ಸಾರಾಂಶ
ಡಯಾಬಿಟಿಕ್, ರಕ್ತದೊತ್ತಡ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಪ್ರಸ್ತುತ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಲಿಂ ಪಾಷ ಹೇಳಿದರು.
ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ
ಡಯಾಬಿಟಿಕ್, ರಕ್ತದೊತ್ತಡ, ಕ್ಯಾನ್ಸರ್, ಹೃದಯ ಸಂಬಂಧಿ ಕಾಯಿಲೆಗಳು ಪ್ರಸ್ತುತ ದಿನಗಳಲ್ಲಿ ಹೆಚ್ಚಾಗುತ್ತಿದ್ದು, ಈ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಅಲಿಂ ಪಾಷ ಹೇಳಿದರು.ಪಟ್ಟಣದ ಪ್ರಜಾ ಸೌಧದಲ್ಲಿ ನಡೆದ ಅಂತರ್ ಇಲಾಖೆಗಳ ಅಧಿಕಾರಿಗಳ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ಅಸಾಂಕ್ರಾಮಿಕ ರೋಗಗಳು ಕಡಿಮೆ ಆಗುತ್ತಿವೆ. ತಾಲೂಕಿನ ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ, ಪರಿಚಯದ ಬಗ್ಗೆ ಸಭೆಗೆ ಸವಿವರ ಮಾಹಿತಿ ತಿಳಿಸಿದರು. ಆರೋಗ್ಯ ಕಾರ್ಯಕ್ರಮಗಳಲ್ಲಿ ತಾಲೂಕಿನಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದರು.
ಮಕ್ಕಳ ಲಸಿಕ ಕಾರ್ಯಕ್ರಮದಲ್ಲಿ ರಾಜ್ಯದಲ್ಲಿ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ತಂಬಾಕು ನಿಯಂತ್ರಣ ಕಾರ್ಯಕ್ರಮದಲ್ಲಿ ಎಲ್ಲಾ ಇಲಾಖೆಯ ಸಹಕಾರ ಅಗತ್ಯವಿದ್ದು ಕೋಟ್ಪ ಕಾಯ್ದೆ ಅಡಿಯಲ್ಲಿ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳ ಲೈಸೆನ್ಸ್ ಇಲ್ಲದೆ ಮಾರಾಟ ಮಾಡಿದಲ್ಲಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡಿದರೆ ಸ್ಥಳದಲ್ಲೇ ದಂಡ ವಿಧಿಸಲಾಗುತ್ತದೆ ಎಂದರು.ಶಾಲೆಗಳ ಬಳಿ ಅಂಗಡಗಳಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಮಾರಬಾರದು ಮತ್ತು ಶಾಲೆಯ ತಂಬಾಕು ಮುಕ್ತ ವಲಯ ಎಂದು ನಮೂದಿಸಬೇಕು ಎಂದು ಸಭೆಯಲ್ಲಿ ಸಲಹೆ ನೀಡಿದರು.
ಸಭೆಯಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಎಂ.ಹೇಮಾವತಿ ಹಾಗು ವಿವಿಧ ಇಲಾಖೆಯ ಪ್ರತಿನಿಧಿಗಳಿದ್ದರು.