ಕೊಡಗು ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ರಾತ್ರಿ ಹಾಗೂ ಶನಿವಾರ ರಾತ್ರಿ ಉತ್ತಮ ಮಳೆಯಾಗಿದೆ.

ಮಡಿಕೇರಿ: ಕೊಡಗು ಜಿಲ್ಲೆಯಾದ್ಯಂತ ಮಳೆ ಚುರುಕುಗೊಂಡಿದ್ದು, ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಉತ್ತಮ ಮಳೆಯಾಗುತ್ತಿದೆ. ಶುಕ್ರವಾರ ರಾತ್ರಿ ಹಾಗೂ ಶನಿವಾರ ರಾತ್ರಿ ಉತ್ತಮ ಮಳೆಯಾಗಿದೆ.

ಮಳೆಯಿಂದಾಗಿ ಜಲ ಮೂಲಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಕಾವೇರಿ ನದಿಯಲ್ಲಿ ಕೂಡ ನೀರಿನ ಹರಿವು ಹೆಚ್ಚಾಗಿದೆ. ಈ ಬಾರಿ ಮುಂಗಾರು ಮಳೆ ಕಡಿಮೆಯಾಗಿದ್ದು, ಇದೀಗ ಕಳೆದ ಎರಡು ಮೂರು ದಿನಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಉತ್ತಮ ಮಳೆಯಾಗುತ್ತಿದೆ.

ಇದೀಗ ಭಾರಿ ಮಳೆಯಾದರೆ ಕಾಫಿ ಫಸಲಿಗೆ ಹಾನಿ ಉಂಟಾಗುವ ಸಾಧ್ಯತೆಗಳಿದೆ ಎಂದು ಕಾಫಿ ಬೆಳೆಗಾರರು ಚಿಂತಿತರಾಗಿದ್ದಾರೆ.