ಸಾರಾಂಶ
ತುಂಗಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಶಿವಮೊಗ್ಗ ಸಮೀಪದ ಗಾಜನೂರಿನ ತುಂಗಾ ಜಲಾಶಯ ಬಹುತೇಕ ಭರ್ತಿಯಾಗಿದೆ.
ಶಿವಮೊಗ್ಗ: ತುಂಗಾ ನದಿ ಜಲಾನಯನ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಿದ್ದು, ಶಿವಮೊಗ್ಗ ಸಮೀಪದ ಗಾಜನೂರಿನ ತುಂಗಾ ಜಲಾಶಯ ಬಹುತೇಕ ಭರ್ತಿಯಾಗಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರನ್ನು ಹೊರಬಿಡುವ ಸಾಧ್ಯತೆಯಿದೆ.
ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆಯೂ, ನದಿ ಪಾತ್ರದಲ್ಲಿ ಯಾವುದೇ ಚಟುವಟಿಕೆ ನಡೆಸದಂತೆ ತುಂಗಾ ಮೇಲ್ದಂಡೆ ಯೋಜನೆ ಕಾರ್ಯಪಾಲಕ ಇಂಜಿನಿಯರ್ ಎಚ್ಚರಿಕೆ ನೀಡಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ,ಎನ್‌ಆರ್ ಪುರ, ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮತ್ತಿತರ ಪ್ರದೇಶಗಳಲ್ಲಿ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಾಶಯಕ್ಕೆ ಹೆಚ್ಚಿನ ಪ್ರಮಾಣದ ಒಳಹರಿವು ಬರುವ ಸಾಧ್ಯತೆ ಇದೆ.
ಕೇವಲ ಮೂರು ಟಿಎಂಸಿ ಸಂಗ್ರಹಣ ಸಾಮರ್ಥ್ಯದ ರಾಜ್ಯದ ಅತಿ ಚಿಕ್ಕ ಜಲಾಶಯಗಳಲ್ಲಿ ಒಂದಾಗಿದೆ. ಸಾಧಾರಣವಾಗಿ ಮುಂಗಾರಿನ ಮೊದಲ ಮಳೆಯಲ್ಲಿಯೇ ಜಲಾಶಯ ತುಂಬುವ ಸಾಧ್ಯತೆ ಹೆಚ್ಚಿರುತ್ತದೆ.