ಸಾರಾಂಶ
ಚಳ್ಳಕೆರೆ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತಂತೆ ಕರೆದಿದ್ದ ಜಾಗೃತಿ ಸಭೆಯಲ್ಲಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ಮಾಹಿತಿ ಪಡೆದರು.
ಅಪ್ರಾಪ್ತ ಬಾಲಕಿ, ಬಲವಂತದ ಮದುವೆ ವಿರುದ್ಧ ಜಾಗೃತಿ ಮೂಡಿಸಲು ಕೆ.ಟಿ.ತಿಪ್ಪೇಸ್ವಾಮಿ ಸೂಚನೆಕನ್ನಡಪ್ರಭ ವಾರ್ತೆ ಚಳ್ಳಕೆರೆ
ಕಳೆದ ಕೆಲವು ತಿಂಗಳಿಂದ ತಾಲೂಕಿನಾದ್ಯಂತ ಮಕ್ಕಳ ಮೇಲೆ ಲೈಗಿಂಕ ದೌರ್ಜನ್ಯ ಸೇರಿದಂತೆ, ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗಿ ಆಸ್ಪತ್ರೆಗಳಲ್ಲಿ ಮಕ್ಕಳಿಗೆ ಜನ್ಮನೀಡಿದ ಉದಾಹರಣೆ ಸಾಕಷ್ಟಿವೆ. ಇದು ಮಕ್ಕಳ ಹಕ್ಕಗಳನ್ನು ರಕ್ಷಿಸದೆ ಕಸಿದಂತಾಗಿದೆ. ತಾಲೂಕು ಆಡಳಿತ ಈ ನಿಟ್ಟಿನಲ್ಲಿ ಕಾನೂನು ಕ್ರಮ ಜರುಗಿಸುವಲ್ಲಿ ಹೆಚ್ಚು ಜಾಗೃತೆ ವಹಿಸಿ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಕೆ.ಟಿ.ತಿಪ್ಪೇಸ್ವಾಮಿ ತಿಳಿಸಿದರು.ಸೋಮವಾರ ತಾಲೂಕು ಕಚೇರಿ ಸಭಾಂಗಣದಲ್ಲಿ ಮಕ್ಕಳ ಹಕ್ಕುಗಳ ಉಲ್ಲಂಘನೆ ಕುರಿತಂತೆ ಕರೆದ ಜಾಗೃತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸರ್ಕಾರ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಅನೇಕ ಕಾನೂನು, ನಿಯಮಗಳನ್ನು ಜಾರಿಗೆ ತಂದಿದೆ. ಎಂತಹ ಸಂದರ್ಭದಲ್ಲೂ ಅಪ್ರಾಪ್ತ ವಯಸ್ಸಿನ ಬಾಲಕಿಯರು ದೌರ್ಜನ್ಯಕ್ಕೀಡಾಗದಂತೆ ಪುಟ್ಟ ವಯಸ್ಸಿನಲ್ಲೇ ಗರ್ಭವತಿಯಾಗುವುದುನ್ನು ತಪ್ಪಿಸಲು ಅನೇಕ ನಿಯಮಗಳನ್ನು ಜಾರಿಗೆ ತರಲಾಗಿದೆ.ಬಹುತೇಕ ಪ್ರಕರಣಗಳಲ್ಲಿ ಪೋಷಕರು ಗೌರವಕ್ಕೆ ಕುಂದಾಟುಗುತ್ತದೆ ಎಂಬ ಭಾವನೆಯಿಂದ ದೂರು ನೀಡುವುದಲ್ಲ, ಇದು ಒಂದು ರೀತಿ ಮಕ್ಕಳ ಮೇಲೆ ದೌರ್ಜನ್ಯ ನಿರಂತರ ನಡೆಯಲು ಸಹಕಾರಿಯಾಗಿದೆ. ಆದ್ದರಿಂದ ತಾಲೂಕು ಆಡಳಿತ ಈ ನಿಟ್ಟಿನಲ್ಲಿ ಕ್ಷೀಪ್ರ ಕಾರ್ಯಚರಣೆ ನಡೆಸಿ ಇಂತಹ ಘಟನೆ ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು. ಅಪ್ರಾಪ್ತ ಬಾಲಕಿಯರನ್ನು ವಂಚಿಸುವವರು ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ತಿಳಿಸಿದರು.
ತಹಸೀಲ್ದಾರ್ ರೇಹಾನ್ ಪಾಷ ಮಾಹಿತಿ ನೀಡಿ, ಅಪ್ರಾಪ್ತ ಬಾಲಕಿ ಗರ್ಭಿಣಿಯಾಗುವುದಲ್ಲದೆ, ಮಗುವಿಗೆ ಜನ್ಮ ನೀಡುವ ಘಟನೆ ಸಾಕಷ್ಟಿವೆ. ಈ ಬಗ್ಗೆ ಮಾಹಿತಿ ಬಂದಕೂಡಲೇ ಇಲಾಖೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿ ಕ್ರಮಕೈಗೊಳ್ಳುವಂತೆ ಸೂಚಿಸಿದೆ. ಇತ್ತೀಚೆಗಷ್ಟೆ ಸುದ್ದಿ ಬಂದಕೂಡಲೇ ಅಪ್ರಾಪ್ತ ಬಾಲಕಿ ವಿವಾಹ ನಡೆಸುತ್ತಿದ್ದ ಪೋಷಕರ ವಿರುದ್ಧ ಕ್ರಮಕೈಗೊಂಡಿದೆ. ಚಳ್ಳಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಇಂತಹ ಪ್ರಕರಣ ಮರುಕಳಿಸದಂತೆ ಎಚ್ಚರಿಕೆ ವಹಿಸಲಾಗುವುದು ಎಂದರು.ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಕಾರ್ಯ ನಿರ್ವಹಣಾಧಿಕಾರಿ ಶಶಿಧರ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್.ಸುರೇಶ್, ಸಿಡಿಪಿಒ ರಾಜಾನಾಯ್ಕ, ಡಿವೈಎಸ್‌ಪಿ ಟಿ.ಬಿ.ರಾಜಣ್ಣ, ಪಿಎಸ್‌ಐ ಧರೆಪ್ಪಬಾಳಪ್ಪದೊಡ್ಡಮನಿ ಮುಂತಾದವರು ಉಪಸ್ಥಿತರಿದ್ದರು.