿ ನಾಗಠಾಣ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಬೈಕ್ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು, 9.540 ಲೀಟರ್ ಮದ್ಯ ಹಾಗೂ 7.8 ಲೀಟರ್ ಬಿಯರನ್ನು ಜಪ್ತಿ ಮಾಡಿಕೊಂಡಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ದಿಲೀಪ ಯಮುನಪ್ಪ ಭಜಂತ್ರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕನ್ನಡಪ್ರಭ ವಾರ್ತೆ ಇಂಡಿ
ತಾಲೂಕಿನ ಅಥರ್ಗಾ ಗ್ರಾಮದಿಂದ 1 ಕಿ.ಮೀ ಅಂತರದಲ್ಲಿ ನಾಗಠಾಣ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಬೈಕ್ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿದ್ದು, 9.540 ಲೀಟರ್ ಮದ್ಯ ಹಾಗೂ 7.8 ಲೀಟರ್ ಬಿಯರನ್ನು ಜಪ್ತಿ ಮಾಡಿಕೊಂಡಿದ್ದಾರೆ. ದೇವರಹಿಪ್ಪರಗಿ ತಾಲೂಕಿನ ಪಡಗಾನೂರ ಗ್ರಾಮದ ದಿಲೀಪ ಯಮುನಪ್ಪ ಭಜಂತ್ರಿ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಆತನ ವಿರುದ್ಧ ದಾಖಲಿಸಿಕೊಂಡು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ಅಬಕಾರಿ ನಿರೀಕ್ಷಕ ರಾಹುಲ್ ನಾಯಕ ನೇತೃತ್ವದಲ್ಲಿ ಅಬಕಾರಿ ಉಪ ನಿರೀಕ್ಷಕಿ ಪರೀನಾ ವನಕ್ಯಾಳ ದಾಳಿ ಮಾಡಿದ್ದು, ಆರೋಪಿ ವಿರುದ್ದ ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಅಬಕಾರಿ ಇಲಾಖೆಯ ಸಿಬ್ಬಂದಿಗಳಾದ ಅಶೋಕ ಗೋಣಸಗಿ, ಬಸವಂತ ಭೈರಗೊಂಡ, ಸಂಜೀವಕುಮಾರ ಹೂವಿನವರ, ಲಾಳೆಮಶ್ಯಾಕ ಮಸಳಿ ದಾಳಿಯಲ್ಲಿ ಪಾಲ್ಗೊಂಡಿದರು. ಈ ಕುರಿತು ಇಂಡಿ ಅಬಕಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಬಕಾರಿ ನಿರೀಕ್ಷಕ ರಾಹುಲ್ ನಾಯಕ ತಿಳಿಸಿದ್ದಾರೆ.