ಸಾರಾಂಶ
ಕುರುಗೋಡು: ಶಿಕ್ಷಕರು ವಿದ್ಯಾರ್ಥಿಗಳಿಗೆ ಶಿಕ್ಷಣ ನೀಡುವ ಜತೆಗೆ ಬಾಲ್ಯವಿವಾಹದಿಂದಾಗುವ ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸಿ ಎಂದು ಸಲಹೆ ನೀಡಿದರು.
ತಾಲೂಕಿನ ಗೆಣಿಕೆಹಾಳು ಗ್ರಾಮದಲ್ಲಿ ₹೪೪ ಕೋಟಿ ವೆಚ್ಚದಲ್ಲಿ ನಿರ್ಮಿಸುವ ಗಾಂಧಿತತ್ವಾಧಾರಿತ ಬಾಲಕಿಯರ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಅನುಮೋದನೆ ದೊರೆತಿದ್ದು ಅತಿಶೀಘ್ರದಲ್ಲಿ ನಿರ್ಮಾಣಗೊಳ್ಳಲಿವೆ ಎಂದು ಶಾಸಕ ಜೆ.ಎನ್.ಗಣೇಶ್ ಹೇಳಿದರು.ಪಟ್ಟಣದಲ್ಲಿ ಗುರುವಾರ ಆಯೋಜಿಸಿದ್ದ ಶಿಕ್ಷಕರ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು. ಕ್ಷೇತ್ರದ ಕಂಪ್ಲಿ ಮತ್ತು ಕುರುಗೋಡು ಪಟ್ಟಣಗಳಲ್ಲಿ ಬಾಲಕರ ವಸತಿ ನಿಲಯಗಳು ಮಾತ್ರ ಇವೆ. ಮುಂದಿನ ದಿನಗಳಲ್ಲಿ ಬಾಲಕಿಯರ ವಸತಿ ನಿಲಯ ಮತ್ತು ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಬೈಲೂರು ಗ್ರಾಮದ ಬಳಿ ₹೪೪ ಕೋಟಿ ವೆಚ್ಚದಲ್ಲಿ ಅಲ್ಪಸಂಖ್ಯಾತರ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ. ತಾಲೂಕಿನ ನಾಲ್ಕು ಕಡೆ ಪದವಿ ಪೂರ್ವ ಕಾಲೇಜು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.
ಡಾ.ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡ್ರಿಗಿ ನಾಗರಾಜ ಮಾತನಾಡಿ, ವೇತನ ಪಡೆಯುವ ಉದ್ದೇಶ ದಿಂದ ಶಿಕ್ಷಕ ವೃತ್ತಿಯಲ್ಲಿರುವುದಕ್ಕಿಂತ ಗುಣಮಟ್ಟದ ಶಿಕ್ಷಣ ನೀಡಿ ಭವ್ಯಭಾರತದ ಉತ್ತಮ ಪ್ರಜೆಗಳನ್ನು ತಯಾರಿಸುವ ಕ್ರಿಯಾಶೀಲ ಶಿಕ್ಷಕರಾಗಿ ಎಂದು ಸಲಹೆ ನೀಡಿದರು.ಕೊಟ್ಟೂರುಸ್ವಾಮಿ ವಿರಕ್ತ ಮಠದ ಪ್ರಭುಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು ಮಾತನಾಡಿದರು.
ನಮಗೆ ಕಲ್ಲು ಹಾಕೋರಿಗೆ ನಾವು ಹಾಲು ಹಾಕೋಣ, ನಮ್ಮ ಕತ್ತಿಗೆ ಚೂರಿ ಹಾಕೋರಿಗೆ ನಾವು ಹೂ ಮಾಲೆ ಹಾಕೋಣ. ಕೆಟ್ಟ ಅಭಿಪ್ರಾಯ ಉಳ್ಳವರನ್ನು ಒಳ್ಳೆ ದಾರಿಗೆ ತರೋಣ. ಸರ್ವಪಲ್ಲಿ ರಾಧಾಕೃಷ್ಣ ಅವರ ತಮಗೆ ಬರುವ ಸಂಬಳದಲ್ಲಿ ಶೇ. 75 ರಷ್ಟು ಮಕ್ಕಳ ಶಿಕ್ಷಣಕ್ಕೆ ಬಳಸಿ ತಮ್ಮ ಕುಟುಂಬ ನಿರ್ವಹಣೆಗೆ ಶೇ.25 ಬಳಸುತ್ತಿದ್ದರು ಎಂದು ಕೊಟ್ಟೂರು ವಿರಕ್ತ ಮಠದ ನಿರಂಜನ ಪ್ರಭು ಸ್ವಾಮಿಗಳು ಹೇಳಿದರು.ಬಿಇಒ ಟಿ.ಎಂ. ಸಿದ್ದಲಿ೦ಗಮೂರ್ತಿ ಕಾರ್ಯಕ್ರಮ ಕುರಿತು ಪ್ರಾಸ್ತಾವಿಕವಾಗಿ ಮಾತನಾಡಿದರು.
ಪುರಸಭೆ ಅಧ್ಯಕ್ಷ ಟಿ.ಶೇಖಣ್ಣ, ಉಪಾಧ್ಯಕ್ಷ ಚನ್ನಪಟ್ಟಣ ಮಲ್ಲಿಕಾರ್ಜುನ, ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಸಿ.ನಿಂಗಪ್ಪ ಮಾತನಾಡಿದರು. ಕೊಟ್ಟೂರುಸ್ವಾಮಿ ವಿರಕ್ತ ಮಠದ ಪ್ರಭುಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.ತಾಲೂಕಿನ ವಿವಿಧ ಶಾಲೆಗಳ ಉತ್ತಮ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಸಮನ್ವಯಾಧಿಕಾರಿ ಜಿ.ಎಸ್. ಮನೋಹರ, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಗುಂಡಪ್ಪ ನಾಗರಾಜ ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ತುಕಾರಾವi ಗೊರವ, ಮತ್ತು ಗೌರವಾದ್ಯಕ್ಷ ಕೆ.ಸಣ್ಣ ಮಾರೆಪ್ಪ ಇದ್ದರು.