ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ರೈಲ್ವೆ ಬ್ಯಾರಿಕೇಡ್

| Published : Mar 04 2024, 01:16 AM IST

ಸಾರಾಂಶ

ಹಾರೋಹಳ್ಳಿ: ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕಬೇಕೆಂಬ ಜನರ ಬಹುದಿನಗಳ ಬೇಡಿಕೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ಹಾರೋಹಳ್ಳಿ: ಮಾನವ ಮತ್ತು ವನ್ಯಜೀವಿ ಸಂಘರ್ಷಕ್ಕೆ ಕಡಿವಾಣ ಹಾಕಬೇಕೆಂಬ ಜನರ ಬಹುದಿನಗಳ ಬೇಡಿಕೆಗೆ ಶಾಶ್ವತ ಪರಿಹಾರ ಕಲ್ಪಿಸಲು ಸರ್ಕಾರ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದರು.

ತಾಲೂಕಿನ ಬಾಚಹಳ್ಳಿ ಬಳಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಮಾನವ ಮತ್ತು ವನ್ಯಜೀವಿ ಸಂಘರ್ಷ ಪ್ರಕೃತಿಯಲ್ಲಿ ಸಹಜ. ನಾವೆಲ್ಲರೂ ಜೀವನಕ್ಕಾಗಿ ಹೋರಾಡುವಂತೆ ಪ್ರಾಣಿಗಳು ತಮ್ಮ ಆಹಾರ ನೀರಿಗಾಗಿ ಹುಡುಕುತ್ತ ಬಂದಾಗ ಮಾನವ ಮತ್ತು ವನ್ಯಜೀವಿ ಸಂಘರ್ಷ ನಡೆಯುತ್ತದೆ. ಇತ್ತೀಚೆಗೆ ಈ ಭಾಗದಲ್ಲಿ ಅದು ಹೆಚ್ಚಾಗಿದ್ದು ಕೆಲವರು ಪ್ರಾಣ ಕಳೆದುಕೊಂಡಿದ್ದಾರೆ. ಅದಕ್ಕೆ ರೈಲ್ವೆ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ ಎಂದರು.

ಈ ಭಾಗದಲ್ಲಿ ವನ್ಯಜೀವಿ ಮತ್ತು ಮಾನವನ ಸಂಘರ್ಷ ಹೆಚ್ಚಾದ ಹಿನ್ನೆಲೆಯಲ್ಲಿ ಸಂಸದ ಡಿ.ಕೆ. ಸುರೇಶ್ ಅವರು ನಮ್ಮ ಭಾಗದಲ್ಲಿ ಕಾಡುಪ್ರಾಣಿಗಳ ಹಾವಳಿ ಹೆಚ್ಚಿದೆ ತಕ್ಷಣ ನಿಯಂತ್ರಣ ಕ್ರಮ ತೆಗೆದುಕೊಳ್ಳಬೇಕು ಎಂದು ಒತ್ತಡ ಹಾಕಿ 50 ಕೋಟಿಗೂ ಹೆಚ್ಚು ಅನುದಾನ ತಂದಿದ್ದಾರೆ. ಇಡೀ ರಾಜ್ಯದಲ್ಲಿ ಯಾವ ಜಿಲ್ಲೆಗೂ ಇಷ್ಟೊಂದು ಅನುದಾನ ಕೊಟ್ಟಿಲ್ಲ. ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಅವರ ಸಹಕಾರದಿಂದ ಇದು ಸಾಧ್ಯವಾಗಿದೆ ಎಂದರು.

ಈಗಾಗಲೇ ಹಾರೋಹಳ್ಳಿ ಹಾಗೂ ಮರಳವಾಡಿ ಭಾಗದ ಎಲ್ಲಾ ಮನೆಗೂ 300 ಕೋಟಿ ಅನುದಾನದಲ್ಲಿ ಕಾವೇರಿ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಲಾಗಿದೆ. 100 ಕೋಟಿ ಅನುದಾನದ ರಸ್ತೆ ಹಾಗೂ ಚರಂಡಿ ಕೆಲಸ ಉದ್ಘಾಟಿಸಲಾಗಿದೆ. ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ಮೂರು ಸಾವಿರ ಸೈಟ್‌ಗಳನ್ನು ಹಂಚಿಕೆ ಮಾಡುವ ಯೋಜನೆ ರೂಪಿಸಲಾಗಿದೆ. ಪ್ರತಿ ಪಂಚಾಯಿತಿಗೆ 150 ಮನೆ ಕಟ್ಟಿಕೊಡಲು ಅವಕಾಶ ಮಾಡಿಕೊಟ್ಟಿದ್ದೇವೆ. ಇ-ಖಾತೆ, ಪ್ರತಿ ಪಂಚಾಯಿತಿ ವ್ಯಾಪ್ತಿಯಲ್ಲಿ ಹೈಟೆಕ್ ಸ್ಕೂಲ್ ವ್ಯವಸ್ಥೆ, ಆಟದ ಮೈದಾನ, ಶೌಚಾಲಯ, ವ್ಯಾಸಂಗಕ್ಕೆ ಅಗತ್ಯ ವ್ಯವಸ್ಥೆಗಳು ಹಾಗೂ ಶಿಕ್ಷಕ-ಶಿಕ್ಷಕಿಯರು ಒಂದೇ ಶಾಲೆಯಲ್ಲಿ ಇರುವಂತ ವ್ಯವಸ್ಥೆ ಮಾಡಿಕೊಡಲಾಗುವುದು. ಈಗಾಗಲೇ ರಾಮನಗರ ಕ್ಷೇತ್ರಕ್ಕೆ 10 ಹೈಟೆಕ್ ಸ್ಕೂಲ್ ಪ್ರಾರಂಭಕ್ಕೆ ಯೋಜನೆ ರೂಪಿಸಿದ್ದು, ಶೀಘ್ರದಲ್ಲಿಯೇ ನೂತನ ಹೈಟೆಕ್ ಶಾಲೆ ತೆರೆಯಲಾಗುತ್ತದೆ ಎಂದರು.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಭಾಕರ್ ಪ್ರಿಯದರ್ಶಿ ಮಾತನಾಡಿ, ಕಾಡಾನೆ ನಿಯಂತ್ರಣಕ್ಕೆ ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಶಾಶ್ವತ ಪರಿಹಾರ. ಕಾಮಗಾರಿಯನ್ನು 3ರಿಂದ 4 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸುತ್ತೇವೆ ಎಂದು ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ರಾಮಕೃಷ್ಣ ಮಾತನಾಡಿ, ಬನ್ನೇರುಘಟ್ಟ ವ್ಯಾಪ್ತಿಯಲ್ಲಿ 13 ಕಿ.ಮೀ. ಮತ್ತು ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯಲ್ಲಿ 13 ಕಿ.ಮೀ. ರಾಮನಗರ ಜಿಲ್ಲಾ ವ್ಯಾಪ್ತಿಯಲ್ಲಿ 4 ಕಿ.ಮೀ. ರೈಲ್ವೆ ಬ್ಯಾರಿಕೇಡ್ ನಿರ್ಮಾಣ ಮಾಡಲಾಗುತ್ತಿದೆ ಎಂದರು.

ಗ್ರಾಪಂ ಅಧ್ಯಕ್ಷೆ ರಶ್ಮಿ, ತಾಪಂ ಇಒ ಬೈರಪ್ಪ, ಎಂಜಿನಿಯರ್ ಚಂದ್ರಶೇಖರ್, ಎಸಿಎಫ್ ಗಣೇಶ್, ಆರ್.ಎಫ್.ಒ ದಾಳೇಶ್, ಕಾಂಗ್ರೆಸ್ ಮುಖಂಡ ಮಹೇಶ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ್, ತಾಪಂ ಮಾಜಿ ಸದಸ್ಯ ವಿಶ್ವಪ್ರಿಯ, ಮುಖಂಡ ಈಶ್ವರ್, ಜಿಪಂ ಮಾಜಿ ಸದಸ್ಯ ಭುಜಂಗಯ್ಯ, ಗ್ರಾಪಂಮಾಜಿ ಅಧ್ಯಕ್ಷ ಬೈರೇಗೌಡ, ಸರ್ದಾರ್ ಹುಸೇನ್, ಪುಟ್ಟಸ್ವಾಮಿ, ಪಿಡಿಒ ವಿನುತಾ ಮತ್ತಿತರರಿದ್ದರು.

3ಕೆಆರ್ ಎಂಎನ್ 8.ಜೆಪಿಜಿ

ಹಾರೋಹಳ್ಳಿ ತಾಲೂಕಿನ ಬಾಚಹಳ್ಳಿ ಬಳಿ ರೈಲ್ವೆ ಬ್ಯಾರಿಕೇಡ್ ನಿರ್ಮಾಣಕ್ಕೆ ಶಾಸಕ ಇಕ್ಬಾಲ್ ಹುಸೇನ್ ಶಂಕುಸ್ಥಾಪನೆ ನೆರವೇರಿಸಿದರು.

--------------------------------