ಕೊಡಗಿನ ವಿವಿಧೆಡೆ ಮಳೆ

| Published : May 09 2024, 01:02 AM IST

ಸಾರಾಂಶ

ವಿವಿಧ ಕಡೆ ಬುಧವಾರ ಕೂಡ ಮಳೆಯಾಗಿದೆ. ಬೆಳೆಗಾರರಲ್ಲಿ ಹಬ್ಬದ ವಾತಾವರಣ ಮೂಡಿಸಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯ ವಿವಿಧ ಕಡೆಯಲ್ಲಿ ಬುಧವಾರ ಕೂಡ ಮಳೆಯಾಗಿದ್ದು, ಕಾಫಿ ಬೆಳೆಗಾರರಲ್ಲಿ ಸಂತಸ ಮೂಡಿಸಿದೆ.

ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ಸಂಜೆ ಕೆಲ ಕಾಲ ಸಾಧಾರಣ ಮಳೆ ಸುರಿದು ಇಳೆಯನ್ನು ತಂಪು ಮಾಡಿತು. ಮಳೆ ನಿಂತ ಬಳಿಕ ಬಾನು ಕೆಂಬಣ್ಣಕ್ಕೆ ತಿರುಗಿತ್ತು.

ಜಿಲ್ಲೆಯ ಸುಂಟಿಕೊಪ್ಪ, ನಾಪೋಕ್ಲು, ಹೊದವಾಡ, ಸೋಮವಾರಪೇಟೆ ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ ಮಳೆ ಸುರಿಯಿತು. ಮಡಿಕೇರಿ ತಾಲೂಕಿನ ಕಗ್ಗೋಡ್ಲುವಿನಲ್ಲಿ ಆಲಿ ಕಲ್ಲು ಸಹಿತ ಭಾರಿ ಮಳೆ ಸುರಿಯಿತು.

---------------------------------

ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಪರಿಶಿಷ್ಟ ಪಂಗಡಗಳ ಅಲೆಮಾರಿ ಸಮುದಾಯದವರಿಗೆ ಹಾಗೂ ಅರಣ್ಯ ಆಧಾರಿತ ಆದಿವಾಸಿ ಸಮುದಾಯದ ವಿದ್ಯಾವಂತ ನಿರುದ್ಯೋಗಿ ಯುವಕ, ಯುವತಿಯರಿಗೆ ವಿವಿಧ ಕೌಶಲ್ಯಾಭಿವೃದ್ಧಿ (ತಾಂತ್ರಿಕ ನೈಪುಣ್ಯತೆ) ತರಬೇತಿಗೆ ಆಫ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ನಿಗದಿತ ಅರ್ಜಿ ನಮೂನೆಯೊಂದಿಗೆ ದಾಖಲಾತಿಗಳನ್ನು ಕೂಡಲೇ ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸುವುದು. ಅಭ್ಯರ್ಥಿಯು ಅರ್ಜಿಯೊಂದಿಗೆ ಆಧಾರ್ ಕಾರ್ಡ್ ಪ್ರತಿ(ಕಡ್ಡಾಯ), ಜಾತಿ ಪ್ರಮಾಣ ಪತ್ರ, ಪಡಿತರ ಚೀಟಿ, ಆದಾಯ ಪ್ರಮಾಣ ಪತ್ರ, ವಿದ್ಯಾರ್ಹತೆ ಪ್ರಮಾಣ ಪತ್ರದ ಪ್ರತಿ ಹಾಗೂ ಮೊಬೈಲ್ ಸಂಖ್ಯೆ ಸಲ್ಲಿಸಬೇಕು.

ಕೌಶಲ್ಯ ತರಬೇತಿಗೆ ಅರ್ಹತೆ ಮತ್ತು ವಯೋಮಿತಿ: ಮಲ್ಟಿ ಸ್ಕಿಲ್ ಟೆಕ್ನೀಷಿಯನ್(ಎಲೆಕ್ಟಿçಕಲ್), ಸೆಲ್ಫ್ ಎಂಪ್ಲಾಯ್ಡ್ ಟೈಲರ್, ಅಸಿಸ್ಟೆಂಟ್ ಬ್ಯೂಟಿ ಥೆರಪಿಸ್ಟ್ ತರಬೇತಿಗೆ 8ನೇ ತರಗತಿ ವಿದ್ಯಾರ್ಹತೆ ಹೊಂದಿದ್ದು, 18 ರಿಂದ 45 ವರ್ಷದೊಳಗಿರಬೇಕು. ಡೊಮೆಸ್ಟಿಕ್ ಡಾಟಾ ಎಂಟ್ರಿ ಆಫರೇಟರ್‌ಗೆ 10 ತರಗತಿ ವಿದ್ಯಾರ್ಹತೆ ಹೊಂದಿದ್ದು, 18 ರಿಂದ 45 ವರ್ಷದೊಳಗಿರಬೇಕು.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲೂಕು, ದೂ. ಸಂ. 08272-225531, ಸಹಾಯಕ ನಿರ್ದೇಶಕರು(ಗ್ರೇಡ್-1), ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ ತಾಲೂಕು ದೂ.ಸಂ. 9480843155, ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಸೋಮವಾರಪೇಟೆ ತಾಲೂಕು 08276-281115 ಹಾಗೂ ಸಹಾಯಕ ನಿರ್ದೇಶಕರು(ಗ್ರೇಡ್-2), ಸಮಾಜ ಕಲ್ಯಾಣ ಇಲಾಖೆ, ಪೊನ್ನಂಪೇಟೆ, ವಿರಾಜಪೇಟೆ ತಾಲೂಕು ದೂ. ಸಂ. 9480843157 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.