ಸಾರಾಂಶ
ಸುರಪುರ ತಾಲೂಕಿನ ಅಡ್ಡೊಡಗಿ ಗ್ರಾಮದಲ್ಲಿ ಸಿಡಿಲಿಗೆ ಕುರಿಗಳು ಬಲಿಯಾಗಿರುವುದು.
ಕನ್ನಡಪ್ರಭ ವಾರ್ತೆ ಸುರಪುರ
ತಾಲೂಕು ವ್ಯಾಪ್ತಿಯಲ್ಲಿ ಕಳೆದು ಮೂರು ದಿನಗಳಿಂದ ಉತ್ತಮ ಮಳೆಯಾಗುತ್ತಿರುವುದರಿಂದ ಕೃಷಿಕರ ಮೊಗದಲ್ಲಿ ಮಂದಹಾಸ ಮೂಡಿದ್ದು, ಒಂದು ಕಡೆಯಾದರೆ, ಪ್ರಕೃತಿ ವಿಕೋಪಕ್ಕಿಡಾಗಿ ಗುಡುಗು ಸಿಡಿಲಿನಿಂದ ಮೂಖ ಪ್ರಾಣಿಗಳು ಬಲಿಯಾಗುತ್ತಿವೆ.ತಾಲೂಕಿನ ಅಡ್ಡೊಡಗಿ ಗ್ರಾಮದ ರಾಮಯ್ಯ ಮರೆಯ್ಯ ಎಂಬುವರಿಗೆ ಸೇರಿದ ಎರಡು ಕುರಿಗಳು ಸಿಡಿಲಿಗೆ ಬಲಿಯಾಗಿವೆ. ಘಟನೆ ತಿಳಿದು ಸ್ಥಳಕ್ಕೆ ಗ್ರಾಮ ಆಡಳಿತ ಅಧಿಕಾರಿಗಳು ಭೇಟಿ ನೀಡಿ ಪಂಚನಾಮೆ ಮಾಡಿ ರೈತರಿಗೆ ಪರಿಹಾರ ಒದಗಿಸುವ ಭರವಸೆ ನೀಡಿದ್ದೇವೆ ಎಂದು ಆರ್‌ಐ ಬಸವರಾಜ ಬಿರಾದಾರ್ ತಿಳಿಸಿದ್ದಾರೆ.
ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗುವ ಸಂಭವವಿದ್ದು, ಈ ಸಂದರ್ಭದಲ್ಲಿ ಗುಡುಗು, ಸಿಡಿಲಿನಿಂದ ತಪ್ಪಿಸಿಕೊಳ್ಳಲು ಮರದ ಕೆಳಗೆ ನಿಲ್ಲದೆ. ಜೀವ ರಕ್ಷಣೆಗೆ ಉತ್ತಮ ಸ್ಥಳ ನೋಡಿ ನಿಂತು ಕೊಳ್ಳಬೇಕೆಂದು ತಹಸೀಲ್ದಾರ್ ನಾಗಮ್ಮ ಕಟ್ಟಿಮನಿ ಮನವಿ ಮಾಡಿದ್ದಾರೆ.