ಸಾರಾಂಶ
ಹಾವೇರಿ: ಶಿವಮೊಗ್ಗದಲ್ಲಿ ಪಾಕ್ ಪರ ಘೋಷಣೆ ಕೂಗಿರುವುದು ಅಕ್ಷಮ್ಯ ಅಪರಾಧ. ಯಾರೇ ದೇಶದ ವಿರುದ್ಧ ಮಾತನಾಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಸರ್ಕಾರ ಕೈಗೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.ನಗರದಲ್ಲಿ ಮಂಗಳವಾರ ಮಾಧ್ಯಮದವರೊಂದಿಗೆ ಮಾತನಾಡಿ, ಸವಣೂರು ಪಟ್ಟಣದಲ್ಲಿ ಪ್ಯಾಲೆಸ್ತೀನ್ ಧ್ವಜದ ಫೋಟೋ ಅಳವಡಿಕೆ ಮಾಡಿರುವ ಕುರಿತು ಆರೋಪ ಕೇಳಿಬಂದಿದೆ. ಈ ಬಗ್ಗೆ ಮಾಹಿತಿ ತರಿಸಿಕೊಂಡು ಕ್ರಮ ಜರುಗಿಸುತ್ತೇವೆ. ಪ್ಯಾಲೆಸ್ತೀನ್ ಧ್ವಜ ಹಾಕಿದ್ದು ತಪ್ಪು ಎಂದರು.ಮದ್ದೂರಿನಲ್ಲಿ ಗಣಪತಿ ವಿಸರ್ಜನೆ ಮೇಲೆ ಕಲ್ಲು ತೂರಾಟ ಮಾಡಿದ್ದಾರೆ. ದೇಶದ ಜನರನ್ನು ಒಗ್ಗೂಡಿಸುವ ಸಲುವಾಗಿ ಬಾಲಗಂಗಾಧರ ತಿಲಕರು ಗಣೇಶೋತ್ಸವ ಆರಂಭಿಸಿದ್ದರು. ಆದರೆ ದುರ್ದೈವ ಮದ್ದೂರಿನಲ್ಲಿ ಈ ರೀತಿ ಕಲ್ಲು ತೂರಾಟ ಆಗಬಾರದಿತ್ತು. ಈ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ತೆಗೆದುಕೊಳ್ಳಬೇಕೆಂದು ಸಿಎಂ ಅವರಿಗೆ ಹೇಳುತ್ತೇನೆ ಎಂದರು.ಜಿಲ್ಲೆಯಲ್ಲಿ ಡಿಜೆ ನಿಷೇಧ ಹೇರಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಡಿಜೆ ಹಾವೇರಿ ಜಿಲ್ಲೆಯಲ್ಲಿ ನಿಷೇಧ ಆಗಿದೆ. ನಮ್ಮ ಜಿಲ್ಲೆ (ವಿಜಯಪುರ)ಯಲ್ಲಿ ಡಿಜೆ ಇಟ್ಟುಕೊಂಡೇ ಗಣೇಶ ವಿಸರ್ಜನೆ ಮಾಡಿದ್ದಾರೆ. ಆದರೆ, ಕೆಲವು ಜಿಲ್ಲೆಗಳಲ್ಲಿ ಅನುಮತಿ ನೀಡಿದ್ದಾರೆ. ಎಲ್ಲರೂ ಶಾಂತಿಯುತವಾಗಿ ಹಬ್ಬಆಚರಿಸಿದ್ದಾರೆ ಎಂದರು.ನರೇಗಾ ಕಾರ್ಮಿಕರು ಪಾರದರ್ಶಕವಾಗಿ ಕೆಲಸ ಮಾಡಲಿ
ರಾಣಿಬೆನ್ನೂರು: ನರೇಗಾ ಯೋಜನೆಯ ಕೂಲಿ ಕಾರ್ಮಿಕರು ಪಾರದರ್ಶಕವಾಗಿ ಕೆಲಸ ನಿರ್ವಹಿಸಬೇಕು ಎಂದು ಪಿಡಿಒ ಅಶೋಕ ಪೂಜಾರ ತಿಳಿಸಿದರು.ತಾಲೂಕಿನ ಕಾಕೋಳ ಕಾಕೋಳ ಗ್ರಾಮ ಪಂಚಾಯಿತಿಯ ನರೇಗಾ ಯೋಜನೆಯಡಿ ನೀರು ಕಾಲುವೆ ಕಾಮಗಾರಿ ವ್ಯಾಪ್ತಿಯಲ್ಲಿ ಮಂಗಳವಾರ ಏರ್ಪಡಿಸಿದ್ದ ನರೇಗಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಯೋಜನೆಯು ದುಡಿಯುವ ಕೈಗಳಿಗೆ ಕೆಲಸ ನೀಡಿದ್ದು, ಪುರುಷರು ಮತ್ತು ಮಹಿಳೆಯರಿಗೆ ಸಮಾನದ ವೇತನ ನೀಡಲಾಗುತ್ತದೆ ಎಂದರು.ತಾಲೂಕು ಐಇಸಿ ಸಂಯೋಜಕ ದಿಂಗಾಲೇಶ್ವರ ಅಂಗೂರ ಮಾತನಾಡಿದರು. ಬಿಎಫ್‌ಟಿ ಮಂಜುನಾಥ ಚಲವಾದಿ, ಕಂಪ್ಯೂಟರ್ ಆಪರೇಟರ್ ನಿಂಗಪ್ಪ ಕೈದಾಳೆ, ಮೇಟುಗಳು, ಕೂಲಿ ಕಾರ್ಮಿಕರು ಉಪಸ್ಥಿತರಿದ್ದರು.