ಸಾರಾಂಶ
ಸಂಕಷ್ಟದಲ್ಲಿರುವ ರೈತನಿಗೆ ನೆರವಾಗುವುದೇ ಕರ್ನಾಟಕ ರಾಜ್ಯ ರೈತ ಸಂಘಟನೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಗೌಡ ತಿಳಿಸಿದರು
ಕನ್ನಡಪ್ರಭ ವಾರ್ತೆ ಹನೂರು
ಸಂಕಷ್ಟದಲ್ಲಿರುವ ರೈತನಿಗೆ ನೆರವಾಗುವುದೇ ಕರ್ನಾಟಕ ರಾಜ್ಯ ರೈತ ಸಂಘಟನೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಸರ್ವೋದಯ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಸನ್ನ ಗೌಡ ತಿಳಿಸಿದರು. ತಾಲೂಕಿನ ಗಡಿಯಂಚಿನ ಹೊಗ್ಯ ಗ್ರಾಪಂ ವ್ಯಾಪ್ತಿಯ ನೆಲ್ಲೂರು ಗ್ರಾಮದಲ್ಲಿ ನೂತನ ಗ್ರಾಮ ಘಟಕ ಉದ್ಘಾಟನೆ ಮಾಡಿ ಗಿಡಕ್ಕೆ ನೀರು ಹಾಕುವುದರ ಮೂಲಕ ಸಂಘಟನೆಗೆ ಶುಭ ಹಾರೈಸಿ ಮಾತನಾಡಿದರು. ಸಂಕಷ್ಟದಲ್ಲಿರುವ ರೈತನ ಸಮಸ್ಯೆ ತಿಳಿದು ನೊಂದವರ ಧ್ವನಿಯಾಗುವುದೇ ಕರ್ನಾಟಕ ರಾಜ್ಯ ರೈತ ಸಂಘಟನೆ ಉದ್ದೇಶವಾಗಿದೆ. ಒಗ್ಗಟ್ಟಾಗಿ ಇದ್ದರೆ ನಮ್ಮ ಸಮಸ್ಯೆಗಳನ್ನು ಸಂಘಟನೆಯ ಮೂಲಕ ಬಗೆಹರಿಸಿಕೊಳ್ಳಬೇಕು. ಸಂಘದ ತಾಲೂಕು ಅಧ್ಯಕ್ಷ ಹಾಗೂ ಕಾರ್ಯದರ್ಶಿ ಸಂಷಟನೆಯ ಎರಡು ಕಣ್ಣಿದಂತೆ ಗ್ರಾಮ ಘಟಕ ಚೆನ್ನಾಗಿದ್ದರೆ ತಾಲೂಕು, ಜಿಲ್ಲಾ ರಾಜ್ಯ ಘಟಕಗಳು ಚೆನ್ನಾಗಿರುತ್ತದೆ. ಇದು ವ್ಯಕ್ತಿ ಆಧಾರಿತ ಸಂಘಟನೆಯಲ್ಲ. ಎಲ್ಲ ರೈತ ಸಂಘಟನೆಯಿಂದ ಹೋರಾಟದ ಫಲವಾಗಿ ಸಮಸ್ಯೆಗಳನ್ನು ಜನಪ್ರತಿನಿಧಿ ಮತ್ತು ಅಧಿಕಾರಿಗಳಿಗೆ ತಿಳಿಸುವ ಮೂಲಕ ಪರಿಹಾರ ಕಂಡುಕೊಳ್ಳಬೇಕು ಎಂದು ತಿಳಿಸಿದರು.ಜಿಲ್ಲಾ ಉಪಾಧ್ಯಕ್ಷ ಗೌಡೆ ಗೌಡ ಮಾತನಾಡಿ, ಕಟ್ಟಕಡೆಯ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳಿಂದ ನಲುಗಿರುವ ಜನತೆ ಹಾಗೂ ರೈತರಿಗೆ ಸಂಘಟನೆ ಸಾಧಕ ಬಾಧಕಗಳನ್ನು ತಿಳಿದು ಸಂಬಂಧಪಟ್ಟ ಅಧಿಕಾರಿಗಳ ಜೊತೆ ಮಾತನಾಡಿ ಬಗೆಹರಿಸುವ ನಿಟ್ಟಿನಲ್ಲಿ ಸಂಘಟನೆ ಮುಂದುವರಿಯಬೇಕು. ಕರ್ನಾಟಕ ರಾಜ್ಯ ರೈತ ಸಂಘಟನೆ ಯಾವುದೇ ರಾಜಕೀಯ ಸರ್ಕಾರ ಇದ್ದರೂ ವಿರೋಧ ಪಕ್ಷವಾಗಿ ರೈತರ ಸಂಘಟನೆ ಕೆಲಸ ಮಾಡುತ್ತದೆ ಎಂದು ತಿಳಿಸಿದರು.ಹನೂರು ತಾಲೂಕು ಘಟಕ ಅಧ್ಯಕ್ಷ ಅಮ್ಜದ್ ಖಾನ್ ಮಾತನಾಡಿ, ಸಂಘಟನೆ ಯಾವ ರೀತಿ ಕೆಲಸ ಮಾಡಬೇಕು ಎಂದು ತಿಳಿಸುತ್ತದೆ ಈ ಸಂಘದಲ್ಲಿ ಅಧ್ಯಕ್ಷರ ಪಾತ್ರ ಬಹಳ ಮುಖ್ಯವಾಗಿದೆ ಎಂದರು. ನಮ್ಮ ಸಮಸ್ಯೆಯನ್ನು ನಮ್ಮ ಸಂಘಟನೆಯ ಮೂಲಕ ಬಗೆಹರಿಸಿಕೊಳ್ಳಬೇಕು ರೈತರು ಬೆಳೆದ ಬೆಳೆಗಳನ್ನು ಕಾಡು ಪ್ರಾಣಿಗಳು ನಾಶಪಡಿಸಿದರೆ ಅದಕ್ಕೆ ಪರಿಹಾರ ಕಂಡುಕೊಳ್ಳುವ ಮೂಲಕ ಕೆಲಸ ಮಾಡಬೇಕಾಗುತ್ತದೆ ಕಟ್ಟಕಡೆಯ ಗ್ರಾಮಗಳ ಅರಣ್ಯದಂಚಿನ ಗ್ರಾಮಗಳಲ್ಲಿ ರೈತರು ಹಲವಾರು ಸಮಸ್ಯೆಗಳಿಂದ ಕಾಡು ಪ್ರಾಣಿಗಳ ಹಾವಳಿಯಿಂದ ನಲುಗಿದ್ದಾರೆ ಸಂಬಂಧಪಟ್ಟ ಅರಣ್ಯ ಇಲಾಖೆ ಇತ್ತ ಗಮನ ಹರಿಸಿ ರೈತರಿಗೆ ಸೂಕ್ತ ಪರಿಹಾರ ನೀಡುವುದರ ಜೊತೆಗೆ ಕಾಡುಪ್ರಾಣಿಗಳ ಹಾವಳಿಯನ್ನು ತಡೆಹಿಡಿಯಬೇಕು ಎಂದರು. ಇದೇ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಶಾಂತ ಮಲ್ಲಪ್ಪ, ಕೊಳ್ಳೇಗಾಲ ತಾಲೂಕು ಅಧ್ಯಕ್ಷ ಶಿವಮಲ್ಲು, ಚಾಮರಾಜನಗರ ಜಿಲ್ಲಾ ಕಾಯಂ ಸದಸ್ಯ ರವೀನಾಡು, ಗೌರವಾಧ್ಯಕ್ಷ ರಾಜಣ್ಣ, ರೈತ ಮುಖಂಡರಾದ ಪಾಪಣ್ಣ, ಅರ್ಪಿದರಾಜ್, ಸೂರ್ಯ ಹಾಗೂ ವಿವಿಧ ಗ್ರಾಮದ ಮುಖಂಡರು ಉಪಸ್ಥಿತರಿದ್ದರು.