ಸವಲತ್ತುಗಳನ್ನು ಪಡೆಯುವಲ್ಲಿ ರೈತ ಸಂಘ ಯಶಸ್ವಿ: ಸೋಮಗುದ್ದುರಂಗಸ್ವಾಮಿ

| Published : Jun 25 2024, 12:39 AM IST

ಸವಲತ್ತುಗಳನ್ನು ಪಡೆಯುವಲ್ಲಿ ರೈತ ಸಂಘ ಯಶಸ್ವಿ: ಸೋಮಗುದ್ದುರಂಗಸ್ವಾಮಿ
Share this Article
  • FB
  • TW
  • Linkdin
  • Email

ಸಾರಾಂಶ

ಸುಮಾರು ೪೦ ವರ್ಷಗಳಿಂದ ತಾಲೂಕಿನಾದ್ಯಂತ ರೈತರನ್ನು ಜಾಗೃತಿಗೊಳಿಸಿ ಹೋರಾಟದ ಮೂಲಕ ಸವಲತ್ತುಗಳನ್ನು ಪಡೆಯುವಲ್ಲಿ ನಮ್ಮ ರೈತ ಸಂಘ ಯಶಸ್ವಿಯಾಗಿದೆ. ಇದರಿಂದ ಸಾವಿರಾರು ರೈತರಿಗೆ ನೆರವು ಸಿಕ್ಕಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳ ಬಗ್ಗೆ ಧೋರಣೆ ತಾಳಿರುವುದು ನೋವಿನ ಸಂಗತಿ ಎಂದು ಅಖಂಡ ಕರ್ನಾಟಕ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮಗುದ್ದುರಂಗಸ್ವಾಮಿ ತಿಳಿಸಿದರು.

ಕನ್ನಡಪ್ರಭವಾರ್ತೆ ಚಳ್ಳಕೆರೆ

ಸುಮಾರು ೪೦ ವರ್ಷಗಳಿಂದ ತಾಲೂಕಿನಾದ್ಯಂತ ರೈತರನ್ನು ಜಾಗೃತಿಗೊಳಿಸಿ ಹೋರಾಟದ ಮೂಲಕ ಸವಲತ್ತುಗಳನ್ನು ಪಡೆಯುವಲ್ಲಿ ನಮ್ಮ ರೈತ ಸಂಘ ಯಶಸ್ವಿಯಾಗಿದೆ. ಇದರಿಂದ ಸಾವಿರಾರು ರೈತರಿಗೆ ನೆರವು ಸಿಕ್ಕಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳ ಬಗ್ಗೆ ಧೋರಣೆ ತಾಳಿರುವುದು ನೋವಿನ ಸಂಗತಿ ಎಂದು ಅಖಂಡ ಕರ್ನಾಟಕ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮಗುದ್ದುರಂಗಸ್ವಾಮಿ ತಿಳಿಸಿದರು. ನಗರದ ರೋಟರಿ ಬಾಲಭವನದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ತಾಲೂಕು ಘಟಕ ಸಭೆಯಲ್ಲಿ ಭಾಗವಹಿಸಿ ನೂತನ ಪದಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಇದೇ ಸಂದರ್ಭದಲ್ಲಿ ರೈತಸಂಘವನ್ನು ಗ್ರಾಮೀಣ ಭಾಗದ ಜನರತ್ತ ಕೊಂಡೊಯುವ ನಿಟ್ಟಿನಲ್ಲಿ ಚಳ್ಳಕೆರೆ ತಾಲೂಕು ಹಾಗೂ ಪರಶುರಾಮಪುರ ಹೋಬಳಿ ಮಟ್ಟದಲ್ಲಿ ರೈತ ಸಂಘದ ಪದಾಧಿಕಾರಿಗಳ ಆಯ್ಕೆಯನ್ನು ನಡೆಸಲಾಯಿತು. ರೈತ ಸಂಘದ ತಾಲೂಕು ಅಧ್ಯಕ್ಷರಾಗಿ ಜಾಜೂರಿನ ಎಚ್.ಗಿರೀಶ್‌ ರೆಡ್ಡಿ, ಪ್ರಧಾನ ಕಾರ್ಯದರ್ಶಿಯಾಗಿ ಸಾಧಿಕ್‌ ಸೂರನಹಳ್ಳಿ, ಪರಶುರಾಮಪುರ ಹೋಬಳಿ ಅಧ್ಯಕ್ಷರಾಗಿ ಎಸ್.ಎಚ್.ಪರಶುರಾಮ್, ಪ್ರಧಾನ ಕಾರ್ಯದರ್ಶಿಯಾಗಿ ಹರವಿಗೊಂಡನಹಳ್ಳಿ ಎಚ್.ಎಂ. ಗಿರಿಧರಮೂರ್ತಿ, ಸಂಘಟನಾ ಕಾರ್ಯದರ್ಶಿಯಾಗಿ ಪಿ.ಎಚ್.ತಿಪ್ಪೇಸ್ವಾಮಿರವರನ್ನು ಆಯ್ಕೆ ಮಾಡಲಾಯಿತು.ನೂತನ ಅಧ್ಯಕ್ಷ ಎಚ್.ಗಿರೀಶ್‌ ರೆಡ್ಡಿ ಮಾತನಾಡಿ, ಅಖಂಡ ಕರ್ನಾಟಕ ರೈತ ಸಂಘ ಕಳೆದ ಹಲವಾರು ವರ್ಷಗಳಿಂದ ಉತ್ತಮ ಹೋರಾಟದಿಂದ ರೈತರ ಮನಸ್ಸುನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಅನೇಕ ಕ್ಲಿಷ್ಟ ಸಂದರ್ಭದಲ್ಲಿ ಸಂಸ್ಥಾಪಕ ಅಧ್ಯಕ್ಷ ಸೋಮಗುದ್ದು ರಂಗಸ್ವಾಮಿ ಮಾರ್ಗದರ್ಶನದಲ್ಲಿ ಹೋರಾಟ ನಡೆಸಿದ್ದೇವೆ. ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿ ಅಧ್ಯಕ್ಷ ಬಸವರಾಜು ಅಳಗವಾಡಿ, ಪ್ರಧಾನ ಕಾರ್ಯದರ್ಶಿ ಸಿದ್ದಪ್ಪ ಹಳಿಯೂರು, ಹಿರಿಯ ಮುಖಂಡ ಕೃಷ್ಣಮೂರ್ತಿ, ಕರಿಯಣ್ಣ, ಎಸ್. ರುದ್ರಮುನಿಯಪ್ಪ, ತಿಪ್ಪೇಸ್ವಾಮಿ, ವೆಂಕಟೇಶ್, ರಾಜಣ್ಣ, ಮಂಜಣ್ಣ ಮುಂತಾದವರು ಭಾಗವಹಿಸಿದ್ದರು.

೨೪ಸಿಎಲ್‌ಕೆ೩ಚಳ್ಳಕೆರೆ ನಗರದ ರೋಟರಿ ಬಾಲಭವನದಲ್ಲಿ ಅಖಂಡ ಕರ್ನಾಟಕ ರೈತ ಸಂಘದ ತಾಲೂಕು ಘಟಕ ಸಭೆಯಲ್ಲಿ ಅಖಂಡ ಕರ್ನಾಟಕ ರೈತ ಸಂಘದ ಸಂಸ್ಥಾಪಕ ಅಧ್ಯಕ್ಷ ಸೋಮಗುದ್ದು ರಂಗಸ್ವಾಮಿ ಮಾತನಾಡಿದರು.