ಸಾರಾಂಶ
ರಾಜ್ಯಪಾಲರ ನಡೆ ಖಂಡಿಸಿ ವಿಜಯಸಿಂಗ ನೇತೃತ್ವದಲ್ಲಿ ಕಾಂಗ್ರೆಸ್ ಪ್ರತಿಭಟನೆ ಬಸವಕಲ್ಯಾಣ:
ಸಿಎಂ ಸಿದ್ದರಾಮಯ್ಯನವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುನತಿ ನೀಡಿದ ರಾಜ್ಯಪಾಲರ ನೀಲುವನ್ನು ಖಂಡಿಸಿ ಕಾಂಗ್ರೆಸ್ ಪಕ್ಷದ ವಿವಿಧ ಘಟಕಗಳ ಮುಖಂಡರು, ಕಾರ್ಯಕರ್ತರು ಸಾವಿರಾರು ಸಂಖ್ಯೆಯಲ್ಲಿ ಸೇರಿ ಘೋಷಣೆ ಕೂಗಿದರು.ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ವಿಜಯಸಿಂಗ ನೇತೃತ್ವದಲ್ಲಿ ನಗರದ ಗಾಂಧಿ ವೃತ್ತದಿಂದ ಡಾ.ಅಂಬೇಡ್ಕರ ವೃತ್ತದವರೆಗೆ ಮೆರವಣಿಗೆ ನಡೆಸಿ ಡಾ.ಅಂಬೇಡ್ಕರ ವೃತ್ತದಲ್ಲಿ ರಾಜ್ಯಪಾಲರ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದರು.ಈ ವೇಳೆ ತಾಲೂಕ ಕಾಂಗ್ರೆಸ್ ಅಧ್ಯಕ್ಷ ನೀಲಕಂಠ ರಾಠೋಡ ಮಾತನಾಡಿ, ರಾಜ್ಯಪಾಲ ಬಿಜೆಪಿ ಪಕ್ಷದ ಪರವಾಗಿ ಕೆಲಸ ಮಾಡಿದ್ದಾರೆ. ಹತ್ತಾರು ಆರೋಪಗಳನ್ನು ಹೊತ್ತಿರುವ ಟಿ.ಜೆ ಅಬ್ರಾಹಿಂ ನೀಡಿರುವ ದೂರಿನ ಮೇಲೆ ಮುಖ್ಯಮಂತ್ರಿಗಳ ಮೇಲೆ ಪ್ರಾಸಿಕ್ಯೂಷನಗೆ ಅನುಮತಿ ನೀಡಿದ್ದು ದುರುದ್ದೇಶ ಪೂರಿತವಾಗಿದೆ. ರಾಜಭವನವು ಬಿಜೆಪಿಯ ಕಚೇರಿಯಾಗಿ ಮಾರ್ಪಟ್ಟಿದೆ ಕಾನೂನು ರಕ್ಷಣೆ ಮಾಡಬೇಕಾದ ರಾಜ್ಯಪಾಲರು ತಮ್ಮ ಕರ್ತವ್ಯ ಮರೆತು ಏಕಪಕ್ಷಿಯವಾಗಿ ನಿರ್ಧಾರ ಕೈಗೊಂಡಿದ್ದು ತಾಲೂಕ ಕಾಂಗ್ರೆಸ್ ತೀವ್ರವಾಗಿ ಖಂಡಿಸುತ್ತದೆ ಎಂದರು.
ಈ ಸಂದರ್ಭದಲ್ಲಿ ರಾಜ್ಯಪಾಲರ ನಡೆಯ ವಿರುದ್ಧ ರಾಷ್ಟ್ರಪತಿಗಳಿಗೆ ಬರೆದ ಮನವಿ ಪತ್ರವನ್ನು ತಹಸೀಲ್ದಾರ ಮುಖಾಂತರ ಸಲ್ಲಿಸಲಾಯಿತು.ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಅಜರಲಿ ನವರಂಗ, ತಾಲೂಕ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರ್ಜುನ ಕನಕ, ಶಿವಕುಮಾರ ಬಿರಾದಾರ, ರವಿಕೊಳಕುರ, ಮಲ್ಲಿಕಾರ್ಜುನ ಬೊಕ್ಕೆ, ರಾಮ ಜಾಧವ, ಖಲೀಲ ಮುಂತಾದವರು ಪಾಲ್ಗೊಂಡಿದ್ದರು.