ಕನ್ನಡಪ್ರಭ ವಾರ್ತೆ ರಾಮದುರ್ಗ ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನದಲ್ಲಿ ಲೋಕಾಪೂರದಿಂದ- ರಾಮದುರ್ಗ- ಸವದತ್ತಿ ಮಾರ್ಗವಾಗಿ ಧಾರವಾಡ ರೈಲ್ವೆ ಮಾರ್ಗಕ್ಕೆ ಅನುದಾನ ಮೀಸಲಿಡಲು ಒತ್ತಾಯಿಸಿ ರಾಮದುರ್ಗ ರೈಲು ಹೋರಾಟ ಕ್ರಿಯಾ ಸಮಿತಿ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ನೈರುತ್ಯ ರೈಲ್ವೆ ವಲಯದ ಸಲಹಾ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಭೇಟಿ ನೀಡಿ ರೈಲ್ವೆ ಸಚಿವರನ್ನು ಭೇಟಿಯಾಗಿ ಅನುಷ್ಠಾನಕ್ಕೆ ಒತ್ತಾಯಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಕೊನೆಗೊಳಿಸಲಾಗಿದೆ.
ಕನ್ನಡಪ್ರಭ ವಾರ್ತೆ ರಾಮದುರ್ಗ
ಕೇಂದ್ರ ಸರ್ಕಾರದ ಬಜೆಟ್ ಅಧಿವೇಶನದಲ್ಲಿ ಲೋಕಾಪೂರದಿಂದ- ರಾಮದುರ್ಗ- ಸವದತ್ತಿ ಮಾರ್ಗವಾಗಿ ಧಾರವಾಡ ರೈಲ್ವೆ ಮಾರ್ಗಕ್ಕೆ ಅನುದಾನ ಮೀಸಲಿಡಲು ಒತ್ತಾಯಿಸಿ ರಾಮದುರ್ಗ ರೈಲು ಹೋರಾಟ ಕ್ರಿಯಾ ಸಮಿತಿ ಕೈಗೊಂಡಿದ್ದ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಸ್ಥಳಕ್ಕೆ ನೈರುತ್ಯ ರೈಲ್ವೆ ವಲಯದ ಸಲಹಾ ಸಮಿತಿ ಸದಸ್ಯ ಎಫ್.ಎಸ್.ಸಿದ್ದನಗೌಡರ ಭೇಟಿ ನೀಡಿ ರೈಲ್ವೆ ಸಚಿವರನ್ನು ಭೇಟಿಯಾಗಿ ಅನುಷ್ಠಾನಕ್ಕೆ ಒತ್ತಾಯಿಸುವುದಾಗಿ ಭರವಸೆ ನೀಡಿದ ಹಿನ್ನಲೆಯಲ್ಲಿ ಸತ್ಯಾಗ್ರಹವನ್ನು ತಾತ್ಕಾಲಿಕವಾಗಿ ಕೊನೆಗೊಳಿಸಲಾಗಿದೆ.ಹಲವು ದಿನಗಳಿಂದ ನಡೆದಿದ್ದ ಪ್ರತಿಭಟನೆ ಗುರುವಾರ ಹೋರಾಟದ ವೇದಿಕೆಗೆ ಎಫ್.ಎಸ್.ಸಿದ್ದನಗೌಡರ ಆಗಮಿಸಿ, ಶೀಘ್ರದಲ್ಲೇ ಕೇಂದ್ರ ರೈಲ್ವೆ ಸಚಿವರಿಗೆ ಭೇಟಿಯಾಗಿ ರೈಲ್ವೆ ಮಾರ್ಗ ಅನುಷ್ಠಾನಕ್ಕಾಗಿ ಒತ್ತಾಯಿಸುತ್ತೇವೆಂದು ಭರವಸೆ ನೀಡಿದರು.ಈ ಸಂದರ್ಭದಲ್ಲಿ ಎಫ್.ಎಸ್.ಸಿದ್ದನಗೌಡರ ಮಾತನಾಡಿ, ಲೋಕಾಪೂರದಿಂದ ಧಾರವಾಡ ರೈಲ್ವೆ ಮಾರ್ಗ ಯೋಜನೆಗೆ ಡಿಪಿಎಆರ್ ಸಿದ್ಧವಾಗಿದ್ದು. ಇದೇ ಬಜೆಟ್‌ನಲ್ಲಿ ಯೋಜನೆಯನ್ನು ಅನುಷ್ಠಾನಗೊಳಿಸಬೇಕೆಂದು ಹುಬ್ಬಳ್ಳಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಳೆದ 3 ತಿಂಗಳ ಹಿಂದೆಯೇ ಪ್ರಸ್ತಾವನೆ ಸಲ್ಲಿಸಿದ್ದೇನೆ. ಸವದತ್ತಿ ಮತ್ತು ರಾಮದುರ್ಗ ಬೆಳಗಾವಿ ಜಿಲ್ಲೆಯ ಹಿಂದುಳಿದ ತಾಲೂಕುಗಳಾಗಿದ್ದು ಸಾಕಷ್ಟು ಸೌಲಭ್ಯಗಳಿಂದ ವಂಚಿತವಾಗಿವೆ. ಈ ಮಾರ್ಗ ನಿರ್ಮಾಣವಾದರೆ ಅನೇಕ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುವ ಕೋಟ್ಯಂತರ ಭಕ್ತರಿಗೆ ಅನುಕೂಲವಾಗುತ್ತದೆ. ಆದಷ್ಟು, ಬೇಗ ಈ ರೈಲು ಮಾರ್ಗ ಅನುಷ್ಠಾನಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆಂದು ಭರವಸೆ ನೀಡಿದರು. ಈ ವೇಳೆ ಡಾ.ಕೆ.ವಿ.ಪಾಟೀಲ, ರಾಜಶೇಖರ್ ಶಲವಡಿ, ಗೈಬು ಜೈನೆಖಾನ್, ಶಫಿ ಬೆಣ್ಣಿ ಮಾತನಾಡಿದರು. ಹೋರಾಟ ಸಮಿತಿಯ ಮುಖಂಡರಾದ ಪಿರಾಜಿ ಭೋಸಲೇ, ಶೇಖರ್ ಸಿದ್ದಲಿಂಗಪ್ಪನವರ, ಎಸ್.ಜಿ.ಚಿಕ್ಕನರಗುಂದ, ಚಂದ್ರಕಾಂತ್ ಮಾಳದಕರ, ಎಂ.ಕೆ.ಯಾದವಾಡ ಸೇರಿ ಹಲವರು ಇದ್ದರು.