ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ನಿಭಾಯಿಸಲು ಪೂರ್ವಭಾವಿ ಸಿದ್ಧತೆಯಾಗಿ, ಇಲ್ಲಿನ ಮಲ್ಪೆಯ ರಾಜ್ ಫಿಶ್ ಮೀಲ್ ಕಂಪನಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವತಿಯಿಂದ ಮಾಕ್ ಡ್ರಿಲ್ ನಡೆಸಲಾಯಿತು.

ಉಡುಪಿ: ಮಳೆಗಾಲದಲ್ಲಿ ಸಂಭವಿಸಬಹುದಾದ ಅವಘಡಗಳನ್ನು ನಿಭಾಯಿಸಲು ಪೂರ್ವಭಾವಿ ಸಿದ್ಧತೆಯಾಗಿ, ಇಲ್ಲಿನ ಮಲ್ಪೆಯ ರಾಜ್ ಫಿಶ್ ಮೀಲ್ ಕಂಪನಿಯಲ್ಲಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ವತಿಯಿಂದ ಮಾಕ್ ಡ್ರಿಲ್ ನಡೆಸಲಾಯಿತು. ಫಿಶ್ ಮೀಲ್ ಕಂಪೆನಿಯಲ್ಲಿ ಅಗ್ನಿ ಅನಾಹುತವಾಗಿದೆ ಎಂಬ ಸುದ್ದಿಗೆ ಸ್ಪಂದಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕ್ಷಿಪ್ರವಾಗಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಿಯಂತ್ರಣ, ಸಿಲುಕಿದ್ದವರ ರಕ್ಷಣೆ ಸುರಕ್ಷತಾ ಕ್ರಮಗಳ ಪ್ರಾತ್ಯಕ್ಷಿಕೆ ನಡೆಸಿದರು. ಈ ಕಾರ್ಯಾಚರಣೆಯಲ್ಲಿ ಸಿಬ್ಬಂದಿಯ ಸನ್ನದ್ಧತೆ ಮತ್ತು ವಿವಿಧ ಇಲಾಖೆಗಳ ನಡುವಿನ ಸಮನ್ವಯವನ್ನು ಪರೀಕ್ಷಿಸಲಾಯಿತು. ರಾಜ್ಯಾದ್ಯಂತ ಏಕಕಾಲದಲ್ಲಿ ಆಯೋಜಿಸಲಾದ ಮಾಕ್ ಡ್ರಿಲ್‌ನ ಭಾಗವಾಗಿತ್ತು. ಉಡುಪಿ ಹಾಗೂ ಮಲ್ಪೆ ಅಗ್ನಿಶಾಮಕ ಠಾಣೆಗಳ ಸಿಬ್ಬಂದಿ ಈ ಅಭ್ಯಾಸದಲ್ಲಿ ಭಾಗವಹಿಸಿದರು.

ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳ ಮಾರ್ಗದರ್ಶನದಲ್ಲಿ ನಡೆದ ಈ ಮಾಕ್ ಡ್ರಿಲ್ ಮೂಲಕ ಸಂಸ್ಥೆಯ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.