ಕೊಡಗಿನಲ್ಲಿ ಮಳೆ ಇಳಿಮುಖ

| Published : Jun 29 2025, 01:32 AM IST

ಸಾರಾಂಶ

ಕೊಡಗು ಜಿಲ್ಲೆಯಲ್ಲಿ ಶನಿವಾರ ಮಳೆ ವಾತಾವರಣ ಕಡಿಮೆಯಾಗಿದೆ. ಬಿಡುವು ನೀಡಿ ಆಗಾಗ್ಗೆ ಮಳೆ ಸುರಿದಿದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ ಶನಿವಾರ ಮಳೆ ವಾತಾವರಣ ಕಡಿಮೆಯಾಗಿದೆ.

ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಕುಶಾಲನಗರ, ಪೊನ್ನಂಪೇಟೆ, ಸೋಮವಾರಪೇಟೆ, ನಾಪೋಕ್ಲು ಮತ್ತಿತರ ಕಡೆಗಳಲ್ಲಿ ಮಳೆ ಇಳಿಮುಖಗೊಂಡಿದ್ದು, ಬಿಡುವು ನೀಡಿ ಆಗಾಗ್ಗೆ ಸಾಧಾರಣ ಮಳೆ ಸುರಿಯಿತು.

ಶಾಂತಳ್ಳಿ ಹೋಬಳಿಯ ಕುಮಾರಳ್ಳಿ ಬಾಚಳ್ಳಿ ಗ್ರಾಮದ ಕುಂದಳ್ಳಿ - ಪುಷ್ಪಗಿರಿ ಸಂಪರ್ಕಿಸುವ ರಸ್ತೆಯ ಮೇಲೆ ಬರೆ ಕುಸಿದು ವಿದ್ಯುತ್ ಕಂಬ ಮುರಿದು ಹೋಗಿ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು ಪ್ರಸ್ತುತ ಹೊಸ ವಿದ್ಯುತ್ ಕಂಬ ಅಳವಡಿಸಲಾಗಿದ್ದು ವಿದ್ಯುತ್ ಸಂಪರ್ಕ ಕಲ್ಪಿಸಲಾಗಿದೆ ಹಾಗೂ ವಾಹನಗಳ ಸಂಚಾರಕ್ಕೆ ರಸ್ತೆ ತೆರವುಗೊಳಿಸಲಾಗಿದೆ ಎಂದು ತಹಸೀಲ್ದಾರರು ತಿಳಿಸಿದ್ದಾರೆ.

ಚನ್ನರಾಜಪ್ಪ ಕುಳ್ಳಯ್ಯ ನಲ್ಲೂರು ಗ್ರಾಮ ಇವರ ಮನೆ ಮಳೆಯಿಂದ ಹಾನಿಯಾಗಿದ್ದು, ಅಧಿಕಾರಿಗಳು ಭೇಟಿ ನೀಡಿ ವೀಕ್ಷಿಸಿದರು.

ಕುಶಾಲನಗರ ತಾಲೂಕಿನ ನೆಲ್ಲಿಹುದಿಕೇರಿ ಗ್ರಾಮದ ಕಾವೇರಿ ನದಿ ತೀರದ ಕುಂಬಾರಗುಂಡಿ ಹೊಳೆಕೆರೆ ನಿವಾಸಿಯಾದ ಬೇಬಿ ಸಿದ್ದ ಅವರ ಗುಡಿಸಲಿಗೆ ಕಾವೇರಿ ನದಿ ನೀರು ಬಂದಿರುತ್ತದೆ. ಕುಟುಂಬದವರು ಸಂಬಂಧಿಕರ ಮನೆಗೆ ತೆರಳಿದ್ದಾರೆ.

-------------------

ಕುಶಾಲನಗರ: ಮಳೆಗೆ ಮನೆ ಹಾನಿಕನ್ನಡಪ್ರಭ ವಾರ್ತೆ ಕುಶಾಲನಗರಕುಶಾಲನಗರ ತಾಲೂಕು ಕುಶಾಲನಗರ ಹೋಬಳಿ ಶಿರಂಗಾಲ ಗ್ರಾಮ ಪಂಚಾಯಿತಿಯ ನಲ್ಲೂರು ಗ್ರಾಮ ನಿವಾಸಿಯಾದ ಕುಳ್ಳಯ್ಯ ಎಂಬವರ ಮನೆಗೆ ಮಳೆಯಿಂದ ಹಾನಿ ಉಂಟಾಗಿದೆ.ವಾಸದ ಮನೆಯು ಮಳೆಯಿಂದ ಭಾಗಶಃ ಹಾನಿಯಾಗಿದ್ದು, ಅಡುಗೆ ಮನೆ ಗೋಡೆ ಕುಸಿತ ಉಂಟಾಗಿದೆ. ಸ್ಥಳಕ್ಕೆ ಕುಶಾಲನಗರ ತಾಲೂಕು ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.