ಮಾನಸಿಕ ಅಸ್ವಸ್ಥತೆ ಕುರಿತು ಜಾಗೃತಿ ಮೂಡಿಸಿ

| Published : May 25 2024, 12:47 AM IST

ಸಾರಾಂಶ

ಮಾನಸಿಕ ಅಸ್ವಸ್ಥ ರೋಗ ಲಕ್ಷಣಗಳು ಕಂಡು ಬಂದಾಗ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು. ಯಾವುದೇ ಮೂಡನಂಬಿಕೆಗಳಿಗೆ ಜೋತುಬಿದ್ದು ಚಿಕಿತ್ಸೆಗೆ ಕಡೆಗಣಿಸಬೇಡಿ. ಆರಂಭದಲ್ಲಿಯೇ ಚಿಕಿತ್ಸೆ ಪಡೆಯುವುದು ಉತ್ತಮ

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಸ್ಕಿಜೋಫೋನಿಯಾದಂತಹ ಮಾನಸಿಕ ಅಸ್ವಸ್ಥತೆ ಖಾಯಿಲೆ ಬಗ್ಗೆ ಹೆಚ್ಚು ಜಾಗೃತಿ ಮೂಡಿಸಿ ಚಿಕಿತ್ಸಾ ಪರಿಹಾರೋಪಾಯಗಳ ಕುರಿತು ತಿಳಿಸಿಕೊಡಬೇಕಿದೆ ಎಂದು ಪ್ರಧಾನ ಸಿವಿಲ್ ನಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮೊಹಮ್ಮದ್ ರೋಷನ್ ಷಾ ತಿಳಿಸಿದರು. ಜಿಲ್ಲಾಡಳಿತ ಭವನದ ಸರ್ ಎಂ. ವಿಶ್ವೇಶ್ವರಯ್ಯ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ಜಿಲ್ಲಾ ಪೊಲೀಸ್ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ ಇವರ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ "ವಿಶ್ವ ಸ್ಕಿಜೋಫ್ರೀನಿಯಾ ದಿನಾಚರಣೆ " ಉದ್ಘಾಟಿಸಿ ಮಾತನಾಡಿದರು.ರೋಗಕ್ಕೆ ಚಿಕಿತ್ಸೆ ಪಡೆಯಿರಿ

ಮಾನಸಿಕ ಅಸ್ವಸ್ಥ ರೋಗ ಲಕ್ಷಣಗಳು ಕಂಡು ಬಂದಾಗ ವೈದ್ಯರನ್ನು ಕಂಡು ಚಿಕಿತ್ಸೆ ಪಡೆಯಬೇಕು. ಆದರೆ ಹಲವರು ಮೂಡನಂಬಿಕೆಗಳಿಗೆ ಜೋತುಬಿದ್ದು ಚಿಕಿತ್ಸೆಗೆ ಮುಂದಾಗದಿರುವುದು ನೋಡುತಿದ್ದೇವೆ. ರೋಗ ಉಲ್ಬಣಗೊಂಡಾಗ ವೈದ್ಯರಲ್ಲಿ ತೆರಳುವುದು ಸಾಮಾನ್ಯವಾಗಿದೆ. ಇಂತಹ ಉದಾಸೀನ ತೋರದೆ ಆರಂಭದಲ್ಲಿಯೇ ಚಿಕಿತ್ಸೆ ಪಡೆದುಕೊಳ್ಳಬೇಕೆಂದು ಸಲಹೆ ಮಾಡಿದರು. ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ ಮಾತನಾಡಿ, ಮಾನಸಿಕ ಅಸ್ವಸ್ಥತೆಯ ತೊಂದರೆಗಳನ್ನು ಆರಂಭದಲ್ಲಿಯೇ ಪತ್ತೆ ಹಚ್ಚಿ ವೈಜ್ಞಾನಿಕ ಚಿಕಿತ್ಸೆ ಪಡೆದರೆ ಸ್ವಾಸ್ಥ್ಯ ಸಮಾಜ ನಿರ್ಮಾಣವಾಗಲು ಸಾಧ್ಯವಿದೆ. ಹೀಗಾಗಿ ನಿರ್ಲಕ್ಷ್ಯ ತೋರದೆ ಸೂಕ್ತ ಚಿಕಿತ್ಸೆ ಔಷದೋಪಚಾರ ಪಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣಧಿಕಾರಿ ಡಾ.ಎಸ್.ಎಸ್. ಮಹೇಶ್ ಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕಿ ಡಾ. ಮಂಜುಳದೇವಿ, ಜಿಲ್ಲಾ ಮಾನಸಿಕ ನಿಯಂತ್ರಣಾಧಿಕಾರಿ ಡಾ. ಶಿವಕುಮಾರ್, ಜಿಲ್ಲಾ ಸರ್ವೇಕ್ಷಣಾಕಾರಿ ಡಾ. ಕೃಷ್ಣಪ್ರಸಾದ್, ಜಿಲ್ಲಾ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ. ಎನ್.ಪ್ರಕಾಶ್, ಜಿಲ್ಲಾ ಕುಂಟುಂಬ ಕಲ್ಯಾಣಧಿಕಾರಿ ಡಾ. ಚಂದ್ರಶೇಖರ್ ರೆಡ್ಡಿ ಮತ್ತಿತರರು ಇದ್ದರು.