ನಾಳೆ 371ಜೆ ಮೀಸಲಾತಿಗೆ ಆಗ್ರಹಿಸಿ ರೈತ ಭಾರತ ಪಕ್ಷದ ಪ್ರತಿಭಟನೆ

| Published : Aug 24 2025, 02:01 AM IST

ನಾಳೆ 371ಜೆ ಮೀಸಲಾತಿಗೆ ಆಗ್ರಹಿಸಿ ರೈತ ಭಾರತ ಪಕ್ಷದ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಜಿಲ್ಲೆಗೆ 371ಜೆ ವಿಶೇಷ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಆ.25 ರಂದು ಬೆಳಗ್ಗೆ 10ಕ್ಕೆ ನಗರದ ಗೋಳಗುಮ್ಮಟದ ಗೇಟ್‌ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದರು.

ಕನ್ನಡಪ್ರಭ ವಾರ್ತೆ ವಿಜಯಪುರ

ಜಿಲ್ಲೆಗೆ 371ಜೆ ವಿಶೇಷ ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಆ.25 ರಂದು ಬೆಳಗ್ಗೆ 10ಕ್ಕೆ ನಗರದ ಗೋಳಗುಮ್ಮಟದ ಗೇಟ್‌ದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ರೈತ ಭಾರತ ಪಕ್ಷದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ಕೆಂಗನಾಳ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಗೆ 371ಜೆ ಮೀಸಲಾತಿಗೆ ಆಗ್ರಹಿಸಿ ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಅನೇಕ ಪ್ರತಿಭಟನೆಗಳು ನಡೆದರೂ ಆಳುವ ಪಕ್ಷಗಳು ಜನರಿಗೆ ನ್ಯಾಯ ಒದಗಿಸುವಲ್ಲಿ ವಿಫಲವಾಗಿವೆ ಎಂದು ದೂರಿದರು.371ಜೆ ವಿಶೇಷ ಸ್ಥಾನಮಾನ ಪಡೆಯಲು ಎಲ್ಲ ಅರ್ಹತೆಗಳನ್ನು ಹೊಂದಿದ ವಿಜಯಪುರವನ್ನು ಕೈಬಿಟ್ಟಿದ್ದರಿಂದ ಜಿಲ್ಲೆಯು ಅಭಿವೃದ್ಧಿ ವಂಚಿತವಾಗಿದೆ. ಜಿಲ್ಲೆಗೆ ಸಿಗಬೇಕಾದ ನ್ಯಾಯಯುತ ಹಕ್ಕನ್ನು ಪಡೆಯಲು ರೈತ ಭಾರತ ಪಕ್ಷದಿಂದ ನಿರಂತರವಾಗಿ ಹೋರಾಟ ಮಾಡಲಾಗುತ್ತಿದೆ. ವಿದ್ಯಾರ್ಥಿಗಳು, ಯುವಕರು, ಯುವತಿಯರು ಹಾಗೂ ಸಂಘ ಸಂಸ್ಥೆಗಳ ಮುಖಂಡರು ಹೋರಾಟದಲ್ಲಿ ಭಾಗವಹಿಸಿ ಯಶಸ್ವಿಗೆ ಕೈ ಜೋಡಿಸಬೇಕು ಎಂದು ಕೋರಿದರು.ಹೆಚ್ಚಿನ ಮಾಹಿತಿಗಾಗಿ ಮೊ.72594 02056, ಮೊ.99863 99453 ಸಂಪರ್ಕಿಸಿ.