ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹಾಗೂ ಕಾನೂನಿನಡಿ ವಿಧಿಸುವ ದಂಡ ಮತ್ತು ಶಿಕ್ಷೆ ಬಗ್ಗೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಹಾವೇರಿ: ಮಾದಕ ವಸ್ತುಗಳ ದುಷ್ಪರಿಣಾಮಗಳ ಬಗ್ಗೆ ಹಾಗೂ ಕಾನೂನಿನಡಿ ವಿಧಿಸುವ ದಂಡ ಮತ್ತು ಶಿಕ್ಷೆ ಬಗ್ಗೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಜಾಗೃತಿ ಮೂಡಿಸಿ ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಸೂಚನೆ ನೀಡಿದರು.
ಸ್ಥಳೀಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಜರುಗಿದ ನಾರ್ಕೊ ಸಮನ್ವಯ ಕೇಂದ್ರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಯುವ ಜನಾಂಗಕ್ಕೆ ಮಾದಕ ವಸ್ತುಗಳಿಂದ ಉಂಟಾಗುವ ತೊಂದರಗಳ ಬಗ್ಗೆ ಅರಿವು ಮೂಡಿಸುವುದು ಅಗತ್ಯವಾಗಿದ್ದು, ಈ ನಿಟ್ಟಿನಲ್ಲಿ ಆಯಾ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಉಪನ್ಯಾಸಕರು ವಿದ್ಯಾರ್ಥಿಗಳ ಚಲನವಲನ ಗಮನಿಸುತ್ತಿರಬೇಕು ಎಂದರು.ಈಗಾಗಲೇ ಎಲ್ಲ ಪದವಿ ಪೂರ್ವ ಸೇರಿದಂತೆ ಎಲ್ಲ ಕಾಲೇಜುಗಳು, ವಿದ್ಯಾರ್ಥಿನಿಲಯಗಳಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮ ಕುರಿತು ಜಾಗೃತಿ ಕಾರ್ಯಕ್ರಮಗಳನ್ನು ಪೊಲೀಸ್ ಇಲಾಖೆಯವರು ಆಯೋಜಿಸುತ್ತಿದ್ದಾರೆ. ಜತೆಗೆ ಕಾಲೇಜುಗಳಲ್ಲಿ ಆ್ಯಂಟಿ ಡ್ರಗ್ ಸ್ವ್ಕಾಡ್ ಕಮಿಟಿ ಮಾಡಬೇಕು ಹಾಗೂ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಮಾದಕ ವಸ್ತುಗಳ ಕಳ್ಳ ಸಾಗಾಣಿಕೆ ತಡೆಗೆ ಎಲ್ಲರೂ ಜವಾಬ್ದಾರಿಯಿಂದ ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.
ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ವಾಹನ ಚಾಲಕರು ಖಾಸಗಿ ವ್ಯಕ್ತಿಗಳ ಪಾರ್ಸಲ್‌ಗಳನ್ನು ತೆಗೆದುಕೊಳ್ಳದಂತೆ ನಿರ್ದೇಶನ ನೀಡಲು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು ಹಾಗೂ ಅಂಚೆ ಕಚೇರಿ ಹಾಗೂ ಖಾಸಗಿ ಕೋರಿಯರ್ ಸಂಸ್ಥೆಗಳು ಪದೇ ಪದೇ ಅದೇ ವಿಳಾಸಕ್ಕೆ ಬರುವ ಪಾರ್ಸಲ್‌ಗಳ ಕುರಿತು ಗಮನಹರಿಸಬೇಕು ಎಂದು ಸೂಚಿಸಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಯಾನಂದ, ಸಿಪಿಐ ಸಂತೋಷ ಪವಾರ, ಅರಣ್ಯ, ಕೃಷಿ, ಅಬಕಾರಿ, ವೈದ್ಯಕೀಯ ಕಾಲೇಜು, ಪದವಿ ಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ಇದ್ದರು.