ಸಾರಾಂಶ
ಆನಂದಪುರ: ಕಣ್ಣೂರು ಗ್ರಾಮದಲ್ಲಿ ಅಕ್ರಮ ಬೆಂಬಿಟ್ಟಿಗೆ ಕಲ್ಲು ಗಣಿಗಾರಿಕೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ ಘಟನೆ ಶನಿವಾರ ಬೆಳಗ್ಗೆ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಆನಂದಪುರ ವ್ಯಾಪ್ತಿಯಲ್ಲಿ ಅಕ್ರಮ ಜಂಬಿಟ್ಟಿಗೆ ಕಲ್ಲು ಕೋರೆಗಳು ನಡೆಯುತ್ತಿರುವ ಬಗ್ಗೆ ಮಾಹಿತಿ ತಿಳಿದು ಜಿಲ್ಲೆಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ಗೌತಮಪುರ ಗ್ರಾಪಂ ವ್ಯಾಪ್ತಿಯ ಕಣ್ಣೂರು ಸರ್ವೆ ನಂಬರ್ 232ರಲ್ಲಿ 3ಭಾಗದಲ್ಲಿ ನಡೆಯುತ್ತಿರುವ ಅಕ್ರಮ ಜಂಬಿಟ್ಟಿಗೆ ಕಲ್ಲು ಕೋರಿಗಳ ಮೇಲೆ ಸಾಗರ ತಾಲೂಕು ತಹಸೀಲ್ದಾರ್ ಚಂದ್ರ ನಾಯಕ್, ಶಿವಮೊಗ್ಗ ಜಿಲ್ಲಾ ಭೂ ಮತ್ತು ಗಣಿ ವಿಜ್ಞಾನ ಇಲಾಖೆಯ ಅಧಿಕಾರಿ ಜ್ಯೋತಿ ನೇತೃತ್ವದಲ್ಲಿ ಅಕ್ರಮ ಜಂಬಿಟ್ಟಿಗೆ ಕಲ್ಲು ಕೋರೆಯ ಮೇಲೆ ದಾಳಿ ನಡೆಸಲಾಯಿತು. ಅಕ್ರಮ ಜಂಬಿಟ್ಟಿಗೆ ಕೋರೆ ನಡೆಸುತ್ತಿರುವ ಮೂರು ಜನರ ಮೇಲೆ ಪ್ರಕರಣ ದಾಖಲಿಸಿರುವುದಾಗಿ ಅಧಿಕಾರಿಗಳಿಂದ ತಿಳಿದು ಬಂದಿದೆ.
------------------ಫೋಟೋ: ಆನಂದಪುರ ಸಮೀಪದ ಕಣ್ಣೂರು ಗ್ರಾಮದಲ್ಲಿ ಅಕ್ರಮವಾಗಿ ನಡೆಸುತ್ತಿರುವ ಜಂಬಿಟ್ಟಿಗೆ ಕಲ್ಲು ಕೋರೆಯ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
29 ಎ, ಎನ್, ಪಿ 1