ನರಸಿಂಹರಾಜಪುರಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನ ವಶಪಡಿಸಿಕೊಂಡು 23 ಪ್ರಕರಣ ದಾಖಲಿಸಿ 3100 ರು. ದಂಡ ವಿಧಿಸಲಾಯಿತು.

- ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ನೇತೃತ್ವ

ಕನ್ನಡಪ್ರಭ ವಾರ್ತೆ, ನರಸಿಂಹರಾಜಪುರ

ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ಆರೋಗ್ಯ ಇಲಾಖೆ ನೇತೃತ್ವದಲ್ಲಿ ಶುಕ್ರವಾರ ಪಟ್ಟಣದ ವಿವಿಧ ಅಂಗಡಿಗಳ ಮೇಲೆ ದಾಳಿ ಮಾಡಿ ತಂಬಾಕು ಉತ್ಪನ್ನ ವಶಪಡಿಸಿಕೊಂಡು 23 ಪ್ರಕರಣ ದಾಖಲಿಸಿ 3100 ರು. ದಂಡ ವಿಧಿಸಲಾಯಿತು.

ಈ ಸಂದರ್ಭದಲ್ಲಿ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರ ದಿನೇಶ್‌ ಮಾತನಾಡಿ, 18 ವರ್ಷದ ಒಳಗಿನ ಮಕ್ಕಳಿಗೆ ತಂಬಾಕು ಉತ್ಪನ್ನಗಳಾದ ಸಿಗರೇಟು, ಬೀಡಿ, ಪಾನ್ ಪರಾಗ್‌, ಗುಟ್ಕಾ, ಹೊಗೆಸೊಪ್ಪು ಮಾರಾಟ ಮಾಡುವುದು ಶಿಕ್ಷಾರ್ಹವಾಗಿದೆ. ತಂಬಾಕು ಸೇವನೆಯಿಂದ ಮಾರಕ ರೋಗವಾದ ಕ್ಯಾನ್ಸರ್‌ ಬರಲಿದೆ. ಮುಂದಿನ ದಿನಗಳಲ್ಲಿ ಪ್ರತಿ ತಿಂಗಳೂ ತಪ್ಪದೆ ತಂಬಾಕು ಉತ್ಪನ್ನ ಮಾರಾಟ ಮಾಡುವ ಅಂಗಡಿಗಳ ಮೇಲೆ ದಾಳಿ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಮಾಜ ಕಾರ್ಯಕರ್ತ ರಾಘವೇಂದ್ರ, ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯಕುಮಾರ್‌, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಆರ್‌.ವಿ ಮಂಜುನಾಥ್‌, ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ದರ್ಶನ್‌, ವಿಜಯಕುಮಾರ್, ಜಿ.ನಾಗೇಂದ್ರಪ್ಪ, ಕೇಶವಮೂರ್ತಿ, ಪೊಲೀಸ್ ಕಾನ್ಸಟೇಬಲ್ ಕಾಂತೇಜ್ ಇದ್ದರು.