ಸಾರಾಂಶ
ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಲ್ಲಿ ಶನಿವಾರ ರಾತ್ರಿ ಭಾರಿ ಮಳೆಯಾಗಿದೆ. ಭಾನುವಾರ ಬಿಸಿಲು, ಮೋಡ ಕವಿದ ವಾತಾವರಣ ಇತ್ತು.
ಕನ್ನಡಪ್ರಭ ವಾರ್ತೆ ಸುಳ್ಯ/ಸುಬ್ರಹ್ಮಣ್ಯ
ಸುಳ್ಯ ತಾಲೂಕಿನಾದ್ಯಂತ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಶನಿವಾರ ಸಂಜೆಯಿಂದ ಭಾರಿ ಮಳೆಯಾಗಿದೆ. ಸಂಜೆ 6 ಗಂಟೆಯ ಬಳಿಕ ಧಾರಾಕಾರ ಮಳೆ ಸುರಿದಿದೆ. ಸುಳ್ಯ ನಗರದಲ್ಲಿ ಸುಮಾರು ಎರಡು ಗಂಟೆಗೂ ಅಧಿಕ ಮಳೆಯಾಗಿದೆ.ಸುಳ್ಯ ತಾಲೂಕಿನ ವಿವಿಧೆಡೆ ಶನಿವಾರ ಸಂಜೆ ಧಾರಕಾರ ಮಳೆಯಾಗಿದೆ. ಕಡಬ ಹಾಗೂ ಸುಬ್ರಹ್ಮಣ್ಯದಲ್ಲಿಯೂ ಭರ್ಜರಿ ಮಳೆ ಸುರಿದಿದೆ. ಶನಿವಾರ ಸಂಜೆ ವರೆಗೆ ಬಿಸಿಲ ವಾತಾವಾರಣ ಇದ್ದ ಸುಳ್ಯ ತಾಲೂಕಿನಲ್ಲಿ ಶನಿವಾರ ಸಂಜೆ ವೇಳೆ ಮಳೆ ಆರಂಭಗೊಂಡಿದೆ. ರಾತ್ರಿಯೂ ವಿವಿಧೆಡೆ ಧಾರಕಾರ ಮಳೆ ಮುಂದುವರಿದಿದೆ. ವಿವಿಧ ಭಾಗಗಳಲ್ಲಿ ಸುಮಾರು ಎರಡು ಗಂಟೆಗೂ ಅಧಿಕ ಕಾಲ ಧಾರಕಾರ ಮಳೆಯಾಗಿದೆ. ಸುಳ್ಯ ತಾಲೂಕಿನ ಗುತ್ತಿಗಾರು, ದೇವಚಳ್ಳ, ಎಲಿಮಲೆ, ಮರ್ಕಂಜ, ವಳಲಂಬೆ ಮತ್ತಿತರ ಕಡೆಗಳಲ್ಲಿ ಧಾರಕಾರ ಮಳೆಯಾಗಿದೆ. ಸುಳ್ಯ ನಗರ, ಜಾಲ್ಸೂರು, ಮಂಡೆಕೋಲು, ಬೆಳ್ಳಾರೆ, ಐವರ್ನಾಡು, ಕೊಲ್ಲಮೊಗ್ರು, ಅರಂತೋಡು ಪರಿಸರದಲ್ಲೂ ಉತ್ತಮ ಮಳೆಯಾಗಿದೆ.